ಆಧ್ಯಾತ್ಮದತ್ತ ಶೋಭಾ ಚಿತ್ತ?
Team Udayavani, Nov 24, 2018, 6:05 AM IST
ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಅವರು ಅಧ್ಯಾತ್ಮದತ್ತ ಹೆಚ್ಚು ಆಕರ್ಷಿತರಾಗುತ್ತಿರುವುದು ಕ್ರಮೇಣ ಅವರು ಸಕ್ರಿಯ ರಾಜಕೀಯದಿಂದ ವಿಮುಖರಾಗುತ್ತಿದ್ದಾರೆಯೇ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ಶೋಭಾ ಕರಂದ್ಲಾಜೆ ಅವರ ರಾಜಕೀಯ ಚಟುವಟಿಕೆಗಳು ತುಸು ಕಡಿಮೆಯಾಗಿವೆ ಎಂಬ ಮಾತುಗಳಿವೆ. ಕಳೆದ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸ ಬಯಸಿದರೂ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಸ್ಪರ್ಧಿಸದೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಆ ಸಂದರ್ಭದಲ್ಲೂ ಹಿಂದಿನಷ್ಟು ಆಕ್ರಮಣಕಾರಿ ಮಾತುಗಳನ್ನಾಡಿದ್ದು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದು ಬಹಳ ಕಡಿಮೆ.
ಈ ನಡುವೆ ಅಧ್ಯಾತ್ಮ ಗುರುಗಳ ಭೇಟಿ, ಅಧ್ಯಾತ್ಮ ಕೇಂದ್ರಗಳಿಗೆ ಪ್ರವಾಸ ಕೈಗೊಳ್ಳುವುದು, ಅಧ್ಯಾತ್ಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಮುಂದುವರಿದಿದೆ. ಹಾಗಾಗಿ ಕ್ರಮೇಣ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದಾರೆಯೇ ಎಂಚಿ ಬಗ್ಗೆ ಚರ್ಚೆ ಶುರುವಾಗಿದೆ. ಇದು ರಾಜಕೀಯ ವಲಯದಲ್ಲೂ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ಸಂಪರ್ಕಿಸಿದ “ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ, “ಅಧ್ಯಾತ್ಮ ನನಗೆ ಮೊದಲಿನಿಂದಲೂ ಆಸಕ್ತಿಕರ ಕ್ಷೇತ್ರ. ಹಾಗಾಗಿ ಸಹಜವಾಗಿಯೇ ಆ ಕ್ಷೇತ್ರದ ಬಗ್ಗೆ ಹೆಚ್ಚು ಆಕರ್ಷಣೆ ಇರುತ್ತದೆ. ಹಾಗೆಂದು ರಾಜಕೀಯ ತೊರೆಯುವ ಪ್ರಶ್ನೆ ಇಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್
ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್
ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ
ರಾಗಿ ಖರೀದಿ ಟೋಕನ್ ನೀಡುವಲ್ಲಿ ತಾರತಮ್ಯ : ಆಕ್ರೋಶಿತ ರೈತರಿಂದ ಹೆದ್ದಾರಿ ತಡೆ
ಕೋವಿಡ್ ನಿಯಮ ಉಲ್ಲಂಘನೆ: ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್