ಕಾಂಗ್ರೆಸ್‌ ಮುಖಂಡನ ಕೊಲೆಯತ್ನ! ಹೆಲ್ಮೆಟ್‌ ಧರಿಸಿ ಮಚ್ಚಲ್ಲಿ ಹೊಡೆದ ಮುಸುಕುಧಾರಿಗಳು

Team Udayavani, Dec 10, 2019, 9:34 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸಿದ್ದಾಪುರದ ಸೋಮೇಶ್ವರ ನಗರದಲ್ಲಿ ಹಾಡಹಗಲೇ ಸೈಯದ್‌ ರಿಯಾಜ್‌ (37) ಎಂಬವರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ದುಷ್ಕರ್ಮಿಗಳ ಹಲ್ಲೆಯಿಂದ ಗಾಯಗೊಂಡಿರುವ ಸೈಯದ್‌ ಅವರು ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಪ್ರಾಣಾಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯವಾಗಿ ಕಾಂಗ್ರೆಸ್‌ ಮುಖಂಡನಾಗಿ ಗುರುತಿಸಿಕೊಂಡಿರುವ ಸೈಯದ್‌ ಅವರು ಸ್ವಯಂ ಸೇವಾ ಸಂಸ್ಥೆಯೊಂದನ್ನು (ಎನ್‌ಜಿಒ) ನಡೆಸುತ್ತಿದ್ದಾರೆ. ಸೋಮವಾರ ಮಧ್ಯಾಹ್ನ 3.50ರ ಸುಮಾರಿಗೆ ಸೋಮೇಶ್ವರ ನಗರದಲ್ಲಿರುವ ತಮ್ಮ ಮನೆಗೆ ಊಟಕ್ಕೆ ಆಗಮಿಸಿದ್ದರು.

ಮನೆ ಮುಂದೆ ಬೈಕ್‌ ನಿಲ್ಲಿಸುತ್ತಲೇ ಎರಡು ಬೈಕ್‌ಗಳಲ್ಲಿ ಹೆಲ್ಮೆಟ್‌ ಧರಿಸಿಕೊಂಡು ಬಂದಿದ್ದ ನಾಲ್ವರು ಏಕಾಏಕಿ ಮಚ್ಚು ಸಹಿತ ಇತರ ಮಾರಕಾಸ್ತ್ರಗಳಿಂದ ಸೈಯದ್‌ ತಲೆಗೆ ಹೊಡೆದು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಸೈಯದ್‌ನ ಕಿರುಚಾಟ ಕೇಳಿ ಮನೆಯಲ್ಲಿದ್ದ ಪತ್ನಿ ಮತ್ತು ಅಕ್ಕ-ಪಕ್ಕದ ನಿವಾಸಿಗಳು ಓಡಿ ಬಂದಿದ್ದು, ರಕ್ತದ ಮಡುವಿನಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಯದ್‌ ರಿಯಾಜ್‌ ಅವರ ದೂರು ಆಧರಿಸಿ ಕೊಲೆಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಾವ ಕಾರಣಕ್ಕೆ ಕೊಲೆ ನಡೆದಿರಬಹುದು ಎಂಬುದು ಗೊತ್ತಾಗಿಲ್ಲ. ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...