ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನ ಕೊಲೆ
Team Udayavani, Apr 23, 2019, 4:06 AM IST
ಬೆಂಗಳೂರು: ರಾಬರಿ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಯುವಕನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ಜೆ.ಸಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ವಿಘ್ನೇಶ್ (22) ಕೊಲೆಯಾದ ಯುವಕ.
ಹಳೆವೈಷಮ್ಯ ಹಿನ್ನೆಲೆಯಲ್ಲಿ ವಿಘ್ನೇಶ್ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಜೆ.ಸಿ ನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆಬೀಸಿದ್ದಾರೆ.
ಆರ್.ಕೆ.ಬ್ಲಾಕ್ ನಿವಾಸಿಯಾಗಿರುವ ವಿಘ್ನೇಶ್ ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಗುಂಡಪ್ಪ ಬ್ಲಾಕ್ನ ಗಂಗಾಭವಾನಿ ದೇವಾಲಯ ಸಮೀಪ ಸ್ನೇಹಿತನ ಜತೆ ನಡೆದುಕೊಂಡು ಹೋಗುತ್ತಿದ್ದಾಗ ಐದಾರು ಯುವಕರಿದ್ದ ಗುಂಪು ಅಡ್ಡಗಟ್ಟಿದ್ದು, ಏಕಾಏಕಿ ಮಾರಕಾಸ್ತ್ರಗಳಿಂದ ವಿಘ್ನೇಶ್ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಕತ್ತು ಕುಯ್ದು ಪರಾರಿಯಾಗಿದೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಿಘ್ನೇಶ್, ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಜೆ.ಸಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಹಾಗೂ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ರಾಬರಿ ಪ್ರಕರಣದಲ್ಲಿ ಆರೋಪಿಯಾಗಿದ್ದ. ಹಳೇ ವೈಷಮ್ಯದಿಂದ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್