20ರಂದು ಬಾಂಬ್‌ ನಾಗ ಶರಣಾಗತಿ?

Team Udayavani, Apr 17, 2017, 11:59 AM IST

bomb-naaga.jpg

ಬೆಂಗಳೂರು: ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆ ಪ್ರಕರಣದಲ್ಲಿ ತಲೆಮರೆಸಿ­ಕೊಂಡಿರುವ ನಾಗರಾಜ್‌ ಅಲಿಯಾಸ್‌ ಬಾಂಬ್‌ ನಾಗ ತಮಿಳುನಾಡಿನ “ಶಿಪ್‌ಯಾರ್ಡ್‌’ವೊಂದರಲ್ಲಿ ಅಡಗಿಕೊಂಡಿ­ದ್ದಾನೆ ಎಂಬ ಮಾಹಿತಿ ಬಹಿರಂಗ­ಗೊಂಡಿದೆ. ಈನಡುವೆ ಪೊಲೀಸರ ಕಾರ್ಯಾ­ಚರಣೆ ಗತಿ ಕಂಡು ಆತಂಕಕ್ಕೊಳ­ಗಾಗಿರುವ ನಾಗ, ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿ, ಏ.20ರಂದು ನಗರಕ್ಕೆ ಬಂದು ತಾನೇ ಪೊಲೀಸರಿಗೆ ಶರಣಾಗುವುದಾಗಿ ಹೇಳಿದ್ದಾನೆ ಎನ್ನಲಾಗಿದೆ.

ಏ.14ರಂದು ಪೊಲೀಸರ ದಾಳಿಯ ಮುನ್ಸೂಚನೆ ಪಡೆದಿದ್ದ ಆರೋಪಿ ನಾಗರಾಜ್‌ ಒಂದು ದಿನ ಮೊದಲೇ ತಮಿಳುನಾಡಿನ ಧರ್ಮಪುರಿಗೆ ಓಡಿ ಹೋಗಿದ್ದಾನೆ. ಬಳಿಕ ತನ್ನ ಸಂಬಂಧಿಕರು ಹಾಗೂ ಅಂತಾರಾಜ್ಯ ಮಟ್ಟದಲ್ಲಿ ಕಪ್ಪು ಹಣ ದಂಧೆ ನಡೆಸುತ್ತಿರುವ ಕೆಲ ಉದ್ಯಮಿಗಳ ಸಹಾಯ ಪಡೆದು ತನ್ನ ಮಕ್ಕಳೊಂದಿಗೆ ಶಿಪ್‌ಯಾರ್ಡ್‌ನಲ್ಲಿ ರಹಸ್ಯವಾಗಿ ನೆಲೆಸಿದ್ದಾನೆ. ಈ ನಡುವೆ ಪೊಲೀಸರು ಬಂಧಿಸುವ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ವಕೀಲರನ್ನು ಸಂಪರ್ಕಿಸಿದ್ದಾನೆ ಎನ್ನಲಾಗಿದೆ. 

ಮತ್ತೂಂದೆಡೆ ನಾಗರಾಜ್‌ಗಾಗಿ ಹುಡುಕಾಟ ಆರಂಭಿಸಿರುವ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡಿನ ರಾಣಿಪೇಟ್‌ಗೆ ತೆರಳಿದೆ. ಆದರೆ, ಶನಿವಾರದವರೆಗೆ ಆರೋಪಿಗಳ ಲೋಕೇಷನ್‌ ರಾಣಿಪೇಟ್‌ನಲ್ಲಿ ಪತ್ತೆಯಾಗುತ್ತಿತ್ತು. ಭಾನುವಾರ ಬೇರೆಡೆಯೇ ತೋರಿಸುತ್ತಿದೆ. ಹೀಗೆ ನಿತ್ಯ ತನ್ನ ಸ್ಥಳವನ್ನು ಆರೋಪಿ ಬದಲಾಯಿಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

“ಶಿಪ್‌ಯಾರ್ಡ್‌’ನಲ್ಲೇ ವ್ಯವಹಾರ: ಮೂಲತಃ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ನಾಗರಾಜ್‌, ಕೆಲ ಸ್ಥಳೀಯ ಉದ್ಯಮಿಗಳ ಸಂಪರ್ಕ ಹೊಂದಿದ್ದ. ಹಾಗೇ ಕೆಲ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆಕೋರರ ಜತೆಯೂ ವ್ಯವಹಾರ ನಡೆಸುತ್ತಿದ್ದ. ಹಾಗಾಗಿ ಡಿಸೆಂಬರ್‌ನಿಂದಲೇ ಈತ ಅಮಾನ್ಯಗೊಂಡ ನೋಟುಗಳ ಬದಲಾವಣೆಯಲ್ಲಿ ತೊಡಗಿದ್ದ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ರಾಜಕೀಯ ಮುಖಂಡರು, ಉದ್ಯಮಿಗಳ ಕಪ್ಪು ಹಣವನ್ನು ಶೇ.25ರಷ್ಟು ಕಮಿಷನ್‌ ಆಧಾರದ ಮೇಲೆ ಬದಲಾವಣೆ ಮಾಡಿಕೊಡುತ್ತಿದ್ದ.

ಹಾಗೇ ನೋಟುಗಳ ಬದಲಾವಣೆಗೆ ಬಂದ ಉದ್ಯಮಿಗಳಿಗೆ ಬೆದರಿಸಿ ಸಂಗ್ರಹಿಸಿಟ್ಟಿದ್ದ ಕೋಟ್ಯಂತರ ರೂ. ಮೌಲ್ಯದ ಹಳೇ ನೋಟುಗಳನ್ನು ತಮಿಳುನಾಡಿನ ಶಿಪ್‌ಯಾರ್ಡ್‌ಗಳಿಗೆ ಕೊಂಡೊಯ್ದು ಅಂತಾರಾಜ್ಯ ದಂಧೆಕೋರರ ಮೂಲಕ ಶೇ.30ರಷ್ಟು ಕಮಿಷನ್‌ಗೆ ಬದಲಾವಣೆ ಮಾಡಿಕೊಳ್ಳುತ್ತಿದ್ದ. ಇದಕ್ಕಾಗಿಯೇ ತಮಿಳುನಾಡು ಹಾಗೂ ರಾಜ್ಯದ ಬಹಳಷ್ಟು ಜನ ಅನಿವಾಸಿ ಭಾರತೀಯರನ್ನು ಸಂಪರ್ಕಿಸಿ ಅವರಿಗೂ ಶೇಕಡಾ ಪ್ರಮಾಣದಲ್ಲಿ ಕಮಿಷನ್‌ ಕೊಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪೊಲೀಸರು ಕಾರ್ಯಾಚರಣೆಯಿಂದ ಆತಂಕಗೊಂಡಿರುವ ಆರೋಪಿ ನಾಗರಾಜ್‌, ಏ.20ರಂದು ಶರಣಾಗುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

ವಕೀಲರ ಸಂಪರ್ಕ
ಪೊಲೀಸರು ಬಂಧನಕ್ಕೆ ಮುಂದಾಗುವ ಮೊದಲೇ ನಿರೀಕ್ಷಣಾ  ಜಾಮೀನು ಪಡೆಯಲು ತನ್ನ ಸಂಬಂಧಿಕರ ಮೂಲಕ ವಕೀಲರನ್ನು ಸಂಪರ್ಕಿಸಿದ್ದಾನೆ ಎನ್ನಲಾಗಿದೆ. ಆದರೆ, ಈಗಾಗಲೇ ಆರೋಪಿ ನಾಗನ ಪ್ರತಿ ಚಲನ ವಲನಗಳ ಬಗ್ಗೆ ನಿಗಾವಹಿಸಿರುವ ಪೊಲೀಸರು ಸದ್ಯದಲ್ಲೇ ಆತನನ್ನು ಬಂಧಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

13

Accused Arrest: ಶಾಲಾ ಆವರಣದಲ್ಲಿ ಕೊಲೆ ಪ್ರಕರಣ; ಆರೋಪಿ ಬಂಧನ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವೇಶ ನಿಷೇಧ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Online ಗೇಮ್‌ ಚಟಕ್ಕೆ ಬಿಎಸ್‌ಸಿ ಮೊದಲ ವರ್ಷದ ವಿದ್ಯಾರ್ಥಿನಿ ಬಲಿ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

13

Accused Arrest: ಶಾಲಾ ಆವರಣದಲ್ಲಿ ಕೊಲೆ ಪ್ರಕರಣ; ಆರೋಪಿ ಬಂಧನ

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

12

Online ಗೇಮ್‌ ಚಟಕ್ಕೆ ಬಿಎಸ್‌ಸಿ ಮೊದಲ ವರ್ಷದ ವಿದ್ಯಾರ್ಥಿನಿ ಬಲಿ

11-

Yadagiri: ಬಾಲ್ಯ ವಿವಾಹ ವಿರುದ್ಧ ಹೋರಾಡೋಣ: ಶಾಸಕ ಕಂದಕೂರು ಕರೆ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವೇಶ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.