28ರವರೆಗೆ ನಲಪಾಡ್ ನ್ಯಾಯಾಂಗ ಬಂಧನ
Team Udayavani, May 25, 2018, 11:52 AM IST
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಮೊಹಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯ ಮೇ 28ಕ್ಕೆ ಮುಂದೂಡಿದೆ.
ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಹಿನ್ನೆಲೆಯಲ್ಲಿ, ಮೊಹಮದ್ ನಲಪಾಡ್ ಜಾಮೀನು ಕೋರಿ ಮತ್ತೂಮ್ಮೆ ಸೆಷನ್ಸ್ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆಯನ್ನು ಗುರುವಾರ ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
ಜಾಮೀನು ಅರ್ಜಿ ಸಂಬಂಧ ವಿಶೇಷ ಅಭಿಯೋಜಕ ಶ್ಯಾಮ್ಸುಂದರ್ ಅಕ್ಷೇಪಣೆ ಸಲ್ಲಿಸಿದರು.ಕೆಲಕಾಲ ವಾದ -ಪ್ರತಿವಾದ ಆಲಿಸಿದ ನ್ಯಾಯಾಲಯ, ಮೇ28ಕ್ಕೆ ವಿಚಾರಣೆ ಮುಂದೂಡಿ ನಲಪಾಡ್ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಿತು.
ಫೆ. 17ರಂದು ರಾತ್ರಿ ಫರ್ಜಿ ಕೆಫೆಯಲ್ಲಿ ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ನಲಪಾಡ್ ಹಾಗೂ ಆತನ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಕಳೆದ ಮೂರು ತಿಂಗಳಿನಿಂದ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅಧೀನ ನ್ಯಾಯಾಲಯ ಹಾಗೂ ಹೈಕೋರ್ಟ್ನಲ್ಲಿ ತಿರಸ್ಕೃತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ