27 ರಂದು ನಳಿನ್ ಕುಮಾರ್ ಕಟೀಲ್ ಪದಗ್ರಹಣ
Team Udayavani, Aug 25, 2019, 11:26 AM IST
ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಇದೇ 27 ರ ಮಂಗಳವಾರದಂದು ನಡೆಯಲಿದೆ.
ರಾಜ್ಯ ಬಿಜೆಪಿ ಕಛೇರಿ ಜಗನ್ನಾಥ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ.
ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನ ಕಾರಣದಿಂದ ಇಂದು ನಡೆಯಬೇಕಿದ್ದ ಪದಗ್ರಹಣ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.