ಅಂ.ರಾ. ಸಿರಿಧಾನ್ಯ ವರ್ಷಕ್ಕೆ ಕರ್ನಾಟಕ ಅತ್ಯುತ್ತಮ ಚಾಲನೆ: ತೋಮರ್‌


Team Udayavani, Jan 22, 2023, 10:56 PM IST

ಅಂ.ರಾ. ಸಿರಿಧಾನ್ಯ ವರ್ಷಕ್ಕೆ ಕರ್ನಾಟಕ ಅತ್ಯುತ್ತಮ ಚಾಲನೆ: ತೋಮರ್‌

ಬೆಂಗಳೂರು: ಸಿರಿಧಾನ್ಯ ಮತ್ತು ಸಾವಯವದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸುವ ಮೂಲಕ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷಕ್ಕೆ ಕರ್ನಾಟಕ ಅತ್ಯುತ್ತಮವಾಗಿ ಚಾಲನೆ ನೀಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಶ್ಲಾ ಸಿದ್ದಾರೆ.

ಅರಮನೆ ಮೈದಾನ ತ್ರಿಪುರ ವಾಸಿನಿಯಲ್ಲಿ ಕೃಷಿ ಇಲಾಖೆಯ ಮುಂದಾಳತ್ವದಲ್ಲಿ ಜ.20ರಿಂದ 3 ದಿನಗಳ ಕಾಲ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ – 2023 ಅಂತಾರಾಷ್ಟ್ರೀಯ ವಾಣಿಜ್ಯ ಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಿರಿಧಾನ್ಯಗಳನ್ನು ಉತ್ತೇಜಿಸಲು ಕರ್ನಾಟಕ ಸರಕಾರ ಜಾರಿಗೆ ತಂದಿರುವ ರೈತ ಸಿರಿ ಮಾದರಿ ಕಾರ್ಯಕ್ರಮ. ಸಿರಿಧಾನ್ಯಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ರಾಜ್ಯವು ಏಷ್ಯಾದಲ್ಲೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ರಾಜ್ಯದ ಕೃಷಿ ಸಚಿವ ಬಿ. ಸಿ. ಪಾಟೀಲ್‌ ಮಾತನಾಡಿ, ಸಿರಿಧಾನ್ಯ ಮೇಳವನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸಲಾಗಿದೆ. 203 ಕೋಟಿ ರೂ. ಮೌಲ್ಯದ 43 ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಮೂರು ದಿನಗಳಲ್ಲಿ ಒಂದೂವರೆ ಲಕ್ಷಕ್ಕಿಂತ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. 250ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿತ್ತು ಎಂದು ಹೇಳಿದರು.

ಸಮಾರೋಪ ಸಮಾರಂಭದಲ್ಲಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ಉತ್ತರ ಪ್ರದೇಶದ ಕೃಷಿ ಸಚಿವ ದಿನೇಶ್‌ ಪ್ರತಾಪ್‌ ಸಿಂಗ್‌, ಶಿಕ್ಷಣ ಸಚಿವ ಸೂರ್ಯ ಪ್ರತಾಪ್‌ ಶಾಹಿ ಮುಂತಾದವರು ಪಾಲ್ಗೊಂಡಿದ್ದರು.

ಒಡಂಬಡಿಕೆಗಳಿಗೆ ಸಹಿ
ಮೇಳದಲ್ಲಿ ಸುಮಾರು 202 ಕೋಟಿ ರೂ. ಮೌಲ್ಯದ 43 ಒಡಂಬಡಿಕೆಗಳಿಗೆ ಸಹಿ ಹಾಕಲಾಗಿದೆ. 139 ಸಭೆಗಳು ನಡೆದಿದೆ. ದೇಶ ವಿದೇಶಗಳ 68 ಮಾರುಕಟ್ಟೆದಾರರು, 59 ಉತ್ಪಾದಕರು ಭಾಗಿಯಾಗಿದ್ದಾರೆ. ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದಾರೆ. 19,214 ಮೆಟ್ರಿಕ್‌ ಟನ್‌ ಉತ್ಪನ್ನಗಳ ವಹಿವಾಟು ನಡೆದಿದೆ.
ಸಿರಿಧಾನ್ಯ ಮತ್ತು ಸಿರಿಧಾನ್ಯ ವರ್ಧಿತ ಉತ್ಪನ್ನಗಳಿಗೆ ಗರಿಷ್ಠ ಮಾರುಕಟ್ಟೆ ಲಭಿಸಿದೆ. ಉಳಿದಂತೆ ಕ್ರಮವಾಗಿ ಸಾಂಬಾರು ಪದಾರ್ಥಗಳು, ಬೇಳೆಕಾಳು, ಬೆಲ್ಲ ಮತ್ತು ಬೆಲ್ಲದ ಉತ್ಪನ್ನಗಳು, ಎಣ್ಣೆ ಮತ್ತು ಎಣ್ಣೆಕಾಳುಗಳಿಗೆ ಹೆಚ್ಚಿನ ಮಾರುಕಟ್ಟೆ ಲಭಿಸಿದೆ. ದಾವಣಗೆರೆ, ಬಾಗಲಕೋಟೆ, ಕೋಲಾರ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳು ಗರಿಷ್ಠ ವಹಿವಾಟು ನಡೆಸಿವೆ.

ಟಾಪ್ ನ್ಯೂಸ್

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

congress flag

Karnataka: ಸಾಮಾಜಿಕ ಸಮಾನತೆ, ಪ್ರಾದೇಶಿಕ ಅಸಮಾನತೆ

SIDDARAMAYYA 1

ಆದಷ್ಟು ಶೀಘ್ರದಲ್ಲಿ ಗ್ಯಾರಂಟಿ ಜಾರಿ ನಿಶ್ಚಿತ : CM ಸಿದ್ದರಾಮಯ್ಯ

headlight

ನಿಯಮ ಬಾಹಿರ ಹೆಡ್‌ಲೈಟ್‌ಗಳ ಬಳಕೆ ವ್ಯಾಪಕ

congress flag

Karnataka: ಹಾಲಿ ಸಚಿವರ ಅವಧಿ ಕೇವಲ ಎರಡೂವರೆ ವರ್ಷವೇ?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು