ಕನ್ನಡದಲ್ಲೂ ನೀಟ್: ಕೇಂದ್ರ ಸರಕಾರ ಅವಕಾಶ
Team Udayavani, Feb 23, 2017, 9:33 AM IST
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಸಿಬಿಎಸ್ಇ ನಡೆಸುವ ರಾಷ್ಟ್ರೀಯ ಏಕರೂಪ ಅರ್ಹತಾ ಪರೀಕ್ಷೆ (ನೀಟ್)ಯನ್ನು ಕನ್ನಡದಲ್ಲೂ ನಡೆಸಲು ಕೇಂದ್ರ ಸರಕಾರ ಅವಕಾಶ ನೀಡಿದ್ದು, ವಿದ್ಯಾರ್ಥಿಗಳು ಕನ್ನಡದಲ್ಲೂ ನೀಟ್ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕನ್ನಡದಲ್ಲಿ ನೀಟ್ ತೆಗೆದು ಕೊಳ್ಳಲಿಚ್ಛಿಸುವವರಿಗೆ ಕನ್ನಡದಲ್ಲೂ ಅಗತ್ಯ ಪಠ್ಯಪರಿಕರ ಸಿದ್ಧಪಡಿಸಲು ಹಾಗೂ ತರಬೇತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದರು. ಸಾಮಾನ್ಯ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತರಲು ಕರ್ನಾಟಕ ರಾಜ್ಯ ವೃತ್ತಿ ಪರ ಕೋರ್ಸ್ಗಳ ಪ್ರವೇಶ ಕಾಯ್ದೆಗೆ ತಿದ್ದುಪಡಿ ತರಬೇಕಾಗುತ್ತದೆ. ಸರಕಾರವಂತೂ ಸಾಮಾನ್ಯ ಕೌನ್ಸೆಲಿಂಗ್ ಜಾರಿಗೆ ಪ್ರಯತ್ನ ನಡೆಸುತ್ತಿದೆ ಎಂದರು.
ತಜ್ಞರ ಸಮಿತಿ ರಚನೆ: ಎಂಜಿನಿಯರಿಂಗ್ ಪದವಿ ಪಠ್ಯಕ್ರಮ
ಪರಿಷ್ಕರಣೆ ಸಹಿತ ಮತ್ತಿತರ ವಿಚಾರಗಳ ಅಗತ್ಯತೆ ಪರಿಶೀಲನೆಗೆ ತಜ್ಞರ ಸಮಿತಿ ರಚಿಸುವ ಚಿಂತನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…