ಬಾಡಿಗೆ ಸಂಗ್ರಹಕ್ಕೆ ಪಾಲಿಕೆ ನಿರ್ಲಕ್ಷ್ಯ

Team Udayavani, Jul 25, 2018, 12:03 PM IST

badige.jpg

ಬೆಂಗಳೂರು: ಬಿಬಿಎಂಪಿ ಒಡೆತನದ ಮಾರುಕಟ್ಟೆಗಳಿಂದ ಪಾಲಿಕೆಗೆ ಬಾಡಿಗೆ ರೂಪದಲ್ಲಿ 90.77 ಕೋಟಿ ರೂ. ಸಂಗ್ರಹವಾಗಬೇಕಿದ್ದು, ಕಾಂಗ್ರೆಸ್‌-ಜೆಡಿಎಸ್‌ ಆಡಳಿತ ಪಾಲಿಕೆಯ ಆದಾಯ ಮೂಲಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಪಾಲಿಕೆಯ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯ ಪೂರ್ವ, ಪಶ್ಚಿಮ ಹಾಗೂ ದಕ್ಷಿಣ ವಲಯಗಳಲ್ಲಿ 116 ಮಾರುಕಟ್ಟೆಗಳು ಪಾಲಿಕೆಯ ಒಡೆತನದಲ್ಲಿದ್ದು, ಅಲ್ಲಿನ 5,910 ಮಳಿಗೆಗಳಿಂದ ವಾರ್ಷಿಕ 32.65 ಕೋಟಿ ರೂ. ಆದಾಯ ಬರಬೇಕಿದೆ.

ಪ್ರಸಕ್ತ ಸಾಲಿನ ಆದಾಯ ಹಾಗೂ ಬಾಕಿ ಬಾಡಿಗೆ ಸೇರಿ ಪಾಲಿಕೆಗೆ ಒಟ್ಟು 90.77 ಕೋಟಿ ರೂ. ಸಂಗ್ರಹವಾಗಬೇಕಿದೆ. ಆದರೆ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಆದಾಯ ಸಂಗ್ರಹವಾಗುತ್ತಿಲ್ಲ ಎಂದು ದೂರಿದರು.

ಮಾರುಕಟ್ಟೆ ವಿಭಾಗದಿಂದ ವಾರ್ಷಿಕ ಪಾಲಿಕೆಗೆ 32.65 ಕೋಟಿ ರೂ. ಬಾಡಿಗೆ ಸಂಗ್ರಹವಾಗಬೇಕು. ಆದರೆ, ಪ್ರಸಕ್ತ ಸಾಲಿನಲ್ಲಿ ಈವರೆಗೆ 3.58 ಕೋಟಿ ರೂ. ಮಾತ್ರ ಬಾಡಿಗೆ ಸಂಗ್ರಹಿಸಲಾಗಿದೆ. ಬಾಕಿ ರೂಪದಲ್ಲಿ ಇನ್ನೂ 90 ಕೋಟಿಯಷ್ಟು ಹಣ ಬರಬೇಕಿದ್ದರೂ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಾಲಿಕೆಯ ಆದಾಯ ಮೂಲಗಳನ್ನು ಬಲಪಡಿಸುವ ಕೆಲಸಕ್ಕೆ ಮುಂದಾಗಿಲ್ಲ ಎಂದರು.

ಜಯನಗರ ಶಾಪಿಂಗ್‌ ಕಾಂಪ್ಲೆಕ್ಸ್‌, ಲಕ್ಕಸಂದ್ರ ಮಾರುಕಟ್ಟೆ, ಜಯನಗರ 2ನೇ ಬ್ಲಾಕ್‌ ಮಾರುಕಟ್ಟೆ, ಗಾಂಧಿಬಜಾರ್‌, ಕಲಾಸಿಪಾಳ್ಯ ಮಾರುಕಟ್ಟೆ ಸೇರಿ ಸಾವಿರಾರು ಮಳಿಗೆಗಳಿಂದ 90 ಕೋಟಿ ರೂ. ಬಾಕಿ ಬರಬೇಕಿದೆ.

ಜತೆಗೆ 200ಕ್ಕೂ ಹೆಚ್ಚು ವ್ಯಾಪಾರಿಗಳು ಈವರೆಗೆ ಬಾಡಿಗೆಯನ್ನೇ ಪಾವತಿಸದಿದ್ದರೂ, ಅವರಿಂದ ಮಳಿಗೆಗಳನ್ನು ಪಾಪಸ್‌ ಪಡೆಯಲು ಅಧಿಕಾರಿಗಳು ಮುಂದಾಗದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಸಂಶಯ ವ್ಯಕ್ತಪಡಿಸಿದರು.

ಈಗಾಗಲೇ ವೇತನ ನೀಡಿಲ್ಲವೆಂದು ಪೌರಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ನೌಕರರು ಹಾಗೂ ಸಿಬ್ಬಂದಿಗೂ ವೇತನ ಪಾವತಿಯಾಗಿಲ್ಲ. ಇದರೊಂದಿಗೆ ಗುತ್ತಿಗೆದಾರರಿಗೆ ಹಲವು ವರ್ಷಗಳಿಂದ ಬಿಲ್‌ ಪಾವತಿಸಿಲ್ಲ.

ಹೀಗಿದ್ದರೂ ಪಾಲಿಕೆಯ ಆದಾಯ ಮೂಲಗಳನ್ನು ನಿರ್ಲಕ್ಷಿಸುತ್ತಿರುವುದೇಕೆ? ಒಂದೊಮ್ಮೆ ಮೇಯರ್‌ ಆರ್‌.ಸಂಪತ್‌ರಾಜ್‌ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಸ್ವಂತ ಕಟ್ಟಡಗಳಾಗಿದ್ದರೆ, ಬಾಡಿಗೆ ವಸೂಲಿ ಮಾಡದೆ ಬಿಡುತ್ತಿದ್ದರೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.