ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ಶವ ಪತ್ತೆ

Team Udayavani, May 2, 2019, 3:06 AM IST

showchalaya

ಬೆಂಗಳೂರು: ಬಾಣಸವಾಡಿಯ ಕೆಎಸ್‌ಎಫ್ಸಿ ಲೇಔಟ್‌ನಲ್ಲಿರುವ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಮಗುವಿನ ಪೋಷಕರಿಗಾಗಿ ಹುಡುಕಾಟ ನಡೆಯುತ್ತಿದ್ದು, ಕಟ್ಟಡ ಮಾಲೀಕರು, ಬಾಡಿಗೆದಾರರು ಹಾಗೂ ಮಹಿಳೆಯರ ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.

ಕೆಎಸ್‌ಎಫ್ಸಿ ಲೇಔಟ್‌ನ ಆಯಿಲ್‌ ಮಿಲ್‌ ರಸ್ತೆಯಲ್ಲಿ ಲೋಕೇಶ್‌ ಎಂಬವರಿಗೆ ಸೇರಿದ ಎರಡು ಅಂತಸ್ತಿನ ಕಟ್ಟಡದಲ್ಲಿ ಸುಮಾರು ಐದಕ್ಕೂ ಹೆಚ್ಚು ಮನೆಗಳಿವೆ. ಮೊದಲ ಅಂತಸ್ತಿನಲ್ಲಿ ಕಾಮನ್‌ ಟಾಯ್ಲೆಟ್‌ ಇದ್ದು, ಇದನ್ನು ಯಾರೂ ಅಷ್ಟಾಗಿ ಬಳಸುವುದಿಲ್ಲ.

ಈ ಮಧ್ಯೆ ಮೂರು ದಿನಗಳ ಹಿಂದೆ, ನವಜಾತ ಶಿಶುವನ್ನು ಯಾರೋ ಶೌಚಾಲಯದಲ್ಲಿ ಮಲಗಿಸಿ, ಬಾಗಿಲ ಚಿಲಕ ಹಾಕಿಕೊಂಡು ಪರಾರಿಯಾಗಿದ್ದಾರೆ. ಮಂಗಳವಾರ ಸಂಜೆ ಆರು ಗಂಟೆ ಸುಮಾರಿಗೆ ಶೌಚಾಲಯದಿಂದ ದುರ್ವಾಸನೆ ಬರುತ್ತಿತ್ತು. ಇದನ್ನು ಗಮನಿಸಿದ ಬಾಡಿಗೆದಾರರು ಮಾಲೀಕರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಮಾಲೀಕ ಲೋಕೇಶ್‌ ಶೌಚಾಲಯದ ಬಾಗಿಲು ತೆರೆದಾಗ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಆತಂಕಗೊಂಡ ಅವರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲಿಸಿ, ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪರೀಕ್ಷಿಸಿದ ವೈದ್ಯರು ಮೂರು ದಿನಗಳ ಹಿಂದೆಯೇ ಮಗುವಿನ ಜನನವಾಗಿದ್ದು, ಉಸಿರುಗಟ್ಟಿ ಮೃತಪಟ್ಟಿರುವುದಾಗಿ ದೃಢಪಡಿಸಿದರು ಎಂದು ಪೊಲೀಸರು ಹೇಳಿದರು. ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವಜಾತ ಹೆಣ್ಣು ಶಿಶು ಪತ್ತೆ: ಮತ್ತೂಂದು ಪ್ರಕರಣದಲ್ಲಿ ನವಜಾತ ಹೆಣ್ಣು ಶಿಶುವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋದ ಘಟನೆ ಮಂಗಳವಾರ ತಡರಾತ್ರಿ ಕೆ.ಪಿ.ಅಗ್ರಹಾರದ 24ನೇ ಕ್ರಾಸ್‌ನಲ್ಲಿ ನಡೆದಿದೆ.

ತಡರಾತ್ರಿ ಮಗು ಅಳುವುದನ್ನು ಕೇಳಿ, ಹೊರಗೆ ಬಂದ ಪಕ್ಕದ ಮನೆಯವರು, ಮಗು ನೋಡಿ ಸ್ಥಳೀಯರನ್ನು ಎಚ್ಚರಿಸಿ ವಿಚಾರಿಸಿದ್ದಾರೆ. ಆದರೆ, ಯಾರಿಂದಲೂ ಸರಿಯಾದ ಪ್ರತಿಕ್ರಿಯೆ ಬಂದಿಲ್ಲ.

ನಂತರ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೂಡ ಕೊಡಿಸಿದ್ದಾರೆ. ಬುಧವಾರ ಮಧ್ಯಾಹ್ನ ಈ ವಿಚಾರ ತಿಳಿದ ಕೆ.ಪಿ.ಅಗ್ರಹಾರ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಮಗುವನ್ನು ವಶಕ್ಕೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಿಕಿತ್ಸೆ ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸುಪರ್ದಿಗೆ ಕೊಡಲಾಗುವುದು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕೆ.ಪಿ.ಅಗ್ರಹಾರ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.