ಇಂದು ಸಾಲ ಮನ್ನಾ ಆದೇಶ ಅನುಮಾನ
Team Udayavani, Aug 24, 2018, 6:00 AM IST
ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾ ಆದೇಶ ಶುಕ್ರವಾರ ಹೊರಬೀಳುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.
ಆ.9 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಷ್ಟ್ರಿಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾದ ಬಗ್ಗೆ ಚರ್ಚಿಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಘೋಷಣೆ ಮಾಡುವುದಾಗಿ ಹೇಳಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಅನುಮಾನ ಎಂದು ಹೇಳಲಾಗುತ್ತಿದೆ.
ಶುಕ್ರವಾರದ ಸಭೆಯಲ್ಲಿ ರೈತರು ಮಾಡಿದ ಸಾಲ ಮನ್ನಾ ಕುರಿತ ವಿಚಾರ ಚರ್ಚೆಗೆ ಬರುತ್ತದೋ, ಇಲ್ಲವೋ ಗೊತ್ತಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಲ ಮನ್ನಾ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಶೀಘ್ರದಲ್ಲೇ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ. ಸಾಲ ಮನ್ನಾ ಆದೇಶ ವಿಳಂಬವಾದರೂ ರೈತರಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.