ಬೆಂವಿವಿ: ಪ್ರವೇಶ ಪರೀಕ್ಷೆ ಇಲ್ಲ

ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಪರೀಕ್ಷೆ ಕಡಿತ

Team Udayavani, Oct 9, 2020, 11:52 AM IST

ಬೆಂವಿವಿ: ಪ್ರವೇಶ ಪರೀಕ್ಷೆ ಇಲ್ಲ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶ ಪರೀಕ್ಷೆ ನಡೆಸದೇ ಅಂಕಗಳ ಆಧಾರದಲ್ಲಿ ಸ್ನಾತಕೋತ್ತರ ಪ್ರವೇಶ ಪ್ರಕ್ರಿಯೆ ನಡೆಸಲು ಬೆಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸುತ್ತಿದೆ.

ಪದವಿಯ ನಂತರ ಸ್ನಾತಕೋತ್ತರ ಪದವಿಗೆ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆಯಾ ವಿಭಾಗಗಳಲ್ಲಿ ಮಾಡಲಾಗುತ್ತದೆ. ಪದವಿಯಲ್ಲಿ ಗಳಿಸಿದ ಅಂಕ, ಮೀಸಲಾತಿ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕದ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಪ್ರಕಟಿಸಲಾಗುತ್ತದೆ. ಅದರಂತೆ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಮಾಡಿ, ದಾಖಲಾತಿ ಪ್ರಕ್ರಿಯೆ ನಡೆಸಲಾಗುತಿತ್ತು. ಆದರೆ,2020-21ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ದಾಖಲಾತಿ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುವುದರಿಂದ ಪ್ರವೇಶ ಪರೀಕ್ಷೆ ಬದಲಿಗೆ, ಕೇವಲ ಪದವಿ ಅಂಕಗಳ ಆಧಾರದಲ್ಲಿ ರೋಸ್ಟರ್‌ ಪದ್ಧತಿ ಅನುಸಾರ ಸೀಟು ಹಂಚಿಕೆಗೆ ಬೆಂವಿವಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

2019-20ನೇ ಸಾಲಿನ ಪದವಿ ಅಂತಿಮ ವರ್ಷ ಅಥವಾ ಸೆಮಿಸ್ಟರ್‌ ಕೋರ್ಸ್‌ಗಳ ಪರೀಕ್ಷೆ ಅಂತಿಮ ಹಂತದಲ್ಲಿದ್ದು,ಇನ್ನೆರಡು ಪರೀಕ್ಷೆಗಳು ಬಾಕಿಯಿದೆ. ಇದಾದ ನಂತರ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ಮೌಲ್ಯ ಮಾಪನದ ನಂತರ ಫ‌ಲಿತಾಂಶ ಪ್ರಕಟಿಸಲಾಗುತ್ತದೆ. ಅಂತಿಮ ಸೆಮಿಸ್ಟರ್‌ ಪದವಿ ಫ‌ಲಿತಾಂಶ ಪ್ರಕಟಿಸಿದ ನಂತರ ಸರ್ಕಾರದ ಮಾರ್ಗಸೂಚಿ ಮತ್ತು ಅನುಮತಿಯಂತೆ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ  ಆರಂಭವಾಗಲಿದೆ ಎಂದು ಬೆಂವಿವಿ ಆಡಳಿತ ಮಂಡಳಿಯ ಉನ್ನತ ಮೂಲ ಖಚಿತಪಡಿಸಿದೆ.

ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕೋವಿಡ್ ಆಂತಕದ ನಡುವೆ ಈಗಷ್ಟೇ ಪರೀಕ್ಷೆ ಪೂರ್ಣಗೊಳಿಸುತ್ತಿದ್ದಾರೆ. ಕೋವಿಡ್ ಪರಿಸ್ಥಿತಿಯು ಅಷ್ಟೊಂದು ಸಮರ್ಪಕವಾಗಿಲ್ಲದೇ ಇರುವುದರಿಂದ ಪ್ರವೇಶ ಪರೀಕ್ಷೆ ಮಾಡದೇ ಇರುವುದು ಒಳ್ಳೆಯದು ಎಂಬ ಅಭಿಪ್ರಾಯ ಬೆಂವಿವಿ ಆಡಳಿತ ಮಂಡಳಿಯಲ್ಲಿ ಬಂದಿದೆ. ಪ್ರವೇಶ ಪರೀಕ್ಷೆಗೆ ಪ್ರತ್ಯೇಕ ವ್ಯವ‌ಸ್ಥೆ ಮಾಡಬೇಕಾಗುತ್ತದೆ. ಕೋವಿಡ್ ಸೋಂಕಿತ ಅಭ್ಯರ್ಥಿಗಳಿದ್ದರೆ ಅವರಿಗೆ ಪ್ರತ್ಯೇಕ ಕೊಠಡಿ, ಪಿಪಿಇ ಕಿಟ್‌ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಪ್ರವೇಶ ‌ಪರೀಕ್ಷೆಯ ಜತೆಗೆಗ ‌ ಅಭ್ಯರ್ಥಿಗಳ ಆರೋಗ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆಯಿದೆ.

ವಿಭಾಗವಾರು ಪ್ರವೇಶ ‌ ಪರೀಕ್ಷೆ ಮಾಡಬೇಕಿರುವುದರಿಂದ ಸಿಬ್ಬಂದಿ ಕೊರತೆಯೂ ಎದುರಾಗಬಹುದು. ಹೀಗಾಗಿ ಪ್ರವೇಶ ‌ಪರೀಕ್ಷೆ ಮಾಡದೇ ಅಂಕದ ‌ ಆಧಾರದಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ನೀಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಬೆಂವಿವಿ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸರ್ಕಾರದ ಅನುಮತಿ ಅಗತ್ಯ :  ಬೆಂವಿವಿ ವ್ಯಾಪ್ತಿಯಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಅಂತಿಮ ವರ್ಷದ ಪದವಿ ಪರೀಕ್ಷೆಗಳು ಅಂತಿಮ ಹಂತದಲ್ಲಿದ್ದು, ಫ‌ಲಿತಾಂಶದ ನಂತರ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ. ಆದರೆ, ಪದವಿ ಅಥವಾ ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸಲು ಸರ್ಕಾರದ ಅನುಮತಿ ಬೇಕು. ಸರ್ಕಾರದ ಅನುಮತಿಯಿಲ್ಲದೇ ತರಗತಿ ನಡೆಸಲು ಸಾಧ್ಯವಿಲ್ಲ. ಆನ್‌ಲೈನ್‌ ತರಗತಿಗಳನ್ನು ಮಾತ್ರ ನಡೆಸಲು ಸಾಧ್ಯ. ಆನ್‌ಲೈನ್‌ ತರಗತಿಗೆ ತಾಂತ್ರಿಕ ದೋಷವೂ ಎದುರಾಗುತ್ತಿರುತ್ತದೆ ಎಂದು ಬೆಂವಿವಿ ಮೂಲಗಳು ತಿಳಿಸಿವೆ.

ಕೋವಿಡ್  ವ್ಯಾಪಕತೆಯ ಜತೆಗೆ ಶೈಕ್ಷಣಿಕ ವರ್ಷವಿಳಂಬವಾಗಿ ಆರಂಭವಾಗುತ್ತಿರುವುದರಿಂದಈ ವರ್ಷ ಪ್ರವೇಶ ಪರೀಕ್ಷೆ ಮಾಡದೇ ಇರಲು ಚಿಂತನೆ ನಡೆಸಿದ್ದೇವೆ. ನವೆಂಬರ್‌ 15ರ ತನಕ ಪ್ರಥಮ ಸೆಮಿಸ್ಟರ್‌ ಸ್ನಾತಕೋತ್ತರ ಕೋರ್ಸ್‌ಗಳು ಆರಂಭವಾಗಬಹುದು. -ಪ್ರೊ.ಕೆ.ಆರ್‌.ವೇಣುಗೋಪಾಲ್‌, ಕುಲಪತಿಬೆಂವಿವಿ

 

ರಾಜುಖಾರ್ವಿ ಕೊಡೇರಿ

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.