ಹೆಲ್ಮೆಟ್ ಇಲ್ಲಾಂದ್ರೆ ಪೆಟ್ರೋಲೂ ಇಲ್ಲ!

Team Udayavani, Jul 27, 2019, 7:45 AM IST

BNG-TDY-4

ಸಾಂದರ್ಭಿಕ ಚಿತ್ರ

ಬೆಂಗಳೂರು: ‘ಅಪಘಾತಗಳಿಂದ ಉಂಟಾಗುವ ಪ್ರಾಣಹಾನಿ ತಪ್ಪಿಸುವ ಉದ್ದೇಶದಿಂದ ಬೆಂಗಳೂರು ನಗರ ಸಂಚಾರ ಪೊಲೀಸರು ‘ನೋ ಹೆಲ್ಮೆಟ್ ನೋ ಪೆಟ್ರೋಲ್’ ನಿಯಮ ಜಾರಿಗೆ ತರಲು ಗಂಭೀರ ಚಿಂತನೆ ನಡೆಸಿದ್ದಾರೆ.

ಹೆಲ್ಮೆಟ್ ರಹಿತ ಬೈಕ್‌ ಚಾಲನೆಯಿಂದ ಉಂಟಾಗುತ್ತಿರುವ ಜೀವ ಹಾನಿ, ಗಂಭೀರ ಗಾಯಗಳಿಂದ ಬಳಲುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ, ಹೆಲ್ಮೆಟ್ ಕಡ್ಡಾಯವಾಗಿ ಧರಿಸುವ ನಿಯಮ ಪಾಲನೆಯಾಗಲು ‘ ನೋ ಹೆಲ್ಮೆಟ್ ನೋ ಪೆಟ್ರೋಲ್’ ನಿಯಮ ಜಾರಿಗೆ ಪೊಲೀಸರು ಮುಂದಾಗಿದ್ದಾರೆ. ಈ ಕುರಿತ ಪ್ರಕ್ರಿಯೆಗಳನ್ನು ಸಂಚಾರ ಪೊಲೀಸ್‌ ವಿಭಾಗ ಸದ್ದಿಲ್ಲದೆ ಆರಂಭಿಸಿದೆ.

ಒಂದು ವೇಳೆ ನಿಯಮ ಜಾರಿಯಾದರೆ ದೆಹಲಿಯ ನೋಯ್ಡಾ ಹಾಗೂ ಉತ್ತರಪ್ರದೇಶದ ಆಲಿಘರ್‌ ನಗರಗಳ ಬಳಿಕ ಈ ನಿಯಮ ಜಾರಿಗೊಳಿಸಿದ ಮೂರನೇ ನಗರ ಎಂಬ ಕೀರ್ತಿಗೆ ಬೆಂಗಳೂರು ಪಾತ್ರವಾಗಲಿದೆ.

ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ನೀಡದಂತೆ ಬೆಂಗಳೂರು ನಗರದ ಪೆಟ್ರೋಲ್ ಬಂಕ್‌ಗಳ ಮಾಲೀಕರ ಬಳಿ ಸಭೆ ನಡೆಸಬೇಕಿದೆ. ಅವರ ಸಹಕಾರವೂ ಇದಕ್ಕೆ ಮುಖ್ಯವಾಗಲಿದೆ. ಈ ಕುರಿತು ಸಭೆಗಳನ್ನು ನಡೆಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಚಾರ ವಿಭಾಗದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. ಇದೇ ವರ್ಷ ಜನವರಿ 1ರಿಂದ ಜೂನ್‌ ಅಂತ್ಯಕ್ಕೆ ನಗರದಲ್ಲಿ ಉಂಟಾದ ಬೈಕ್‌ ಅಪಘಾತಗಳಲ್ಲಿ 105 ಮಂದಿ ಬೈಕ್‌ ಸವಾರರು ಮೃತಪಟ್ಟಿದ್ದಾರೆ. 667 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಲ್ಮೆಟ್ ಧರಿಸಿ ಬೈಕ್‌ ಚಾಲನೆ ಕಡ್ಡಾಯ ಮೋಟಾರು ವಾಹನ ಕಾಯಿದೆಯಲ್ಲಿ ಕಡ್ಡಾಯವಾಗಿದೆ. ಆದರೂ, ಕೆಲವರು ನಿಯಮ ಉಲ್ಲಂಘಿಸಿ ದಂಡ ಪಾವತಿಸುತ್ತಾರೆ. ಹೀಗಾಗಿ ‘ ನೋ ಹೆಲ್ಮೆಟ್ ನೋ ಪೆಟ್ರೋಲ್ ‘ ನಿಯಮ ಸಹಕಾರಿಯಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ಹೇಳಿದರು.

ನಿಯಮ ಜಾರಿ ಬಗ್ಗೆ ‘ಉದಯವಾಣಿ ‘ ಜತೆ ಮಾತನಾಡಿದ ಸಂಚಾರ ಪೊಲೀಸ್‌ ಆಯುಕ್ತ ಪಿ. ಹರಿಶೇಖರನ್‌, ‘ ನೋ ಹೆಲ್ಮೆಟ್ – ನೋ ಪೆಟ್ರೋಲ್’ ನಿಯಮ ಸಾಮಾಜಿಕ ಬದ್ಧತೆಯ ನಿಯಮದ ಅಡಿಯಲ್ಲಿ ರೂಪಿತಗೊಳ್ಳುವಂತಹದ್ದು. ಬೈಕ್‌ ಅಪಘಾತಗಳಿಂದ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಈ ನಿಯಮ ಮಹತ್ವದ್ದಾಗಿದೆ. ನಿಯಮದ ರೂಪುರೇಷೆ ಬಗ್ಗೆ ಪೆಟ್ರೋಲ್ ಬಂಕ್‌ಗಳ ಮಾಲೀಕರ ಜತೆ ಚರ್ಚೆ ನಡೆಸಬೇಕಿದೆ. ಬಳಿಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರು ಪೆಟ್ರೋಲಿಯಂ ವಿತರಕರ ಸಂಘದ ಅಧ್ಯಕ್ಷ ಬಿ. ಆರ್‌ ರವೀಂದ್ರನಾಥ್‌ ‘ನೋ ಹೆಲ್ಮೆಟ್ ನೋ ಪೆಟ್ರೋಲ್’ ನಿಯಮ ಜಾರಿ ಬಗ್ಗೆ ಸಂಚಾರ ಪೊಲೀಸರು ಅಧಿಕೃತವಾಗಿ ಸಭೆ ಕರೆದಿಲ್ಲ. ಸಭೆ ಬಳಿಕ ಅದರ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ಉದಯವಾಣಿಗೆ ಅಭಿಪ್ರಾಯ ತಿಳಿಸಿದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.