ಬಡ ಮಕ್ಕಳಿಗೆ ಲ್ಯಾಪ್‌ಟಾಪ್‌ ಸದ್ಯಕ್ಕಿಲ್ಲ

ಪ್ರತಿ ಲ್ಯಾಪ್‌ಟಾಪ್‌ಗೆ 59,999 ರೂ. ನೀಡಲು ಮುಂದಾದ ಬಿಬಿಎಂಪಿ ಸದಸ್ಯರು

Team Udayavani, Aug 25, 2020, 12:09 PM IST

ಬಡ ಮಕ್ಕಳಿಗೆ ಲ್ಯಾಪ್‌ಟಾಪ್‌ ಸದ್ಯಕ್ಕಿಲ್ಲ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಾಲಿಕೆ ಸದಸ್ಯರ ವಿಶೇಷ ಅನುದಾನದಡಿ ಬಡ ವಿದ್ಯಾರ್ಥಿಗಳಿಗೆ ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ನೀಡುವ ವಿಚಾರದಲ್ಲೂ ಈಗ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬೆನ್ನಲ್ಲೇ ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ಖರೀದಿ ಪ್ರಕ್ರಿಯೆ ತಾತ್ಕಾಲಿಕವಾಗಿ ತಡೆಹಿಡಿಯಲು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಮೌಖೀಕ ಆದೇಶ ನೀಡಿದ್ದಾರೆ.

ಕೋವಿಡ್ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಆನ್‌ಲೈನ್‌ ಶಿಕ್ಷಣ ಪ್ರಾರಂಭವಾಗಿದ್ದು, ನಗರದ ಬಡ ಮಕ್ಕಳಿಗೆ ಪಾಲಿಕೆ ಸದಸ್ಯರ ವಿಶೇಷ ಅನುದಾನಲ್ಲಿ ಟ್ಯಾಬ್‌ ಹಾಗೂ ಲ್ಯಾಪ್‌ ಟಾಪ್‌ ನೀಡುವ ಸಂಬಂಧ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದರಂತೆ 5-10ನೇ ತರಗತಿವರೆಗೆ ಟ್ಯಾಬ್‌ ನೀಡುವುದು ಹಾಗೂ 10ನೇ ತರಗತಿಯಿಂದ ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಸಂಬಂಧ ಕೌನ್ಸಿಲ್‌ನಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಹೀಗಾಗಿ, ಪಾಲಿಕೆ ಸದಸ್ಯರು ವಿಶೇಷ ಅನುದಾನದಡಿ ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ಖರೀದಿಗೆ ಮುಂದಾಗಿದ್ದರು. ಆದರೆ, ಸರ್ಕಾರ ಅನುಮತಿ ನೀಡಿರುವ ಕಿಯೋನಿಕ್ಸ್‌ ಸಂಸ್ಥೆಯ ಮೂಲಕವೇ ಖರೀದಿಸಲು ಪಾಲಿಕೆ ಸದಸ್ಯರು ಮುಂದಾಗಿದ್ದರು. ಆದರೂ, ಈ ಸಂಸ್ಥೆಯಲ್ಲಿ ಲ್ಯಾಪ್‌ಟಾಪ್‌ ದರ ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿರುವ ಕಾರಣ ಇದಕ್ಕೆ ತಡೆ ನೀಡಲಾಗಿದೆ ಎಂದು ಹೆಸರೇಳಲಿಚ್ಛಿಸದ ಅಧಿಕಾರಿ ಒಬ್ಬರು ಮಾಹಿತಿ ನೀಡಿದರು.

ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್‌, ಕೋವಿಡ್ ತುರ್ತು ಸಂದರ್ಭದಲ್ಲಿ ಮಕ್ಕಳಿಗೆ ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ನೀಡುವುದು ತಪ್ಪಲ್ಲ. ಬಿಬಿಎಂಪಿ ಆಯುಕ್ತರು ಮೌಖೀಕವಾಗಿ ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚನೆ ನೀಡಿದ್ದಾರೆ. ಕಿನೋನಿಕ್ಸ್‌ , ಜಂಪ್‌ಪೋರ್ಟ್‌ ಅಥವಾ ಮಾರುಕಟ್ಟೆ ದರ ನೋಡಿ, ಎಲ್ಲಿ ಕಡಿಮೆ ಇದೆಯೋ ಆ ನಿರ್ದಿಷ್ಟ ಸಂಸ್ಥೆಯಿಂದ ಖರೀದಿಸುವ ಬಗ್ಗೆ ಆಯುಕ್ತರು ಸಲಹೆ ನೀಡಿದ್ದಾರೆ. ಈ ಕುರಿತು ಶೀಘ್ರ ನಿರ್ಧಾರದ ಭರವಸೆ ನೀಡಿದ್ದಾರೆ.

ಒಂದು ಲ್ಯಾಪ್‌ಟಾಪ್‌ಗೆ 59,999! : ಸರ್ಕಾರ ಮಾನ್ಯ ಮಾಡಿರುವ ಕಿಯೋನಿಕ್ಸ್‌ ಸಂಸ್ಥೆಯಿಂದ ಯಾವುದೇ ವಸ್ತು ಖರೀದಿಸಬೇಕಾದರೆ ಮಾರುಕಟ್ಟೆ ದರ ಪರಿಶೀಲನೆ ಮಾಡಬೇಕು. ಮಾರುಕಟ್ಟೆಯ ದರಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಈ ಸಂಸ್ಥೆಯಿಂದ ಯಾವುದೇ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಇತ್ತೀಚೆಗೆ ನಡೆದ ಕೌನ್ಸಿಲ್‌ ಸಭೆಯಲ್ಲಿ ಆಯುಕ್ತರು ವಿವರ ನೀಡಿದ್ದರು. ಆದರೆ, ಪಾಲಿಕೆ ಸದಸ್ಯರು ಒಂದು ಲ್ಯಾಪ್‌ಟಾಪ್‌ಗೆ 59,999 ರೂ. ನೀಡಲು ಮುಂದಾಗಿರುವುದು ಇದೀಗ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಯಲಹಂಕ ವಲಯದಲ್ಲಿ 88 ಲ್ಯಾಪ್‌ಟಾಪ್‌ಗ್ಳನ್ನು ನೀಡಲು ನಿರ್ಧರಿಸಲಾಗಿದ್ದು, ಒಂದು ಲ್ಯಾಪ್‌ಟಾಪ್‌ಗೆ 59,999 ರೂ. ನಿಗದಿ ಮಾಡಲಾಗಿದೆ. ಒಟ್ಟಾರೆ 52.80 ಕೋಟಿ ರೂ. ಬಿಲ್‌ ಸಿದ್ಧವಾಗಿರುವುದು ಬೆಳಕಿಗೆ ಬಂದಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಸಾಧ್ಯತೆ ಇದೆ. ಹೀಗಾಗಿ, ಮಾರುಕಟ್ಟೆ ದರ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲು ಆಯುಕ್ತರು ತಿಳಿಸಿದ್ದಾರೆ ಎನ್ನಲಾಗಿದೆ.

ಬಡವರಿಗೆ ನಾವು ಏನು ಉತ್ತರ ನೀಡೋದು? : “ಈಗಾಗಲೇ ಆಯುಕ್ತರು ಜಾಬ್‌ಕೋಡ್‌ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಆದರೆ, ಈಗ ಪಾಲಿಕೆ ಸದಸ್ಯರ ವಿಶೇಷ ಅನುದಾನದಲ್ಲಿ ಕಾಮಗಾರಿ ಮಾತ್ರ ಕೈಗೆತ್ತಿಕೊಳ್ಳಬಹುದು. ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ನೀಡಲು ಬರುವುದಿಲ್ಲ ಎಂದು ಆಯುಕ್ತರು ಹೇಳಿದ್ದಾರೆ. ವಿಶೇಷ ಅನುದಾನ ಅನ್ಯ ಕಾರ್ಯಕ್ಕೆ ಬಳಸಲು ಬರುವುದಿಲ್ಲ ಎಂದಾದರೆ, ಜಾಬ್‌ಕೋಡ್‌ ನೀಡುವ ಸಂದರ್ಭದಲ್ಲೇ ನಿರ್ದೇಶನ ನೀಡಬೇಕಾಗಿತ್ತು. ಈಗ ನಾವು ಫಲಾನುಭವಿಗಳನ್ನು ಗುರುತಿಸಿದ್ದೇವೆ. ಇಂತಹ ಸಂದರ್ಭದಲ್ಲಿ ಬೇಡ ಎಂದರೆ, ನಾವು ಬಡವರಿಗೆ ಏನು ಉತ್ತರ ನೀಡಬೇಕು’ ಎಂದು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್‌. ಶ್ರೀನಿವಾಸ್‌ ಪ್ರಶ್ನಿಸಿದರು.

ಭ್ರಷ್ಟಾಚಾರ ಆರೋಪ ಕೇಳಿಬಂದರೆ ತನಿಖೆ ಮಾಡಲಿ, ಮಾರುಕಟ್ಟೆ ದರವನ್ನು ಪರಿಶೀಲನೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿ. ಶಾಸಕರು ನೀಡಬೇಕು ಎನ್ನುವ ಉದ್ದೇಶದಿಂದ ಈ ರೀತಿ ಮಾಡುತ್ತಿರುವ ಅನುಮಾನ ಇದೆ. ಅಬ್ದುಲ್‌ ವಾಜಿದ್‌, ವಿರೋಧ ಪಕ್ಷದ ನಾಯಕ, ಬಿಬಿಎಂಪಿ

ಟ್ಯಾಬ್‌, ಲ್ಯಾಪ್‌ಟಾಪ್‌ಗ್ಳನ್ನು ಪಾಲಿಕೆ ಸದಸ್ಯರ ವಿಶೇಷ ಅನುದಾನದಲ್ಲಿ ಬಳಸಿಕೊಳ್ಳಲು ಕೌನ್ಸಿಲ್‌ನಲ್ಲಿ ನಿರ್ಣಯ ತೆಗೆದುಕೊಂಡಿದ್ದಾರೆ. ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ ಮೌಲ್ಯ ಮಾರುಕಟ್ಟೆಯಲ್ಲೆಷ್ಟಿದೆ ಎಂದು ಪರಿಶೀಲಿಸಲು, ಕಾಮಗಾರಿ ಅನುದಾನ ಬಳಸಬಹುದೇ ಹಾಗೂ ಈಗ ಖರೀದಿಸಲು ಮುಂದಾಗಿರುವ ಲ್ಯಾಪ್‌ಟಾಪ್‌ ದರ ಸಹ ಹೆಚ್ಚಾಗಿದೆ. ಈ ಎಲ್ಲ ವಿಷಯಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.   ಎನ್‌. ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.