ಯಾರೂ ಶಾಶ್ವತ ಶತ್ರುಗಳಲ್ಲ; ಮಿತ್ರರೂ ಅಲ್ಲ!


Team Udayavani, May 19, 2018, 11:49 AM IST

yaaru.jpg

ಬೆಂಗಳೂರು: ರಾಜಕಾರಣದಲ್ಲಿ ಯಾರೂ ಶಾಶ್ವತ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಎಂಬುದು ರಾಜ್ಯದ ಇತ್ತೀಚೆಗಿನ ರಾಜಕೀಯ ಬೆಳವಣಿಗೆಗಳು ಸಾಬೀತು ಮಾಡಿವೆ.

ಒಂದೆಡೆ, ರಾಜಕೀಯವಾಗಿ ವಿರೋಧಿಗಳಾಗಿ ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಮಾತಿನ  ಸಮರ ಸಾರಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದಾದರೆ, ಮತ್ತೂಂದೆಡೆ, ಹಿಂದೆ ಆತ್ಮೀಯರಾಗಿ ನಂತರ ದೂರವಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಜಮೀರ್‌ ಅಹಮದ್‌ ಒಂದುಗೂಡಿದ್ದಾರೆ.

ಜತೆಗೆ, ದೇವೇಗೌಡರ ಕುಟುಂಬದ ಜತೆ ರಾಜಕೀಯವಾಗಿ ವಿರೋಧಕಟ್ಟಿಕೊಂಡು ರಾಮನಗರ ಜಿಲ್ಲೆಯಲ್ಲಿ ರಾಜಕಾರಣ ಮಾಡುತ್ತಿದ್ದ ಡಿ.ಕೆ.ಶಿವಕುಮಾರ್‌ ಸಹ ಎಚ್‌.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ.

ಮತ್ತೆ ದೋಸ್ತಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಮತ ಹಾಕಿ ಜೆಡಿಎಸ್‌ನಿಂದ ಅಮಾನತುಗೊಂಡ ನಂತರ ಪರಸ್ಪರ ವಾಗ್ಧಾಳಿ ಮೂಲಕ ರಾಜಕೀಯವಾಗಿ ಸಮರ ಸಾರಿದ್ದ  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜಮೀರ್‌ ಅಹಮದ್‌  ಒಂದಾಗಿ ಕುತೂಹಲ ಮೂಡಿಸಿದ್ದಾರೆ.

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಂತರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ- ಜಮೀರ್‌ ಅಹಮದ್‌ ನಡುವಿನ ದ್ವೇಷ ಕಳೆದು ಮತ್ತೆ  ಸ್ನೇಹ ಚಿಗುರಿದೆ.

ಎರಡು ದಿನಗಳ ಹಿಂದೆ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಎಂಟು ತಿಂಗಳ ನಂತರ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಎಚ್‌.ಡಿ.ಕುಮಾರಸ್ವಾಮಿ -ಜಮೀರ್‌ ಅಹಮದ್‌ ಉಭಯ ಕುಶಲೋಪರಿ ನಡೆಸಿದರು. ಇದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಕಾಂಗ್ರೆಸ್‌ ಶಾಸಕರು ತಂಗಿದ್ದ ರೆಸಾರ್ಟ್‌ಗೆ ಕುಮಾರಸ್ವಾಮಿ ತೆರಳಿದ ವೇಳೆ ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಜಮೀರ್‌ ಅಹಮದ್‌ ಅವರನ್ನು ಭೇಟಿಯಾದ ಕುಮಾರಸ್ವಾಮಿ ಸ್ವಲ್ಪ ಹೊತ್ತು ಮಾತುಕತೆ ನಡೆಸಿದರು. ಸರ್ಕಾರ ರಚನೆಯ ಕಾರ್ಯತಂತ್ರಗಳ ಬಗ್ಗೆಯೂ ಚರ್ಚಿಸಿದರು.

ನಂತರ ಗುರುವಾರ ವಿಧಾನಸೌಧದ ಎದುರು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕೂಡ ಅಲ್ಲಿ ಆಗಮಿಸಿದ್ದರು. ಕಾಂಗ್ರೆಸ್‌ ಶಾಸಕರು ಮತ್ತು ಮುಖಂಡರೊಂದಿಗೆ ದೇವೇಗೌಡರು ಚರ್ಚಿಸುತ್ತಿದ್ದ ವೇಳೆ ಜಮೀರ್‌ ಅಹಮದ್‌ ಪಕ್ಕದಲ್ಲೇ ನಿಂತಿದ್ದರು.

ಜಮೀರ್‌ ಹೆಗಲ ಮೇಲೆ ಕೈ ಇಟ್ಟು ದೇವೇಗೌಡರು ಮಾತನಾಡುತ್ತಿದ್ದರು. ನಂತರ ಜಮೀರ್‌ ಭುಜ ತಟ್ಟಿದ ದೇವೇಗೌಡರು ಅಲ್ಲಿಂದ ಮುಂದೆ ಸಾಗಿದರು. ಇನ್ನು ಧರಣಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ದೇವೇಗೌಡ ಸಹ ಪರಸ್ಪರ ಚರ್ಚಿಸುತ್ತಾ ಒಟ್ಟಿಗೆ ಕುಳಿತು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣರಾದರು.

ಟಾಪ್ ನ್ಯೂಸ್

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.