ಜೆಡಿಎಸ್‌ ಜತೆ ಮೈತ್ರಿಗೆ ಚರ್ಚಿಸಿಲ್ಲ 

Team Udayavani, Jul 21, 2018, 6:40 AM IST

ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪಕ್ಷದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ನಡೆದ ಕೆಪಿಸಿಸಿ ಉಪಾಧ್ಯಕ್ಷರ ಸಭೆ ನಂತರ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ಮಟ್ಟದಲ್ಲಿ ಇನ್ನೂ ಚರ್ಚೆ ಆರಂಭವಾಗಿಲ್ಲ.

ಲೋಕಸಭೆ ಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಮೈತ್ರಿ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ. ಸದ್ಯಕ್ಕೆ
ಮೈತ್ರಿ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾರೂ ವಿರೋಧ ಮಾಡಿಲ್ಲ ಎಂದು ತಿಳಿಸಿದರು.

ನಾನು ಅಧ್ಯಕ್ಷನಾದ ಮೇಲೆ ಕೆಪಿಸಿಸಿ ಪದಾಧಿಕಾರಿಗಳ ಮೊದಲ ಸಭೆಯನ್ನು ಶನಿವಾರ ಕರೆಯಲಾಗಿದ್ದು, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ಮುಂದಿನ ನಿರ್ಧಾರಗಳು, ಲೋಕಸಭೆ ಚುನಾವಣೆಗೆ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ