ಪಕ್ಷಕ್ಕೆ ಶಕ್ತಿ ಬಾರದೆ ಜನ ಸಂಪರ್ಕವಿಲ್ಲ!

Team Udayavani, Oct 13, 2018, 8:32 AM IST

s-12.jpg

ಬೆಂಗಳೂರು: ತಳ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷದ ಬಲವರ್ಧನೆಗೆ ರೂಪಿಸಲಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ಮಹತ್ವಾಕಾಂಕ್ಷಿ ಜನ (ಲೋಕ) ಸಂಪರ್ಕ ಅಭಿಯಾನಕ್ಕೆ ಆರಂಭದಲ್ಲಿಯೇ ಗ್ರಹಣ ಹಿಡಿದಿದೆ. ಆರ್ಥಿಕವಾಗಿ ಪಕ್ಷವನ್ನು ಬಲಗೊಳಿಸಲು ಬೂತ್‌
ಮಟ್ಟದಿಂದಲೇ ದೇಣಿಗೆ ಸಂಗ್ರಹ ಮಾಡುವ ಜನ ಸಂಪರ್ಕ ಅಭಿಯಾನಕ್ಕೆ ತೀವ್ರ ಹಿನ್ನಡೆಯಾಗಿದ್ದು, ಐದು ಜಿಲ್ಲೆಗಳಿಗೆ ಬಿಟ್ಟರೆ ಉಳಿದೆಡೆ ಈ ಯೋಜನೆಗೆ ಇನ್ನೂ ಚಾಲನೆಯೇ ದೊರೆತಿಲ್ಲ. ಅ.2ರಿಂದ ಜನಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ರಾಜ್ಯದಲ್ಲಿ ಸುಮಾರು 60 ಸಾವಿರ ಬೂತ್‌ಗಳಿಂದ ಪ್ರತಿ ಬೂತ್‌ನಿಂದ ತಲಾ 10 ರಿಂದ 55 ಸಾವಿರ ರೂ. ಸಂಗ್ರಹಿಸುವಂತೆ ಜಿಲ್ಲಾ ಹಾಗೂ ಬ್ಲಾಕ್‌ ಮಟ್ಟದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿತ್ತು. ಸಾರ್ವಜನಿಕರಿಂದ 100, 500 ಹಾಗೂ 1000 ರೂ. ಸಂಗ್ರಹಿಸಬೇಕು. ಬೂತ್‌ ಮಟ್ಟದಲ್ಲಿ ಬೂತ್‌ ಕಮಿಟಿ ಸದಸ್ಯರು ಸಂಗ್ರಹಿಸಿರುವ ಹಣದಲ್ಲಿ ಎಐಸಿಸಿಗೆ ಶೇ. 50 ರಷ್ಟು, ಕೆಪಿಸಿಸಿಗೆ ಶೇ. 25 ರಷ್ಟು, ಜಿಲ್ಲಾ ಘಟಕಕ್ಕೆ ಶೇ. 15 ಹಾಗೂ ಬ್ಲಾಕ್‌ ಕಾಂಗ್ರೆಸ್‌ ಘಟಕಕ್ಕೆ ಶೇ. 10 ರಷ್ಟು ಹಣ ಹಂಚಿಕೆ ಮಾಡಲು ಎಐಸಿಸಿ ನಿರ್ದೇಶನ ನೀಡಿತ್ತು. ಬೆಳಗಾವಿ, ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾತ್ರ ಈ ಯೋಜನೆ ಆರಂಭವಾಗಿದ್ದು ಉಳಿದ ಜಿಲ್ಲೆಗಳಲ್ಲಿ ಈ ಯೋಜನೆ ಇನ್ನೂ ಆರಂಭವಾಗಿಲ್ಲ.

ಈ ಮಧ್ಯೆ, ರಾಹುಲ್‌ ಗಾಂಧಿಯವರು ಪಕ್ಷದ ಬೂತ್‌ ಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಲು ಜುಲೈನಲ್ಲಿ ಆರಂಬಿಸಿದ್ದ ಪ್ರೊಜೆಕ್ಟ್ ಶಕ್ತಿ ಯೋಜನೆ ಈಗ ಚುರುಕುಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಪಕ್ಷದ ಸದಸ್ಯರಾಗುವಂತೆ ಸಾರ್ವಜನಿಕರನ್ನು ಸಂಪರ್ಕಿಸಿ ಅವರಿಂದ ಹಣ ಕೇಳಿದರೆ ಸದಸ್ಯತ್ವವೂ ಸಿಗುವುದಿಲ್ಲ ಎಂಬ ಕಾರಣಕ್ಕೆ ಅನೇಕ ಜಿಲ್ಲೆಗಳಲ್ಲಿ ಪ್ರೊಜೆಕ್ಟ್ ಶಕ್ತಿ ಮುಗಿಯುವವರೆಗೂ ಜನ ಸಂಪರ್ಕ ಅಭಿಯಾನವನ್ನು
ನಿಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ನಾಯಕರಿಗೆ ನುಂಗಲಾರದ ತುತ್ತು 
ಎಐಸಿಸಿಯಿಂದ ಬಂದ ನಿರ್ದೇಶನ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ ಕಾರ್ಯಕರ್ತರು ಜನರ ಬಳಿಗೆ ತೆರಳಿ ಪಕ್ಷಕ್ಕೆ ದೇಣಿಗೆ ನೀಡಿ ಎಂದು ಕೇಳಿದರೆ, ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರು ಹಣ ನೀಡುವ ಸ್ಥಿತಿಯಲ್ಲಿ ಇಲ್ಲ ಎಂಬ ಅಭಿಪ್ರಾಯ ಬೂತ್‌ ಮತ್ತು ಬ್ಲಾಕ್‌ ಮಟ್ಟದ ಪಕ್ಷದ ಕಾರ್ಯಕರ್ತರು ರಾಜ್ಯ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗಿದೆ. ಚುನಾವಣೆ ವೇಳೆ ಜನರಿಗೆ ಹಣ ನೀಡಿ ಮತ ಕೇಳಿ ರಾಜಕೀಯ ಪಕ್ಷಗಳು ರೂಢಿ ಮಾಡಿರುವುದರಿಂದ ಈಗ ಜನರ ಬಳಿ ಹಣ ಕೇಳಲು ಹೋದರೆ, ಅದೇ ತಿರುಗುಬಾಣವಾಗುವ ಸಾಧ್ಯತೆ ಇದೆ. ಈ ರೀತಿಯ ಪ್ರಯತ್ನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಕಾರಣವಾಗುತ್ತದೆ ಎಂಬ ಅಭಿಪ್ರಾಯ ತಳಮಟ್ಟದಲ್ಲಿ ವ್ಯಕ್ತವಾಗುತ್ತಿದೆ ಎಂದು ತಿಳಿದು ಬಂದಿದೆ. ಆದರೆ, ರಾಜ್ಯ ನಾಯಕರು ಹೈ ಕಮಾಂಡ್‌ ಆದೇಶವಿರುವುದರಿಂದ ಹೇಗಾದರೂ ಮಾಡಿ ಜನ ಸಂಪರ್ಕ ಯಾತ್ರೆಯನ್ನು ಯಶಸ್ವಿಗೊಳಿಸುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. 

ಶಂಕರ ಪಾಗೋಜಿ

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.