ಸಿ.ಪಿ.ಯೋಗೇಶ್ವರ್ಗೆ ಎಚ್.ಡಿ.ಕುಮಾರಸ್ವಾಮಿ ವಕೀಲರಿಂದ ನೋಟಿಸ್
Team Udayavani, Apr 8, 2018, 6:45 AM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದ ಶಾಸಕ ಸಿ.ಪಿ.ಯೋಗೇಶ್ವರ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರ ವಕೀಲರು ನೋಟಿಸ್ ಜಾರಿ ಮಾಡಿದ್ದಾರೆ.
ಇತ್ತೀಚೆಗೆ ಚನ್ನಪಟ್ಟಣದಲ್ಲಿ ಜೆಡಿಎಸ್ ಸಮಾವೇಶದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ್ದ ಸಿ.ಪಿ.ಯೋಗೇಶ್ವರ್, ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ, ಸಿಂಗಾಪುರ, ಮಲೇಷಿಯಾದಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ಆರೋಪಿಸಿದ್ದರು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪರ ವಕೀಲರು ನೋಟಿಸ್ ನೀಡಿದ್ದಾರೆ.
ಒಂದು ವಾರದಲ್ಲಿ ಆರೋಪಕ್ಕೆ ಪೂರಕ ದಾಖಲೆ ಒದಗಿಸಬೇಕು. ಇಲ್ಲದಿದ್ದರೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ನೋಟಿಸ್ನಲ್ಲಿ ಉಲ್ಲೇಖೀಸಲಾಗಿದೆ.