ನಟ ದುನಿಯಾ ವಿಜಯ್‌ಗೆ ನೋಟಿಸ್‌

Team Udayavani, Jan 21, 2020, 3:06 AM IST

ಬೆಂಗಳೂರು: ನಟ ದುನಿಯಾ ವಿಜಯ್‌ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಡುರಸ್ತೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಣೆ ಹಾಗೂ “ಸಲಗ’ ಚಿತ್ರದ ಟೀಸರ್‌ ಬಿಡುಗಡೆ ವೇಳೆ ನಟ ದುನಿಯಾ ವಿಜಯ್‌ ಉದ್ದದ ಕತ್ತಿಯಿಂದ ಕೇಕ್‌ ಕತ್ತರಿಸುವ ಮೂಲಕ ವಿವಾದಕ್ಕೀಡಾಗಿದ್ದಾರೆ.

ಈ ಸಂಬಂಧ ಗಿರಿನಗರ ಠಾಣೆ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ನೋಟಿಸ್‌ ಜಾರಿ ಮಾಡಲಾಗಿದೆ. ಜ.20ರಂದು ದುನಿಯಾ ವಿಜಯ್‌ ಅವರು 46ನೇ ಹುಟ್ಟುಹಬ್ಬವಿತ್ತು. ಈ ವೇಳೆ ಅಭಿಮಾನಿಗಳು ಗಿರಿನಗರದ ಅವರ ನಿವಾಸದ ಬಳಿ ಭಾನುವಾರ ರಾತ್ರಿ ಸೇರಿದ್ದರು.

ವಿಜಯ್‌, ತಮ್ಮ ಪತ್ನಿ ಹಾಗೂ ಪೋಷಕರ ಸಮ್ಮುಖದಲ್ಲಿ ಬೃಹತ್‌ ಗಾತ್ರದ ಕೇಕ್‌ ಅನ್ನು ಉದ್ದದ ಕತ್ತಿ ಮೂಲಕ ಕತ್ತರಿಸಿ, “ಸಲಗ’ ಸಿನಿಮಾದ ಒಂದೂವರೆ ನಿಮಿಷದ ಟೀಸರ್‌ನ್ನು ಬಿಡುಗಡೆಗೊಳಿಸಿದ್ದರು. ಈ ಸಂಬಂಧ ನೋಟಿಸ್‌ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.

ನೋಟಿಸ್‌ನಲ್ಲಿ ಏನಿದೆ?: ಹುಟ್ಟುಹಬ್ಬವನ್ನು ರಸ್ತೆಯಲ್ಲಿ ಆಚರಿಸಿದರಿಂದ ವಾಹನಗಳು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದೆ. ಸಾರ್ವಜನಿಕರ ಎದುರು ಅಪಾಯಕಾರಿ ಆಯುಧ ತಲ್ವಾರ್‌ನಿಂದ ಕೇಕ್‌ ಕತ್ತರಿಸಿದ್ದೀರಾ.

ಇದು ಶಸ್ತ್ರಾಸ್ತ್ರಗಳ ಕಾಯ್ದೆ ಉಲ್ಲಂಘನೆಯಾಗಿದೆ. ಅಲ್ಲದೆ ಅನುಮತಿ ಪಡೆಯದೇ ಡಿಜೆ ಸೌಂಡ್‌ ಸಿಸ್ಟಂ ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ. ಈ ಸಂಬಂಧ ನೋಟಿಸ್‌ ತಲುಪಿದ ಮೂರು ದಿನದೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಪೊಲೀಸರು ವಿವರಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ