ಆರು ತಿಂಗಳಿಗೊಮ್ಮೆ ಸಭೆ ನಡೆಸಲು ಸೂಚನೆ


Team Udayavani, Dec 28, 2018, 11:34 AM IST

aru-tinga.jpg

ಬೆಂಗಳೂರು: ರಾಜ್ಯ ನಗರ ಯೋಜನಾ ಮಂಡಳಿಗಳು ಆರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂಬ ನಿಯಮವಿದ್ದರೂ ಎರಡು ವರ್ಷದಿಂದ ಸಭೆ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಬೇಸರ ವ್ಯಕ್ತಪಡಿಸಿದರು.

ನಗರದ ಬಿಎಂಆರ್‌ಡಿಎ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ರಾಜ್ಯ ನಗರ ಯೋಜನಾ ಮಂಡಳಿಯ 68ನೇ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯ ನಗರ ಯೋಜನಾ ಮಂಡಳಿಗಳ ಸಭೆಯನ್ನು ನಿಯಮಾನುಸಾರವಾಗಿ ಪ್ರತಿ ಆರು ತಿಂಗಳಿಗೆ ನಡೆಸಬೇಕು ಎಂದು ಅಧಿಕಾರಿಗೆ ನಿರ್ದೇಶನ ನೀಡಿದರು.

ರಾಜ್ಯ ನಗರ ಯೋಜನಾ ಮಂಡಳಿಯ ಆದಾಯ ವರ್ಷದಿಂದ ವರ್ಷಕ್ಕೆ ಏರಿಕೆಯಾಗಬೇಕು. ಆದರೆ, 2016-17ರಲ್ಲಿ 21 ಕೋಟಿ ರೂ. 2017-18ರಲ್ಲಿ 19 ಕೋಟಿ ರೂ. ಹಾಗೂ 2018-19ನೇ ಸಾಲಿನಲ್ಲಿ 14 ಕೋಟಿ ರೂ.ಗಳಿಗೆ ಆದಾಯ ಇಳಿಕೆಯಾಗಿದೆ. ಇದಕ್ಕೆ ಕಾರಣ ಏನು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಡಿಸಿಎಂ, ಪ್ರತಿ ವರ್ಷ ಆದಾಯ ಸಂಗ್ರಹ ಕನಿಷ್ಠ ಶೇ.10ರಷ್ಟು ಹೆಚ್ಚಾಗುವಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಇಲಾಖೆಯಲ್ಲಿ ನೇಮಕಾತಿಗೆ ಇರುವ ಪ್ರತ್ಯೇಕ ನಿಯಮದಿಂದ ನೇಮಕಾತಿ ತಡವಾಗುತ್ತಿದೆ. ಹೀಗಾಗಿ ವೃಂದ ಮತ್ತು ನೇಮಕಾತಿ ನಿಯಮ ಎಲ್ಲ ಇಲಾಖೆಗೂ ಅನ್ವಯವಾಗುವಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅರಸಿಕೆರೆ ಯೋಜನಾ ಪ್ರಾಧಿಕಾರ, ಉಡುಪಿ ಜಿಲ್ಲೆಯ ಕಾಪು ಮಂಡಳಿ ಸೇರಿ ಇತರೆ ಹೊಸ ಮಂಡಳಿಗಳಿಗೆ ರಾಜ್ಯ ನಗರ ಯೋಜನಾ ಮಂಡಳಿ ವತಿಯಿಂದ ಶೇ.6ರಷ್ಟು ಬಡ್ಡಿಗೆ 25 ಲಕ್ಷ ರೂ. ಸಾಲ ನೀಡಿರುವ ಬಗ್ಗೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.

ತರಬೇತಿಯಿಂದಾದ ಪ್ರಯೋಜನವೇನು?: “ಕಳೆದ ನಾಲ್ಕು ವರ್ಷದಲ್ಲಿ ನಗರ ಯೋಜನೆಗೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ತರಬೇತಿಗಾಗಿ ಹಲವರನ್ನು ವಿದೇಶಗಳಿಗೆ ಕಳುಹಿಸಿದ್ದೀರಿ. ಆದರೆ ತರಬೇತಿ ಪಡೆದ ಬಳಿಕ ಅದರಿಂದ ಆಗಿರುವ ಉಪಯೋಗಗಳೇನು,’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಡಿಸಿಎಂ ಪರಮೇಶ್ವರ್‌, ತರಬೇತಿ ಹೆಸರಿನಲ್ಲಿ ಅನಗತ್ಯವಾಗಿ ಹಣ ವ್ಯರ್ಥ ಮಾಡುವುದು ಬೇಡ. ಈಗಾಗಲೇ ವಿದೇಶದಲ್ಲಿ ತರಬೇತಿ ಪಡೆದವರು, ಅಲ್ಲಿ ಕಲಿತದ್ದನ್ನು ಇಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.

ಸಭೆಯ ತೀರ್ಮಾನ: ಬೆಂಗಳೂರು-ಮೈಸೂರು ಮೂಲ ಸೌಕರ್ಯ ಕಾರಿಡಾರ್‌ ಅನ್ನು ಕನಕಪುರ ಸ್ಥಳೀಯ ಯೋಜನಾ ಪ್ರದೇಶಗಳ ವ್ಯಾಪ್ತಿಗೆ ಒಪ್ಪಿಸದೆ, ಈ ಯೋಜನೆಯನ್ನು ಬಿಎಂಐಸಿಎಪಿಎ ವ್ಯಾಪ್ತಿಯಲ್ಲಿಯೇ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಜತೆಗೆ ರಾಜ್ಯ ನಗರ ಯೋಜನಾ ಮಂಡಳಿಗೆ ಪ್ರತ್ಯೇಕ ಲೆಕ್ಕಪರಿಶೋಧಕರನ್ನು ನೇಮಿಸಿ, ಈ ವರೆಗೂ ಇತರೆ ಇಲಾಖೆಯಿಂದ ಲೆಕ್ಕಪರಿಶೋಧನೆ ಆಗುತ್ತಿರುವುದನ್ನು ತಪ್ಪಿಸಲು ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

cracker

ಹೊರಬೀಳದ ಆದೇಶ, ಮುಗಿಯದ ಆತಂಕ

Bangalore news

ಎನ್ ಪಿ ಎಸ್ ನೌಕರರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯಾಧ್ಯಕ್ಷ ಷಡಕ್ಷರಿ ವಿಫಲ: ಒಕ್ಕೂಟ ಆರೋಪ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.