ಎನ್‌ಆರ್‌ಐ ಕೋಟಾ ಸರಿಯಲ್ಲ; ಆರೋಪ

Team Udayavani, Feb 10, 2019, 6:34 AM IST

ಬೆಂಗಳೂರು: ಸಂವಿಧಾನದಲ್ಲಿ ಎನ್‌ಆರ್‌ಐ ಕೋಟಾಗೆ ಅವಕಾಶವಿಲ್ಲ. ಸರ್ಕಾರಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ಜಾರಿ ಮಾಡುವುದು ದೇಶ ವಿರೋಧಿ ಕ್ರಮ ಎಂದು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಆರೋಪಿಸಿದರು.

ಎಐಡಿಎಸ್‌ಒ, ಎಐಎಸ್‌ಇಸಿ, ಎಂಎಸ್‌ಸಿ, ಎಂಎಸ್‌ಎಸ್‌ಸಿ, ಡಿಎಸ್‌ಎಸ್‌ಸಿ ಸಮಿತಿಗಳು ಶನಿವಾರ ನಗರದ ಕೆಜಿಎಸ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೈದ್ಯಕೀಯ ವಿದ್ಯಾರ್ಥಿಗಳ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ವೈದ್ಯಕೀಯ ಹಾಗೂ ದಂತವೈದ್ಯಕೀಯ ಕಾಲೇಜಿನಲ್ಲಿ ಎನ್‌ಆರ್‌ಐ ಕೋಟಾ ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಜನ ಸಾಮಾನ್ಯರ ಹಣದಿಂದ ಕಟ್ಟಿದ ಸರ್ಕಾರಿ ಆಸ್ಪತ್ರೆಗಳು, ಸರ್ಕಾರಿ ಕಾಲೇಜುಗಳ ಸೀಟುಗಳನ್ನು ಪರಕೀಯರಿಗೆ ಮಾರಾಟ ಮಾಡುವುದು ದೇಶವಿರೋಧಿ ನೀತಿ ಎಂದರು.

ದೇಶದಲ್ಲಿ 2000 ರೋಗಿಗೆ ಕೇವಲ ಒಬ್ಬ ವೈದ್ಯನಿದ್ದಾನೆ. ಎನ್‌ಆರ್‌ಐ ಕೋಟಾ ಜಾರಿಯಾದಲ್ಲಿ ಈ ಪ್ರಮಾಣ 5000 ರೋಗಿಗೆ ಒಬ್ಬ ವೈದ್ಯನೂ ಸಿಗದಿರುವ ಭಯಾನಕ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯ ಸರ್ಕಾರದ ಎನ್‌ಆರ್‌ಐ ಕೋಟಾ ಜಾರಿ ಮತ್ತು ಶೇ.300-800ರಷ್ಟು ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದರು.

ಐಎಂಎ ಚುನಾಯಿತ ರಾಜ್ಯಾಧ್ಯಕ್ಷ ಡಾ. ಮಧುಸೂಧನ್‌ ಕರಿಗನೂರು ಮಾತನಾಡಿ, ಭಾರತೀಯ ವೈದ್ಯಕೀಯ ಸಂಘ ರಾಜ್ಯ ಸರ್ಕಾರದ ಈ ನೀತಿಯನ್ನು ಸಂಪೂರ್ಣವಾಗಿ ಧಿಕ್ಕರಿಸುತ್ತದೆ. ವಿದ್ಯಾರ್ಥಿಗಳನ್ನು ಆದಾಯದ ಮೂಲವನ್ನಾಗಿಸಿಕೊಳ್ಳಲು ರಾಜಕಾರಣಿಗಳು ತಯಾರಾಗಿದ್ದಾರೆ ಎಂದು ದೂರಿದರು. ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಕಾರ್ಯದರ್ಶಿ ಕೆ.ಉಮಾ, ವೈದ್ಯರಾದ ಡಾ. ಸುಧಾ ಕಾಮತ್‌, ಡಾ. ವಸುಧೇಂದ್ರ, ಡಾ. ಮೃದುಲ್‌ ಸರ್ಕಾರ್‌ ಮೊದಲಾದವರು ಇದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮನುಷ್ಯನಿಗೆ ವಯಸ್ಸು ಸರಿದಂತೆ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಕಣ್ಣಿನ ದೃಷ್ಟಿ ಮಂದವಾಗುವುದು, ತಲೆನೋವು ಬರುವುದು ಮೊದಲಾದ ಸಮಸ್ಯೆಗಳ ಉಂಟಾಗುತ್ತದೆ....

  • ಮಾರುತಿ ಸುಝುಕಿ 800 ಜಮಾನಾ ಮುಗಿದು 2000ನೇ ಇಸವಿಯಲ್ಲಿ ಮೊದಲ ಬಾರಿಗೆ ಆಲ್ಟೋ 800 ಮಾರುಕಟ್ಟೆಗೆ ಬಂದಿದ್ದಾಗ ದೊಡ್ಡ ಸುದ್ದಿಯಾಗಿತ್ತು. ಬಳಿಕ 2012ರಲ್ಲಿ ಹೊಸ ಆಲ್ಟೋ...

  • ಬೆಂಗಳೂರು: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳಬೇಕೆಂದು ಕಸರತ್ತು ನಡೆಸುತ್ತಿದೆ. ಗ್ರಾಮೀಣಾ ಭಿವೃದ್ಧಿ...

  • ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ ಮುಂದುವರಿದಿದ್ದು, ಸಿಡಿಲಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮಧ್ಯೆ, ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ...

  • ಕುತ್ತಾರು: ಕುತ್ತಾರು ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಶ್ರೀ ರಾಜರಾಜೇಶ್ವರಿ ಘಟಕದ ವತಿಯಿಂದ ಮಳೆಗಾಗಿ...

  • ಮಂಗಳೂರು/ಉಡುಪಿ: ಮತದಾನಕ್ಕೂ ಮತ ಎಣಿಕೆಗೂ 35 ದಿನಗಳಷ್ಟು ದೀರ್ಘಾವಧಿಯ ಕಾಯುವಿಕೆ ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಎರಡು ಮುಖ್ಯ ಲೋಕಸಭಾ ಕ್ಷೇತ್ರಗಳಿಗೆ...