ಎನ್‌ಆರ್‌ಐ ಕೋಟಾದಲ್ಲೇ ಸೀಟು


Team Udayavani, Jun 28, 2017, 11:40 AM IST

highcourt.jpg

ಬೆಂಗಳೂರು: ಅನಿವಾಸಿ ಭಾರತೀಯ ವಿದ್ಯಾರ್ಥಿಗಳ ಕೋಟಾದಡಿ ಸಾಗರೋತ್ತರ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ರಾಜ್ಯಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಕಾಯಿದೆ 2006ರ ಕಲಂ 5ರ ರದ್ದುಕೋರಿ ಸಾಗರೋತ್ತರ ಅನಿವಾಸಿ ಭಾರತೀಯ ವಿದ್ಯಾರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನ್ಯಾಯಮೂರ್ತಿ ಹೆಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಕೆ.ಎಸ್‌ ಮುದ್ಗಲ್‌ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, “ಇತರೆ ರಾಜ್ಯಗಳಲ್ಲಿ ಸಾಗರೋತ್ತರ ವಿದ್ಯಾರ್ಥಿಗಳು ಸರ್ಕಾರಿ ಸೀಟುಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಕಾಯಿದೆ 2006ರ ಕಲಂ 5ರ ಅಡಿಯಲ್ಲಿ ಸಾಗರೋತ್ತರ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಸೀಟುಗಳನ್ನು ಪಡೆಯಲು ಅರ್ಹರಿಲ್ಲ ಎಂಬ ನಿಯಮವಿದೆ. ಈ ನಿಟ್ಟಿನಲ್ಲಿ  ಕಲಂ  5 ರದ್ದುಪಡಿಸುವಂತೆ ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ,’ ಕೋರಿದರು.

ಸರ್ಕಾರದ ಪರ ವಾದಿಸಿದ ಅಡ್ವೋಕೇಟ್‌ ಜನರಲ್‌ ಎ.ಎಸ್‌ ಪೊನ್ನಣ್ಣ, “ಕಳೆದ ಏಪ್ರಿಲ್‌3ರಂದು ರಾಜ್ಯಸರ್ಕಾರ 2006 ಕಾಯಿದೆಗೆ ತಿದ್ದುಪಡಿ  ತಂದಿರುವ ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಕಾಯಿದೆ 2017ರಲ್ಲಿ ಅನಿವಾಸಿ ಭಾರತೀಯರ ಪಟ್ಟಿಯಲ್ಲಿಯೇ ಸಾಗರೋತ್ತರ ನಿವಾಸಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಅಲ್ಲದೆ ಎನ್‌ಆರ್‌ಐ, ಸಾಗರೋತ್ತರ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಹಂಚಿಕೆ ಸಂಬಂಧ ಸರ್ಕಾರ ಶೀಘ್ರದಲ್ಲಿಯೇ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಜೊತೆ ಸಭೆ ನಡೆಸಲು ತೀರ್ಮಾನಿಸಿದೆ ಎಂದೂ ನ್ಯಾಯಪೀಠಕ್ಕೆ ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಗೃಹ ಇಲಾಖೆ, ವಿದೇಶಾಂಗ ಸಚಿವಾಲಯ, ಕೇಂದ್ರ ವೈದ್ಯಕೀಯ ಶಿಕ್ಷಣ ಇಲಾಖೆ, ರಾಜ್ಯಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟೀಸ್‌ ಜಾರಿಗೊಳಿಸಿ ಜುಲೈ  3ಕ್ಕೆ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.