ಬಿಎಂಟಿಸಿಯಿಂದ ಒಲಾ ಮಾದರಿ ಸೇವೆ

Team Udayavani, Jan 2, 2019, 6:46 AM IST

bmtc.jpg

ಬೆಂಗಳೂರು: ಒಲಾ-ಉಬರ್‌ ಮಾದರಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕೂಡ “ಆ್ಯಪ್‌ ಆಧಾರಿತ ಸೇವೆ’ ಆರಂಭಿಸಲು ಚಿಂತನೆ ನಡೆಸಿದೆ.

ಪ್ರಯಾಣಿಕರಿಗೆ “ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ’ ನೀಡಲು ಸ್ವತಃ ಆ್ಯಪ್‌ ಒಂದನ್ನು ಅಭಿವೃದ್ಧಿಪಡಿಸಿ, ಅಗ್ರಿಗೇಟರ್‌ಗಳೊಂದಿಗೆ ಒಪ್ಪಂದ ಮಾಡಿಕೊಂಡು ಆ್ಯಪ್‌ ಆಧಾರಿತ ಸೇವೆ ಕಲ್ಪಿಸಲು ಚಿಂತನೆ ನಡೆದಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ, ಮುಂಬರುವ ದಿನಗಳಲ್ಲಿ ಒಲಾ-ಉಬರ್‌ನಂತೆಯೇ ಬಿಎಂಟಿಸಿಯಿಂದಲೂ “ಕ್ಯಾಬ್‌ ಸೇವೆ’ ದೊರೆಯಲಿದೆ ಎಂದು ನಿಗಮದ ಮೂಲಗಳು ತಿಳಿಸಿವೆ. 

ಒಂದೆಡೆ ಈಗಾಗಲೇ ಇರುವ ಆ್ಯಪ್‌ ಆಧಾರಿತ ಕ್ಯಾಬ್‌ಗಳು, ಮತ್ತೂಂದೆಡೆ “ನಮ್ಮ ಮೆಟ್ರೋ’ದಿಂದ ಬಿಎಂಟಿಸಿ ಆದಾಯ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜತೆಗೆ ಮುಂದಿನ ದಿನಗಳಲ್ಲಿ ಉಪನಗರ ರೈಲು ಯೋಜನೆ ಹಾಗೂ ಎರಡನೇ ಹಂತದ ಮೆಟ್ರೋ ಕೂಡ ನಗರ ಸಾರಿಗೆ ಸೇವೆಯಲ್ಲಿ ಸೇರ್ಪಡೆಯಾಗಲಿದೆ.

ಇವೆಲ್ಲವುಗಳ ಮಧ್ಯೆ ಪರ್ಮಿಟ್‌ ಇಲ್ಲದಿದ್ದರೂ ನಗರದಲ್ಲಿ ಖಾಸಗಿ ಬಸ್‌ಗಳ ಹಾವಳಿ ಇದೆ. ಈ ಎಲ್ಲ ದೃಷ್ಟಿಯಿಂದ ಬಿಎಂಟಿಸಿ ತನ್ನ ಸೇವಾ ವ್ಯಾಪ್ತಿ ವಿಸ್ತರಿಸಿಕೊಳ್ಳುವುದರ ಜತೆಗೆ ಹೊಸ ಪ್ರಯಾಣಿಕ ವರ್ಗದ ಹುಡುಕಾಟ ನಡೆಸಿದೆ. ಈ ಹಿನ್ನೆಲೆಯಲ್ಲಿ ಆ್ಯಪ್‌ ಆಧಾರಿತ ಸೇವೆಯ ಸಾಧಕ-ಬಾಧಕಗಳ ಕುರಿತಂತೆ ಚಿಂತನೆ ನಡೆಸಿದೆ. 

ಈಗಾಗಲೇ ದೆಹಲಿಯಲ್ಲಿ “ಆ್ಯಪ್‌ ಆಧಾರಿತ ಹವಾನಿಯಂತ್ರಿತ ಬಸ್‌ ಸೇವೆ’ ಆರಂಭಿಸಲಾಗಿದೆ. ಬೆಂಗಳೂರಿನಲ್ಲೂ ಇದನ್ನು ಪರಿಚಯಿಸಬಹುದೇ ಎಂಬುದರ ಬಗ್ಗೆಯೂ ಆಲೋಚನೆ ನಡೆದಿದೆ. ಈ ಹೊಸ ಯೋಜನೆ ಅನುಷ್ಠಾನಕ್ಕಾಗಿ ಬಿಎಂಟಿಸಿ ಟ್ಯಾಕ್ಸಿಗಳು ಅಥವಾ ಮಿಡಿ ಬಸ್‌ಗಳನ್ನು ಖರೀದಿಸುವುದಿಲ್ಲ. ತಾನು ಕೇವಲ ಆ್ಯಪ್‌ ಅಭಿವೃದ್ಧಿಪಡಿಸಿ, ಅದನ್ನು ನಿಯಮದ ಪ್ರಕಾರ ನಿರ್ವಹಣೆ ಮಾಡಲಿದೆ. 

ವಾಹನ ಲಿಂಕ್‌ ಮಾಡಲು ಅವಕಾಶ: ಆ್ಯಪ್‌ ಆಧರಿತ ಸೇವೆ ನಿರ್ವಹಣೆಗೆ ಅಗ್ರಿಗೇಟರ್‌ಗಳನ್ನು ತನ್ನೊಂದಿಗೆ ಸೇರಿಸಿಕೊಳ್ಳಲಿರುವ ಬಿಎಂಟಿಸಿ, ನಂತರ ಒಲಾ, ಉಬರ್‌ ಸಂಸ್ಥೆಗಳೊಂದಿಗೆ ಚಾಲಕರು ತಮ್ಮ ವಾಹನವನ್ನು “ಜೋಡಣೆ’ ಮಾಡಿದಂತೆಯೇ ಬಿಎಂಟಿಸಿ ಜತೆ ಕೂಡ “ಜೋಡಣೆ’ (ಲಿಂ ಕ್‌) ಮಾಡಿಕೊಳ್ಳಲು ಅವಕಾಶ ಇರಲಿದೆ.

ಯೋಜನೆ ಕಾರ್ಯರೂಪಕ್ಕೆ ಬಂದರೆ, ಯಾವುದೇ ಹೂಡಿಕೆ ಇಲ್ಲದೆ ಸೇವೆ ವಿಸ್ತಾರಗೊಳ್ಳಲಿದೆ. ಹಾಗೇ ಸಂಸ್ಥೆಯ ಆದಾಯ ಕೂಡ ಹೆಚ್ಚಲಿದೆ. ಆದರೆ, ಈ ಪರಿಕಲ್ಪನೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಅಂತಿಮ ಸ್ವರೂಪ ಪಡೆದುಕೊಂಡಿಲ್ಲ ಎಂದು ನಿಗಮದ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊನೆ ಹಂತದ ಸಂಪರ್ಕವೇ ಸವಾಲು: ನಗರದಲ್ಲಿ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ (ಕೊನೆಯ ಹಂತ ಸಂಪರ್ಕಿಸುವಿಕೆ) ದೊಡ್ಡ ಸವಾಲಾಗಿದೆ. ಮೆಟ್ರೋದಲ್ಲಿ ಬಂದಿಳಿಯುವ ಲಕ್ಷಾಂತರ ಜನ, ಮನೆಗಳನ್ನು ತಲುಪಲು ಈಗಲೂ ಆಟೋ ಅಥವಾ ಟ್ಯಾಕ್ಸಿಗಳನ್ನು ಅವಲಂಬಿಸಿದ್ದಾರೆ. ಇದೇ ಕಾರಣಕ್ಕಾಗಿ ಮೆಟ್ರೋ ನಡುವೆಯೂ ಒಲಾ ಮತ್ತು ಉಬರ್‌ ಸೇವೆಗಳು ಅಲ್ಪಾವಧಿಯಲ್ಲೇ ಹೆಚ್ಚು ಜನರನ್ನು ತಲುಪಿವೆ.

ಇದರ ಮುಂದುವರಿದ ಭಾಗವಾಗಿ ಈಗ ಬೈಕ್‌ ಟ್ಯಾಕ್ಸಿ ಸೇವೆಗೂ ಸರ್ಕಾರ ಅನುಮತಿ ನೀಡಲು ಹೊರಟಿದೆ. ಹೀಗಿರುವಾಗ, ನಿಗಮದಿಂದಲೇ ಆ್ಯಪ್‌ ಆಧಾರಿತ ಸೇವೆ ನೀಡಲು ಉದ್ದೇಶಿಸಲಾಗಿದೆ.ಆದರೆ, ಏಕಾಏಕಿ ಇದನ್ನು ಜಾರಿಗೊಳಿಸುವುದು ಕಷ್ಟ. ಮೊದಲು ಸಾರಿಗೆ ಇಲಾಖೆಯಿಂದ ಪರ್ಮಿಟ್‌ ಪಡೆಯಬೇಕಾಗುತ್ತದೆ. ಸೀಟುಗಳನ್ನು ಮೊದಲೇ ಬುಕಿಂಗ್‌ ಮಾಡಬೇಕಾಗುತ್ತದೆ.

ಎಲ್ಲಕ್ಕಿಂತ ಮುಖ್ಯವಾಗಿ ಪ್ರಯಾಣಿಕರ ಸ್ಪಂದನೆ ಹೇಗಿರುತ್ತದೆ ಎಂಬುದನ್ನೂ ನೋಡಬೇಕು. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಒಂದು ಮಾರ್ಗದಲ್ಲಿ ಇದನ್ನು ಪರಿಚಯಿಸಲಾಗುವುದು. ನಂತರ ಉಳಿದೆಡೆ ವಿಸ್ತರಿಸುವ ಬಗ್ಗೆ ಆಲೋಚಿಸಬಹುದು ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಶೇರ್ಡ್ ಆಟೋ ಅನುಕೂಲ?: ನಗರದಲ್ಲಿ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಬೇಕೇ ಬೇಕು. ಆದರೆ, ಅದಕ್ಕಾಗಿ ಆ್ಯಪ್‌ ಆಧಾರಿತ ಸೇವೆಗಳಿಗಿಂತ ಹೆಚ್ಚಾಗಿ ಬಿಎಂಟಿಸಿ ಬಸ್‌ ಪ್ರಯಾಣಿಕರಿಗೆ ಶೇರ್ಡ್ ಆಟೋ ಅಥವಾ ಇ-ಆಟೋ ಸೇವೆ ಅವಶ್ಯಕತೆ ಇದೆ ಎನ್ನುತ್ತಾರೆ ಬಿಎಂಟಿಸಿ ಬಸ್‌ ಪ್ರಯಾಣಿಕರ ವೇದಿಕೆಯ ವಿನಯ್‌ ಶ್ರೀನಿವಾಸ್‌.

50 ಲಕ್ಷ ಜನ ನಿತ್ಯ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಅವರಲ್ಲಿ ಬಹುತೇಕರು ಕೂಲಿ ಕಾರ್ಮಿಕರು, ಬಡ ಮತ್ತ ಮಧ್ಯಮ ವರ್ಗದವರಾಗಿದ್ದು, ಈಗಲೂ ಅವರೆಲ್ಲರ ಬಳಿ ಸ್ಮಾರ್ಟ್‌ಫೋನ್‌ ಇಲ್ಲ. ಅಷ್ಟಕ್ಕೂ ಆ್ಯಪ್‌ ಆಧಾರಿತ ಸೇವೆ ತುಂಬಾ ದುಬಾರಿ ಆಗಿರುತ್ತದೆ. ಹೀಗಿರುವಾಗ, ಇದು ಯಾವ ವರ್ಗಕ್ಕೆ ಹೆಚ್ಚು ಅನುಕೂಲ ಆಗಲಿದೆ ಎಂಬುದನ್ನೂ ಯೋಚಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಒಲಾ ಹಾಗೂ ಉಬರ್‌ ಮಾದರಿಗಿಂತ ಶೇರ್ಡ್ ಆಟೋಗಳಿಗೆ ಒತ್ತು ನೀಡುವ ಅವಶ್ಯಕತೆ ಇದೆ. ಈ ಸಂಬಂಧ ಸಾರಿಗೆ ಇಲಾಖೆ ನಿಯಮ ತಿದ್ದುಪಡಿ ಮಾಡಬೇಕು ಎಂದು ವಿನಯ್‌ ಶ್ರೀನಿವಾಸ್‌ ಆಗ್ರಹಿಸುತ್ತಾರೆ.

ಈ ಯೋಜನೆ ಇನ್ನೂ ಪರಿಶೀಲನೆ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಇದರ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು. 
-ಡಾ.ಎನ್‌.ವಿ.ಪ್ರಸಾದ್‌, ಬಿಎಂಟಿಸಿ ಎಂ.ಡಿ

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.