ಓಲಾ, ಉಬರ್‌ ಚಾಲಕರಿಂದ ಬಿಎಸ್‌ವೈ ಭೇಟಿ

Team Udayavani, Mar 3, 2017, 12:25 PM IST

ola-uber.jpg

ಬೆಂಗಳೂರು: ಓಲಾ ಮತ್ತು ಉಬರ್‌ ಚಾಲಕರು ಗುರುವಾರ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸಹಕರಿಸುವಂತೆ ಮನವಿ ಮಾಡಿದರು.

ಬಿಜೆಪಿ ಸಣ್ಣ ಉದ್ದಿಮೆಗಳ ಪ್ರಕೋಷ್ಠದ ರಾಜ್ಯ ಸಂಚಾಲಕ ಕೆ.ವಿ.ರಾಜೇಂದ್ರಕುಮಾರ್‌ ನೇತೃತ್ವದಲ್ಲಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಚಾಲಕರು, ಯಡಿಯೂರಪ್ಪ ಅವರಿಗೆ ತಮ್ಮ ಸಮಸ್ಯೆಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, “ಚಾಲಕರ ಸಮಸ್ಯೆ ಬಗೆಹರಿಸುವ ಬಗ್ಗೆ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು. ಕೇಂದ್ರ ಭೂಸಾರಿಗೆ ಸಚಿವರ ಗಮನಕ್ಕೂ ತರಲಾಗುವುದು,” ಎಂದು ಭರವಸೆ ನೀಡಿದರು.

ಪ್ರತಿಭಟನೆ ಮೊಟಕು: ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಓಲಾ-ಉಬರ್‌ ಟ್ಯಾಕ್ಸಿ ಚಾಲಕರು ಆರಂಭಿಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಸ್ಥಳಾವಕಾಶ ಸಿಗದ ಕಾರಣ ಗುರುವಾರ ಮೊಟಕುಗೊಂಡಿತು. 

ಒಂದು ದಿನದ ಮಟ್ಟಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೆ ಪೊಲೀಸ್‌ ಇಲಾಖೆ ಅನುಮತಿ ನೀಡಿತ್ತು. ಆದರೆ, ಅಲ್ಲಿ ಟ್ಯಾಕ್ಸಿ ಚಾಲಕರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಈ ಮಧ್ಯೆ ಶುಕ್ರವಾರ ಇದೇ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರೈತರು ತಿಂಗಳು ಮೊದಲೇ ಅನುಮತಿ ಪಡೆದಿದ್ದರಿಂದ ಚಾಲಕರಿಗೆ ನೀಡಿದ್ದ ಅನುಮತಿ ಹಿಂಪಡೆಯಲಾಗಿದೆ. 

ಸ್ಥಳಾವಕಾಶ ದೊರೆಯದ ಕಾರಣ ತಾತ್ಕಾಲಿಕವಾಗಿ ಉಪವಾಸ ಸತ್ಯಾಗ್ರಹ ಕೈಬಿಡಲಾಗಿದೆ. ಆದರೆ, ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ. ಬೇಡಿಕೆಗಳು ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಓಲಾ-ಉಬರ್‌ ಟ್ಯಾಕ್ಸಿ ಮಾಲಿಕರು ಮತ್ತು ಚಾಲಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.