ಶನಿವಾರ ಮಾತ್ರ ಸಿಎಂ ಜನತಾ ದರ್ಶನ

Team Udayavani, Aug 28, 2018, 6:30 AM IST

cm-janatha.jpg

ಬೆಂಗಳೂರು: ದಿನನಿತ್ಯ ನೂರಾರು ಮಂದಿ ತಮ್ಮನ್ನು ಕಾಣಲು ಆಗಮಿಸುತ್ತಿರುವುದರಿಂದ ಅಧಿಕೃತ ಕಾರ್ಯಕ್ರಮಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಬೆಂಗಳೂರಿನಲ್ಲಿರುವ ಸಂದರ್ಭದಲ್ಲಿ ಪ್ರತಿ ಶನಿವಾರ ಸಾರ್ವಜನಿಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಇರುವ ಸಂದರ್ಭಗಳಲ್ಲಿ ಪ್ರತಿ ಶನಿವಾರ ಮಾತ್ರ  ಬೆಳಗ್ಗೆ  11ರಿಂದ ಸಂಜೆ 4.30 ರವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರು ಅನಿಯಮಿಯತವಾಗಿ ಮುಖ್ಯಮಂತ್ರಿಯವರ ಜೆ.ಪಿ.ನಗರದ ನಿವಾಸ, ಗೃಹ ಕಚೇರಿ ಕೃಷ್ಣಾ ಹಾಗೂ ವಿಧಾನಸೌಧಕ್ಕೆ ಭೇಟಿ ನೀಡುತ್ತಿರುವುದರಿಂದ ಮುಖ್ಯಮಂತ್ರಿಗಳ ಕೆಲಸ ಕಾರ್ಯಗಳು  ಹಾಗೂ ನಿಗದಿತ  ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಸಕಾಲಕ್ಕೆ ಭಾಗವಹಿಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಸಾರ್ವಜನಿಕ ಭೇಟಿಗೆ ಸಮಯ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಈ ಭೇಟಿಯ ಸಂದರ್ಭದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ಅಹವಾಲುಗಳು ಮತ್ತು ಖಾಸಗಿ ಅಹವಾಲುಗಳಿಗೆ ಅವಕಾಶವಿರುವುದಿಲ್ಲ. ವೈದ್ಯಕೀಯ ಪರಿಹಾರ ನಿಧಿಗೆ ಕೋರಿಕೆ ಸಲ್ಲಿಸುವವರು ಆಧಾರ್‌ ಕಾರ್ಡ್‌ ಅಥವಾ ಬಿಪಿಎಲ್‌ ಕಾರ್ಡ್‌, ಆಸ್ಪತ್ರೆಯ ಬಿಲ್‌ ಮತ್ತು ಚಿಕಿತ್ಸೆಯ ವಿವರಗಳ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಸರ್ಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಮಾತ್ರ ಸಾರ್ವಜನಿಕರು ಲಿಖೀತ ಮನವಿಗಳನ್ನು ಸಲ್ಲಿಸಬಹುದು. ಮುಖ್ಯಮಂತ್ರಿಗಳ ಸೂಚನೆಯಂತೆ ಅಂತಹ ದೂರುಗಳ ಬಗ್ಗೆ ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮೊಬೈಲ್‌ ಎಸ್‌ಎಂಎಸ್‌ ಮೂಲಕ ಮಾಹಿತಿ ಒದಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.