ಪರಮೇಶ್ವರ್‌ ಅಸಮಾಧಾನ, ದಿನೇಶ್‌ ಸಮಾಧಾನ


Team Udayavani, Mar 18, 2019, 6:35 AM IST

parameshwar.jpg

ಬೆಂಗಳೂರು: ಜೆಡಿಎಸ್‌ನೊಂದಿಗೆ ಸೀಟು ಹಂಚಿಕೆ ವಿಷಯದಲ್ಲಿ ತುಮಕೂರು ಕ್ಷೇತ್ರ ಬಿಟ್ಟು ಕೊಟ್ಟಿರುವುದರಿಂದ ಮುನಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಕೆಪಿಸಿಸಿ ರಾಜ್ಯ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಭಾನುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಬಿಟ್ಟು ಕೊಡಬಾರದು ಎಂದು ಪಕ್ಷದ ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದ್ದರೂ, ಕೊನೇ ಕ್ಷಣದಲ್ಲಿ ಹಾಲಿ ಸಂಸದರಿರುವ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ತಮಗೆ ಅನ್ಯಾಯ ಮಾಡಲಾಗಿದೆ ಎಂದು ಪರಮೇಶ್ವರ್‌ ತಮ್ಮ ಆಪ್ತರೆದುರು ಅಸಮಾಧಾನ ಹೊರಹಾಕಿದ್ದರು.

ಆದರೂ, ತಮ್ಮ ಬೇಡಿಕೆಗೆ ಸರಿಯಾದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು. ಚುನಾವಣೆ ಸಂದರ್ಭದಲ್ಲಿ ಅವರು ಮುನಿಸಿಕೊಂಡು ಅಂತರ ಕಾಯ್ದುಕೊಂಡರೆ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ ಎನ್ನುವ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಪರಮೇಶ್ವರ್‌ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ತುಮಕೂರು ಕ್ಷೇತ್ರವನ್ನು ಜೆಡಿಎಸ್‌ನಿಂದ ವಾಪಸ್‌ ಪಡೆಯಲು ರಾಜ್ಯದ ಎಲ್ಲ ನಾಯಕರೂ ಹೈಕಮಾಂಡ್‌ ಮೂಲಕ ಜೆಡಿಎಸ್‌ ಮೇಲೆ ಒತ್ತಡ ಹೇರುವ ಬಗ್ಗೆ ಪರಮೇಶ್ವರ್‌ಗೆ ಮನವರಿಕೆ ಮಾಡಿ, ಸೋಮವಾರ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಪರಿವರ್ತನಾ ಯಾತ್ರೆ ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. 

ಆದರೂ, ರಾಹುಲ್‌ ಗಾಂಧಿಯಾತ್ರೆ ಮಾಡಲು ದೊಡ್ಡ ನಾಯಕರಿದ್ದಾರೆ. ನಾನೇಕೆ ಬೇಕು ನನ್ನನ್ನು ಒಂದು ಜಿಲ್ಲೆಯ ನಾಯಕ ಎಂದು ಪರಿಗಣಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಪರಮೇಶ್ವರ್‌ ನಮ್ಮ ನಾಯಕರು. ಚುನಾವಣಾ ಸಿದ್ದತೆ ಕುರಿತು ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಅವರು ಕೇವಲ ತುಮಕೂರು ಜಿಲ್ಲೆಗೆ ಸೀಮಿತವಾದ ನಾಯಕರಲ್ಲ. ತುಮಕೂರು ಕ್ಷೇತ್ರವನ್ನು ವಾಪಸ್‌ ಪಡೆಯುವ ನಿಟ್ಟಿನಲ್ಲಿ ಎರಡೂ ಪಕ್ಷದ ನಾಯಕರು ಕುಳಿತು ಚರ್ಚೆ ಮಾಡುತ್ತೇವೆ. ಅಂತಿಮವಾಗಿ ಏನಾದರೂ ಆಗಬಹುದು.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ರಾಜ್ಯ ಅಧ್ಯಕ್ಷ 

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.