ಪರಿಶೀಲನೆ ಇಲ್ಲದೆ ಪಾಸ್‌ಪೋರ್ಟ್‌ ಕೈಗೆ


Team Udayavani, Apr 26, 2018, 2:11 PM IST

255441132.jpg

ಬೆಂಗಳೂರು: ನಾಗರಿಕರಿಗೆ ಪಾಸ್‌ಪೋರ್ಟ್‌ಪಡೆದುಕೊಳ್ಳುವಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಲು ಮುಂದಾಗಿರುವ ಪಾಸ್‌ಪೋರ್ಟ್‌ ಕಚೇರಿ,ನಿಗದಿಪಡಿಸಿದ 13 ದಾಖಲೆಗಳ ಪೈಕಿ ಯಾವುದಾದರೂ ಮೂರು ದಾಖಲೆಗಳನ್ನು ಸಲ್ಲಿಸಿ ಪೊಲೀಸ್‌ ಪರಿಶೀಲನೆ ಪೂರ್ವದಲ್ಲೇ ಪಾಸ್‌ಪೋರ್ಟ್‌ ಪಡೆದುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಆದರೆ,ಆ ಪಾಸ್‌ಪೋರ್ಟ್‌ ಪೊಲೀಸ್‌ ಪರಿಶೀಲನೆಯ ಶರತ್ತಿಗೆ ಒಳಪಟ್ಟಿರುತ್ತದೆ.

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾದೇಶಿಕ ಪಾಸ್‌ಪೋರ್ಟ್‌ ಅಧಿಕಾರಿ ಭರತ್‌ ಕುಮಾರ್‌ ಕುತಾಟಿ, ಸಾರ್ವಜನಿಕರಿಗೆ ಸುಗಮವಾಗಿ ಮತ್ತು ಸಕಾಲಕ್ಕೆ ಪಾಸ್‌ ಪೋರ್ಟ್‌ ಸೇವೆ ಹಾಗೂ ಸೌಲಭ್ಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗಿದೆ. ಆ ಪೈಕಿ ಪೊಲೀಸ್‌ ಪರಿಶೀಲನೆ ಪೂರ್ವ ಪಾಸ್‌ಪೋರ್ಟ್‌ ವಿತರಣೆಯೂ ಒಂದು ಎಂದರು.

ಪಾಸ್‌ಪೋರ್ಟ್‌ ಪಡೆದುಕೊಳ್ಳಲು ಸಲ್ಲಿಸಬೇಕಾದ ದಾಖಲೆಗಳ ಪಟ್ಟಿ ಈ ಹಿಂದೆ ಬಹಳ ದೊಡ್ಡದಾಗಿತ್ತು. ಅದನ್ನೀಗ ಕಡಿಮೆ ಮಾಡಿ ಆಧಾರ್‌, ಚುನಾವಣಾ ಗುರುತಿನ ಚೀಟಿ ಸೇರಿ ಒಟ್ಟು 13 ದಾಖಲೆಗಳನ್ನು ನಿಗದಿಪಡಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಈ ಹದಿಮೂರು ದಾಖಲೆಗಳ ಪೈಕಿ ಯಾವುದಾದರೂ ಮೂರು ದಾಖಲೆಗಳನ್ನು ಸಲ್ಲಿಸಿದರೆ ಪೊಲೀಸ್‌ ಪರಿಶೀಲನೆಯ ಶರತ್ತಿನೊಂದಿಗೆ ತಕ್ಷಣ ಪಾಸ್‌ಪೋರ್ಟ್‌ ವಿತರಿಸಲಾಗುತ್ತದೆ. ಇದೇ ವೇಳೆ ಪೊಲೀಸ್‌ ಪರಿಶೀಲನೆ ಸಹ ನಡೆದಿರುತ್ತದೆ.

ಒಂದು ವೇಳೆ ಪೊಲೀಸ್‌ ಪರಿಶೀಲನಾ ವರದಿ ವ್ಯತಿರಿಕ್ತ ಅಥವಾ ಸಂಶಯಾಸ್ಪದವಾಗಿ ಬಂದರೆ ಪಾಸ್‌ಪೋರ್ಟ್‌ ಹೊಂದಿದವರಿಗೆ ನೋಟಿಸ್‌ ನೀಡಿ ಸ್ಪಷ್ಟೀಕರಣ ಪಡೆದುಕೊಳ್ಳಲಾಗುತ್ತದೆ. ಅವರು ಕೊಟ್ಟ ಮಾಹಿತಿ ಸಮರ್ಪಕವಾಗಿದ್ದರೆ ಪ್ರಕರಣ ಇತ್ಯರ್ಥಪಡಿಸಲಾಗುತ್ತದೆ. ಇಲ್ಲದಿದ್ದರೆ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಭರತ್‌ ಕುಮಾರ್‌ ವಿವರಿಸಿದರು.

ಪೊಲೀಸ್‌ ಪರಿಶೀಲನೆಯನ್ನು ಅನಗತ್ಯವಾಗಿ ವಿಳಂಬ ಮಾಡಲಾಗುತ್ತದೆ. ಕೆಲವೊಂದು ಸಂದರ್ಭಗಳಲ್ಲಿ ಸ್ಥಳೀಯ ಪೊಲೀಸರು ಹಣದ ಬೇಡಿಕೆ ಇಡುತ್ತಾರೆ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ಪ್ರಕರಣಗಳು ನಡೆದಾಗ ಅರ್ಜಿದಾರರು ತಕ್ಷಣ ಮೇಲಾಧಿಕಾರಿಗಳಿಗೆ ದೂರು ನೀಡಬೇಕು.

ಅದಾಗ್ಯೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು. ನಿಯಮಾವಳಿ ಪ್ರಕಾರ 21 ದಿನಗಳಲ್ಲಿ ಪೊಲೀಸ್‌ ಪರಿಶೀಲನೆ ಕಾರ್ಯ ಪೂರ್ಣಗೊಳಿಸಬೇಕು.

ಬೆಂಗಳೂರಿನಲ್ಲಿ ಕೇವಲ 11 ದಿನಗಳಲ್ಲಿ ಈ ಕಾರ್ಯ ಮುಗಿಯುತ್ತಿದೆ. ಶೇ. 97ರಷ್ಟು ಪ್ರಕರಣಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಗೊಳ್ಳುತ್ತಿವೆ. ಆದರೆ,ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ದಾವಣಗೆರೆ, ಹುಬ್ಬಳ್ಳಿ, ಹಾವೇರಿ, ಕೋಲಾರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪೊಲೀಸ್‌ ಪರಿಶೀಲನೆ ಕಾರ್ಯ ನಿಧಾನಗತಿಯಲ್ಲಿ ಆಗುತ್ತಿದ್ದು, ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಕೊಡಿಸಲಾಗುವುದು ಎಂದರು.

2017-18ನೇ ಸಾಲಿನಲ್ಲಿ 7.21 ಲಕ್ಷ ಪಾಸ್‌ ಪೋರ್ಟ್‌ಗಳನ್ನು ವಿತರಿಸಲಾಗಿದೆ. 5 ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳು, 12 ಪೋಸ್ಟ್‌ ಆಫೀಸ್‌ ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಇದೇ ವೇಳೆ ಭರತ್‌ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.