ಕೃಷಿ ಮೇಳದಲ್ಲಿ ಮೊದಲ ದಿನವೇ ಜನ ಸಾಗರ

Team Udayavani, Nov 16, 2018, 11:38 AM IST

krushi.jpg

ಬೆಂಗಳೂರು: ರಾಗಿ, ಭತ್ತ, ಜೋಳ, ತೆಂಗು, ಅಡಕೆ ಹೀಗೆ ನಾನಾ ಬಗೆಯೆ ಹೊಸ ತಳಿಗಳು, ಕೃಷಿ ಉತ್ಪಾದನ ಸಾಮರ್ಥ್ಯ ಹೆಚ್ಚಿಸಬಲ್ಲ ವಿವಿಧ ಮಾದರಿಯ ಪರಿಕರಗಳು, ಕುರಿ, ಕೋಳಿ, ಮೀನು ಸಾಕಾಣಿಕೆ, ಹೈನುಗಾರಿಕೆಯ ದರ್ಶನದ ಕೃಷಿಮೇಳ 2018ಕ್ಕೆ ಗುರುವಾರ ಚಾಲನೆ ಸಿಕ್ಕಿದೆ.

ಮೊದಲ ದಿನ ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಕೃಷಿಕರು, ಕೃಷಿ ತಜ್ಞರು, ಸಾಧಕರು, ಪ್ರೋತ್ಸಾಹಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಕೃಷಿ ಹಾಗೂ ತೋಟಗಾರಿಕಾ ಬೆಳೆಯ ಪ್ರಾತ್ಯಕ್ಷತೆ, ವಸ್ತು ಪ್ರದರ್ಶನ, ಜೈವಿಕ ಇಂಧನ ಹಾಗೂ ಜೈವಿಕ ತಂತ್ರಜ್ಞಾನದ ಬಳಕೆ, ಎರೆಹುಳುವಿನ ಗೊಬ್ಬರ ಘಟಕದ ಜತೆಗೆ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟದ 600ಕ್ಕೂ ಅಧಿಕ ಮಳಿಗೆಳು  ಮೇಳದ ವಿಶೇಷವಾಗಿದೆ.

ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ಕೃಷಿ ಮೇಳಕ್ಕೆ ಚಾಲನೆ ಸಿಕ್ಕಿದ್ದು, ಅಷ್ಟೋತ್ತಿಗಾಗಲೇ ಬಹುತೇಕ ಎಲ್ಲ ಮಳಿಗೆಗಳಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟಕ್ಕೆ ಸಿದ್ಧವಾಗಿತ್ತು. ಸಮಗ್ರ ಕೃಷಿ ಪದ್ಧತಿಯ ಪ್ರಾತ್ಯಕ್ಷತೆಯ ವ್ಯವಸ್ಥೆಯೂ ಮಾಡಲಾಗಿತ್ತು. ಉದ್ಘಾಟನಾ ಕಾರ್ಯಕ್ರಮದ ನಂತರ ವೇದಿಕೆಯಲ್ಲಿ ಕೃಷಿ ಕಲಾವಿದರಿಂದ ಜಾನಪದ ಗೀತೆ ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆಯಿಂದ ಸಂಜೆಯ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಕೃಷಿ ವಿಷಯದ ಆಸಕ್ತರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮೇಳಕ್ಕೆ ಆಗಮಿಸಿದ್ದರು.

ಈ ವರ್ಷ ಕೃಷಿ ಮೇಳದ ಇನ್ನೊಂದು ವಿಶೇಷವೆಂದರೆ, ಮೇಳಕ್ಕೆ ಬಂದಿರುವ ರೈತರಿಗೆ ಉಚಿತ ಆರೋಗ್ಯ ತಪಾಸಣಾ ವ್ಯವಸ್ಥೆ  ಮಾಡಲಾಗಿದೆ. ಮಧುಮೇಹ, ರಕ್ತದೊತ್ತಡ ಸೇರಿದಂತೆ ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ದಿನವೂ ಇದರ ವ್ಯವಸ್ಥೆ ಇರುತ್ತದೆ. ದ್ವಿಚಕ್ರ ವಾಹನ ಹಾಗೂ ಕಾರು ಮೊದಲಾದ ವಾಹನಗಳ ಪಾರ್ಕಿಂಗ್‌ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಮೇಳದಲ್ಲಿ ರಾಗಿಮುದ್ದೆ ಕಾಳು ಸಾರು ಊಟ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಫ‌ುಡ್‌ ಕೋರ್ಟ್‌ನಲ್ಲಿ ಊಟಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ನೂಕುನುಗ್ಗಲು ಇಲ್ಲದೆ, ಸಾವಿರಾರು ಜನರು ಏಕಕಾಲದಲ್ಲಿ ಊಟಕ್ಕೆ ಕುಳಿತುಕೊಳ್ಳಬಹುದಾದ ವ್ಯವಸ್ಥೆ ಮಾಡಲಾಗಿತ್ತು.
 
ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ: ಕೃಷಿ ಮೇಳೆ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸ ಇದ್ದಂತೆ. ಬೆಂಗಳೂರು ನಗರ ಹಾಗೂ ನಗರದ ಹೊರವಲಯದ ಸರ್ಕಾರಿ, ಖಾಸಗಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಿಂದ ವಿದ್ಯಾರ್ಥಿಗಳು ಕೃಷಿ ಮೇಳಕ್ಕೆ ತಂಡೋಪತಂಡವಾಗಿ ಬಂದಿದ್ದರು.

ಕೃಷಿ ಉತ್ಪನ್ನ, ಹೈನುಗಾರಿಕೆ, ಒಳನಾಡು ಮೀನುಗಾರಿಕೆ, ಕೃಷಿ ಪರಿಕರ, ಆಹಾರ ಸಾಮಗ್ರಿ, ನರ್ಸರಿ ಹೀಗೆ ಕೃಷಿ ಮೇಳೆ ಎಲ್ಲ ಮಳಿಗೆಗಳಿಗೂ ಶಾಲಾ ಮಕ್ಕಳು  ಭೇಟಿ ನೀಡಿ, ಅಗತ್ಯ ಮಾಹಿತಿ ಕಲೆ ಹಾಕಿದರು. ಕೃಷಿ ಮೇಳವು ಶಾಲಾ ಮಕ್ಕಳಿಗೆ ಒಂದು ರೀತಿಯ ಅಧ್ಯಯನ ಪ್ರವಾಸವಾಗಿತ್ತು. ಕಾಲೇಜು ವಿದ್ಯಾರ್ಥಿಗಳು ಮಧ್ಯಾಹ್ನದ ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.