ಕಿಕ್‌ ಏರಿಸಿಕೊಳ್ಳಲು ಮುಗಿಬಿದ್ದ ಮದ್ಯಪ್ರಿಯರು

Team Udayavani, Jan 1, 2022, 3:27 PM IST

ಕಿಕ್‌ ಏರಿಸಿಕೊಳ್ಳಲು ಮುಗಿಬಿದ್ದ ಮದ್ಯಪ್ರಿಯರು

ಬೆಂಗಳೂರು: ನೂತನ ವರ್ಷಾಚರಣೆ ಹಾಗೂ ವಾರಾಂತ್ಯ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಶುಕ್ರವಾರ ಮದ್ಯದ ಮಳಿಗೆಗಳ ಮುಂದೆ ಮದ್ಯ ಪ್ರಿಯರ ಸಾಲು ಸಾಲು. ಬೆಳಗ್ಗೆಯಿಂದಲೇ ಮದ್ಯದ ಮಳಿಗೆಗಳ ಮುಂದೆ ಪಾನ ಪ್ರಿಯರು ಕಿಕ್ಕಿರಿದು ತುಂಬಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ನೂತನ ವರ್ಷಾಚರಣೆಗೆ ಕ್ಲಬ್‌, ರೆಸಾರ್ಟ್‌, ಹೋಟೆಲ್‌-ರೆಸ್ಟೋರೆಂಟ್‌ ಗಳಲ್ಲಿ ಅವಕಾಶ ಇಲ್ಲದ ಕಾರಣ ಖಾಸಗಿ ಪಾರ್ಟಿ ಆಯೋಜನೆಗಾಗಿ ಕೇಸ್‌ಗಟ್ಟಲೆ ಮದ್ಯ ಖರೀದಿಸಿದರು.

ಬೆಂಗಳೂರಿನಲ್ಲಂತೂ ಬಹುತೇಕ ಮದ್ಯದಂಗಡಿಗಳ ಮುಂದೆ ದೊಡ್ಡ ಸಾಲು ಕಂಡು ಬಂದಿತು. ಎಂ.ಜಿ.ರಸ್ತೆಯಲ್ಲಿರುವ ಟಾನಿಕ್‌ ಮಳಿಗೆ ಸೇರಿದಂತೆ ಎಂಆರ್‌ಪಿ ಮಳಿಗೆ ಹಾಗೂ ಮಾಲ್‌ಗ‌ಳಲ್ಲಿನ ಮದ್ಯದ ಮಳಿಗೆಗಳಲ್ಲಿ ಪಾನಪ್ರಿಯರು ಮುಗಿಬಿದ್ದು ಮದ್ಯ ಖರೀದಿ ಮಾಡಿದರು.

ಸಾಮಾನ್ಯವಾಗಿ ಹಿಂದಿನ ವರ್ಷಗಳಲ್ಲಿ ಒಂದು ದಿನ ಮಾತ್ರ ನೂತನ ವರ್ಷ ಆಚರಣೆಯಾಗುತ್ತಿತ್ತು. ಆದರೆ, ಈ ಬಾರಿ ಶುಕ್ರವಾರ ರಾತ್ರಿ, ಶನಿವಾರ ಮತ್ತು ಭಾನುವಾರ ಮೂರು ದಿನಗಳ ವಾರಾಂತ್ಯ ರಜೆ ಸಿಕ್ಕಿದೆ. ಹೀಗಾಗಿ, ಮದ್ಯ ಖರೀದಿ ಭರಾಟೆ ಭರ್ಜರಿಯಾಗಿಯೇ ಇತ್ತು.

ನಗರದ ಹೊರ ವಲಯಕ್ಕೆ ಪಾರ್ಟಿ ಶಿಫ್ಟ್: ನಗರದಲ್ಲಿ ಹೋಟೆಲ್‌ಗ‌ಳು, ಪಬ್‌ ಹಾಗೂ ಕ್ಲಬ್‌ಗಳಲ್ಲಿ ಕೊರೊನಾ ನಿಯಮ ಪಾಲನೆ ನಿರ್ಬಂಧ ಹೇರಿರುವುದರಿಂದ ಜನರು ಇಡೀ ರಾತ್ರಿ ಸಂಭ್ರಮಿಸಲು ಅವಕಾಶ ಇಲ್ಲವಾಗಿದೆ.

ಪರಿಣಾಮ, ನಗರದ ನೆಲಮಂಗಲ, ಮಾಗಡಿ, ತಾವರೆಕೆರೆ, ಕನಕಪುರ, ರಾಮನಗರ, ಬಿಡದಿ ಮತ್ತು ಚನ್ನಪಟ್ಟಣ ಸೇರಿದಂತೆ ಸುಮಾರು 50ರಿಂದ 100 ಕಿ.ಮೀ. ದೂರಕ್ಕೆ ಪಾರ್ಟಿಗಳು ಶಿಫ್ಟ್ ಆಗಿದ್ದವು. ಮೂರು ದಿನಗಳ ರಜೆ ಇದೆ. ಬೆಂಗಳೂರಿನಲ್ಲಿ ನೈಟ್‌ ಕರ್ಫ್ಯೂ ಇರುವುದರಿಂದ ಸ್ನೇಹಿತ ರೊಂದಿಗೆ ಹೊಸ ವರ್ಷದ ಸಂಭ್ರಮವನ್ನು ಖುಷಿಯಾಗಿ ಆಚರಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಗರದ ಹೊರ ವಲಯಕ್ಕೆ ಹೋಗಲು ನಿರ್ಧರಿಸಿದ್ದೇವೆ. ಸ್ನೇಹಿತರ ತೋಟದಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಿದ್ದೇವೆ. ಶನಿವಾರ ಮತ್ತು ಭಾನುವಾರ ಎರಡು ದಿನ ರಜೆಯನ್ನು ಕಳೆಯಲು ಮದ್ಯವನ್ನು ಖರೀದಿ ಮಾಡುತ್ತಿದ್ದೇವೆ ಎಂದು ಮದ್ಯ ಖರೀದಿಸಿದ ಪ್ರದೀಪ್‌ ತಿಳಿಸಿದರು.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.