ಅಕ್ರಮ ಚಟುವಟಿಕೆ ತಡೆಯಲು ಜನರ ಸಹಕಾರ ಮುಖ್ಯ

ಸಾರ್ವಜನಿಕರ ಸಹಭಾಗಿತ್ವದಿಂದಲೇ ಸಾಕಷ್ಟು ಪ್ರಕರಣಗಳು ಇತ್ಯರ್ಥ ; ಅಕ್ರಮ ಚಟುವಟಿಕೆ ಬಗ್ಗೆ ಠಾಣೆಗೆ ಮಾಹಿತಿ ನೀಡಿ

Team Udayavani, Sep 2, 2021, 2:53 PM IST

ಅಕ್ರಮ ಚಟುವಟಿಕೆ ತಡೆಯಲು ಜನರ ಸಹಕಾರ ಮುಖ್ಯ

ಬೆಂಗಳೂರು: ನಗರದಲ್ಲಿ ಅಪರಾಧ ನಿಯಂತ್ರಣಕ್ಕೆ ಪೊಲೀಸರ ಕರ್ತವ್ಯಪ್ರಜ್ಞೆ ಎಷ್ಟು ಮುಖ್ಯವೋ? ಸಾರ್ವಜನಿಕರ ಜವಾಬ್ದಾರಿ ಕೂಡ ಮುಖ್ಯ. ಸಾರ್ವಜನಿಕರ ಸಹಭಾಗಿತ್ವದಿಂದಲೇ ಸಾಕಷ್ಟು ಪ್ರಕರಣಗಳು ಇತ್ಯರ್ಥವಾಗಿವೆ.

ಈ ಹಿನ್ನೆಲೆಯಲ್ಲಿ ನಮ್ಮ ಸುತ್ತ-ಮುತ್ತ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳು, ಅಹಿತಕರ ಘಟನೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯ ವಾದಲ್ಲಿ ಸಾರ್ವಜನಿಕರು ಕೂಡಲೇ ಪೊಲೀಸರ ಗಮನಕ್ಕೆ ತರುವುದು ಕೂಡ ಅಪರಾಧ ನಿಯಂತ್ರಣದ ಒಂದು ಭಾಗವಾಗಿದೆ. ಇದಕ್ಕೆ ಪೂರಕ ವಾಗಿ ನಗರದ ವಿವಿಧೆಡೆ ನಡೆಯುತ್ತಿರುವ ಸರ ಕಳವು, ಡಕಾಯಿತಿ, ದರೋಡೆ, ವಂಚನೆ ಸೇರಿ ವಿವಿಧ ಅಪರಾಧ ಎಸಗುವ ಓಜಿಕುಪ್ಪಂ,ತಿರುಚ್ಚಿ, ಇರಾನಿ, ರಾಮ್‌ಜೀ, ಶಾಮ್ಲಿ, ಬವಾರಿಯಾ,ಬೀಲ್ಸ್‌, ನೇಪಾಳಿ ಗ್ಯಾಂಗ್‌ ಮತ್ತು ಅವುಗಳ ಕೃತ್ಯದ ಮಾದರಿ ಬಗ್ಗೆ “ಉದಯವಾಣಿ’ ಕಳೆದ ಎಂಟು ದಿನಗಳಿಂದ “ಇರಲಿ ಎಚ್ಚರ’ ಎಂಬ ಅಂಕಣಗಳನ್ನು ಓದುಗರ ಮುಂದಿಟ್ಟಿತ್ತು.

ಸಾರ್ವಜನಿಕರು ಈ ಗ್ಯಾಂಗ್‌ಗಳ ಚಟುವಟಿಕೆಗಳ ಬಗ್ಗೆ ಕಂಡು ಬಂದರೆ ಹತ್ತಿರದ ಪೊಲೀಸ್‌ ಠಾಣೆ ಅಥವಾ ಪೊಲೀಸ್‌ ಸಹಾಯವಾಣಿಗೆ ಮಾಹಿತಿ ನೀಡಬಹುದು. ಅದರಿಂದ ಅಪರಾಧ ನಿಯಂತ್ರಣದ ಜತೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ನೆರವಾಗಬಹುದು. ಪೊಲೀಸ್‌ ಇಲಾಖೆ ಕೂಡ ಮಾಹಿತಿ ದಾರರ ಹೆಸರನ್ನು ಗೌಪ್ಯವಾಗಿಡಲಿದೆ. ಹೀಗಾಗಿ ಸಾರ್ವಜನಿಕರು ಹೆದರುವ ಅಗತ್ಯವಿಲ್ಲ.

ಇದನ್ನೂ ಓದಿ:‘ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್’ ಮರುನಾಮಕರಣಕ್ಕೆ ಸಂಸದ ಪ್ರತಾಪ್ ಸಿಂಹ ಆಗ್ರಹ ?

ಸಾರ್ವಜನಿಕರ ಜತೆ “ಜನಸ್ನೇಹಿ’ಆಗಿರಲು ಪೊಲೀಸ್‌ ಇಲಾಖೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಹಿರಿಯ ನಾಗರಿಕರ ಜತೆ ಸಂವಾದ, ಮಾಸಿಕ ಸಭೆಗಳು, ಆನ್‌ಲೈನ್‌ ಸಂವಾದಗಳನ್ನು ಆಯೋಜಿಸುತ್ತಿದೆ. ಈ ಮೂಲಕ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ
ಕೆಲಸ ಆಗುತ್ತಿದೆ. ಜತೆಗೆ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಪಿಂಕ್‌ ಹೊಯ್ಸಳ, ಬೀಟ್‌ ವ್ಯವಸ್ಥೆ, ಗಸ್ತು ಹೆಚ್ಚಳ ಮಾಡುವ ಮೂಲಕ ಸಾರ್ವಜನಿಕರಿಗೆ ಹತ್ತಿರವಾಗುತ್ತಿದೆ. ಇದರೊಂದಿಗೆ ಸಾರ್ವಜನಿಕರು ಕೂಡ ಪೊಲೀಸರ ಜತೆಕೈಜೋಡಿಸಿದರೆ ಇನ್ನಷ್ಟು ಪರಿಣಾ
ಮಕಾರಿಯಾಗಿ ಅಕ್ರಮ ಚಟುವಟಿಕೆ ಮಾಡುವವರ ವಿರುದ್ಧ ಸಮರ ಸಾರುವುದರ ಜತೆಗೆ ಅವರ ಹೆಡೆಮುರಿ ಕಟ್ಟಬಹುದು ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.

112ಗೆ ಕರೆ ಮಾಡಿ: ಈ ಮೊದಲು ಪೊಲೀಸ್‌ ಸಹಾಯವಾಣಿ 100 ಇತ್ತು. ಇದೀಗ ಅದನ್ನು “112′ ಆಗಿ ಬದಲಾಯಿಸಲಾಗಿದೆ. ಹೀಗಾಗಿ ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿಗೆ “112’ಗೆ ಕರೆ ಮಾಡಿದರೆ ಕೇವಲ 6-8 ನಿಮಿಷ (ಅದಕ್ಕೂ ಮೊದಲು)ದಲ್ಲಿ ನಿಮ್ಮ ಸಮೀಪ ಹೊಯ್ಸಳ ವಾಹನಗಳು ನೆರವಿಗೆ ಬರಲಿದೆ.

ಸಾರ್ವಜನಿಕರು ಏನು ಮಾಡಬೇಕು?
● ಅಪರಾಧ ನಡೆದಾಗ ಕೂಡಲೇಪೊಲೀಸ್‌ ಸಹಾಯವಾಣಿ112ಗೆ ಕರೆಮಾಡಬೇಕು.
● ಓಡಾಡುವ ರಸ್ತೆಯಲ್ಲಿಅನುಮಾನಾಸ್ಪದ ವಾದವ್ಯಕ್ತಿಗಳು ಕಂಡರೆ ಸಮೀಪದ ಪೊಲೀಸ್‌ ಠಾಣೆಗೆಮಾಹಿತಿ ನೀಡಬೇಕು.
● ರಸ್ತೆಅಪಘಾತ,ಬೆಂಕಿಅವಘಡ, ಗಲಾಟೆ, ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು ಸೇರಿ ಯಾವುದೇ ಅಹಿತಕರ ಘಟನೆ ಕಂಡರೆ ಪೊಲೀಸ್‌ ಸಹಾಯವಾಣಿಗೆ ಮಾಹಿತಿ ನೀಡಬೇಕು.
● ಪೊಲೀಸ್‌ ಸಹಾಯವಾಣಿಗೆ ಕರೆ ಮಾಡುವುದರ ಜತೆಗೆ ಸಾಮಾಜಿಕ ಜಾಲತಾಣ ಟ್ವಿಟರ್‌,ಫೇಸ್‌ಬುಕ್‌, ಇನ್‌ಸ್ಟ್ರಾಗ್ರಾಂ(ಬೆಂಗಳೂರು ಸಿಟಿ ಪೊಲೀಸ್‌) ಮೂಲಕವೂ ದೂರು ನೀಡಬಹುದು.
● ತಮ್ಮಮನೆ, ಕಟ್ಟಡಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಅಪರಾಧ ಕೃತ್ಯಗಳ ಬಗ್ಗೆ ಪೊಲೀಸರಿಗೆ ನೀಡಬಹುದು.

ಉದಯವಾಣಿ ಸರಣಿ: ಕಮಿಷನರ್‌ ಮೆಚ್ಚುಗೆ
ಈ ಕುರಿತು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, “ಉದಯವಾಣಿ’ಕಳ್ಳರ ಗ್ಯಾಂಗ್‌ಗಳ ಕೃತ್ಯದ ಮಾದರಿ ಬಗ್ಗೆ ಸರಣಿ ಲೇಖನಗಳನ್ನು ಪ್ರಕಟಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿ ಸುತ್ತಿದೆ. ಈ ರೀತಿಯ ವರ್ತನೆಗಳು, ತಮ್ಮ ವ್ಯಾಪ್ತಿಯಲ್ಲಿ ಹೊಸಬರು ಓಡಾಡುತ್ತಿದ್ದರೆ , ಮನೆ, ವಾಣಿಜ್ಯಕಟ್ಟಡಗಳ ಬಗ್ಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರೆ ಕೂಡಲೇ ಸ್ಥಳೀಯ ಪೊಲೀಸ್‌ ಠಾಣೆ ಅಥವಾ ಪೊಲೀಸ್‌ ಸಹಾಯವಾಣಿ 112ಗೆ ಮಾಹಿತಿ ನೀಡಬೇಕು. ಸಣ್ಣ-ಪುಟ್ಟ ಹೋಟೆಲ್‌ಗ‌ಳಲ್ಲಿ ಕೆಲಸವಿಲ್ಲದೆ, ಉಳಿದುಕೊಳ್ಳುವವರ ಬಗ್ಗೆ ಮಾಹಿತಿ ನೀಡಬೇಕು. ಸಾಧ್ಯವಾದಷ್ಟು ತಮ್ಮ ‌ ಮನೆ, ಕಟ್ಟಡದಲ್ಲಿ ಅಳವಡಿಸಿಕೊಂಡಿರುವ ಸಿಸಿ ಕ್ಯಾಮೆರಾದ ಡಿವಿಆರ್‌ ಸಾಮರ್ಥ್ಯ ಹೆಚ್ಚಿಸಿಕೊಂಡರೆ ಒಳಿತು ಎಂದರು.

ಕಳ್ಳರ ಗ್ಯಾಂಗ್‌ ಬಗ್ಗೆ ಉದಯವಾಣಿ ಸಾರ್ವಜನಿಕಜಾಗೃತಿ ಮೂಡಿಸುತ್ತಿರುವುದು ಒಳ್ಳೆಯಬೆಳವಣಿಗೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್‌ ಸಹಾಯವಾಣಿ ಮತ್ತು ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಪೊಲೀಸರು ಕೂಡ ಮಾಹಿತಿ ನೀಡಿದ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟಾಗ ಮಾತ್ರ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡುತ್ತಾರೆ.
– ಟೈಗರ್‌ ಅಶೋಕ್‌ ಕುಮಾರ್‌,
ನಿವೃತ್ತ ಪೊಲೀಸ್‌ ಅಧಿಕಾರಿ

ನಗರದಲ್ಲಿ ಮುಖ್ಯವಾಗಿ ನಡೆಯುವ ಸರಗಳ್ಳತನ ಹಾಗೂ ಇತರೆ ಅಪರಾಧ ಕೃತ್ಯಗಳನ್ನು ನಿರಂತರವಾಗಿ ಎಸಗುವ ಗ್ಯಾಂಗ್‌ಗಳ ಮಾದರಿ ಬಗ್ಗೆ “ಉದಯವಾಣಿ’ ಕಳೆದ ಎಂಟು ದಿನಗಳಿಂದ ವಿಸ್ಕೃತ ವರದಿ ಮೂಲಕ ಅರಿವು ಮೂಡಿಸುತ್ತಿದೆ. ಈ ಮೂಲಕ ಸಾರ್ವಜನಿಕರು ಎಚ್ಚೆತ್ತುಕೊಳ್ಳುವು
ದರ ಜತೆಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಅಪರಾಧ ತಡೆಗಟ್ಟಬಹುದು.
– ಡಾ ಎಸ್‌.ಉಮೇಶ್‌, ಹಿರಿಯ ವಕೀಲ,
ಅಧ್ಯಕ್ಷರು, ಕಬ್ಬನ್‌ ಪಾರ್ಕ್‌ ನಡಿಗೆದಾರರ ಸಂಘ

-ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.