ದಲಿತರಿಗೆ ಅಧಿಕಾರ ನೀಡದೆ ನಿರಂತರ ಶೋಷಣೆ: ನಾಗೇಶ್
Team Udayavani, May 10, 2018, 11:14 AM IST
ಮಹದೇವಪುರ: ದಲಿತರ ಅಭಿವೃದ್ಧಿಗೆ ಸದಾ ಸಿದ್ಧ ಎನ್ನುವ ರಾಷ್ಟ್ರೀಯ ಪಕ್ಷಗಳು ದಲಿತರಿಗೆ ಅಧಿಕಾರ ನೀಡದೆ ನಿರಂತರವಾಗಿ ಶೋಷಣೆ ಮಾಡುತ್ತಾ ಬಂದಿವೆ ಎಂದು ಪಕ್ಷೇತರ ಅಭ್ಯರ್ಥಿ ನಲ್ಲೂರಹಳ್ಳಿ ಟಿ. ನಾಗೇಶ್ ಹೇಳಿದರು.
ಮಹದೇವಪುರ ಕ್ಷೇತ್ರದ ಗರುಡಾಚರ ಪಾಳ್ಯ ವಾರ್ಡ್ನ ಸೀತಾರಾಮಪಾಳ್ಯ, ಬಸವಣ್ಣನಗರ, ಹೂಡಿ, ಗರುಡಾಚಾರ ಪಾಳ್ಯ, ಕಾವೇರಿನಗರ ಸೇರಿ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ದಲಿತರಿಗೆ ಕಲ್ಪಿಸಿರುವ ಮೀಸಲಾತಿ ಹಕ್ಕನ್ನು ಕಸಿದುಕೊಂಡಿರುವ ರಾಷ್ಟ್ರೀಯ ಪಕ್ಷಗಳು, ನಿರಂತರ ದೌರ್ಜನ್ಯ ಎಸಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಎಸ್ಸಿ ಮೀಸಲು ಕ್ಷೇತ್ರವಾಗಿರುವ ಮಹದೇವಪುರದಲ್ಲಿ ಆದಿ ಕರ್ನಾಟಕ ಮತ್ತು ಆದಿ ದ್ರಾವಿಡ ಸಮುದಾಯದ
1.50 ಲಕ್ಷಕ್ಕೂ ಹೆಚ್ಚು ಜನ ವಾಸವಿದ್ದಾರೆ. ಆದರೂ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿ ಗಳಿಗೆ ರಾಷ್ಟ್ರೀಯ ಪಕ್ಷಗಳು ಟಿಕೆಟ್
ನೀಡಿಲ್ಲ. ಈ ಮೂಲಕ ಶೋಷಿತ ವರ್ಗದ ವರಿಗೆ ರಾಜಕೀಯ ನೀಡುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವನ್ನು ರಾಷ್ಟ್ರೀಯ ಪಕ್ಷಗಳು ಕಡೆಗಣಿಸಿವೆ. ಈ ಬಾರಿ ಮಹದೇವಪುರ ಕ್ಷೇತ್ರದ ಜನತೆ ರಾಷ್ಟ್ರೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ