ಪೆಟ್ರೋಲ್‌, ಡೀಸೆಲ್‌ ದರ 2 ರೂ. ಇಳಿಕೆ

Team Udayavani, Sep 18, 2018, 6:00 AM IST

state-government-petrol-diesel.jpg

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ವಿಧಿಸುತ್ತಿದ್ದ ಸೆಸ್‌ ಕಡಿಮೆಗೊಳಿಸಿದ್ದು, ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪ್ರತಿ ಲೀಟರ್‌ಗೆ 2 ರೂ. ಇಳಿಕೆಯಾಗಿದೆ.

ರಾಜ್ಯ ಸರ್ಕಾರ ಪೆಟ್ರೋಲ್‌ ಮೇಲೆ ವಿಧಿಸುತ್ತಿದ್ದ ಸೆಸ್‌ ಶೇ. 3.25ರಷ್ಟು ಮತ್ತು ಡೀಸೆಲ್‌ ಮೇಲಿನ ಸೆಸ್‌ ಶೇ. 3.27ರಷ್ಟು ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಮಂಗಳವಾರದಿಂದ ಹೊಸ ದರ ಜಾರಿಗೆ ಬರಲಿದೆ. ಇದರೊಂದಿಗೆ ಗೋವಾ ಹೊರತುಪಡಿಸಿ ದಕ್ಷಿಣ ಭಾರತದಲ್ಲೇ ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಅತಿ ಕಡಿಮೆ ಎನ್ನುವಂತಾಗಿದೆ.

ಇದರೊಂದಿಗೆ ರಾಜಸ್ತಾನ್‌, ಆಂಧ್ರಪ್ರದೇಶಗಳಂತೆ ರಾಜ್ಯ ಸರ್ಕಾರವೂ ತೆರಿಗೆ ಇಳಿಸುವ ಮೂಲಕ ದರ ಕಡಿಮೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಬಿಜೆಪಿಗೆ, ನಾವು ತೆರಿಗೆ ಇಳಿಸಿದ್ದೇವೆ. ಈಗ ನೀವು ದರ ಇಳಿಸುವಂತೆ ಕೇಂದ್ರದ ಮೇಲೆ ಒತ್ತಡ ತನ್ನಿ ಎಂದು ರಾಜ್ಯ ಸರ್ಕಾರ ತಿರುಗೇಟು ನೀಡಿದೆ.

ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಪ್ರತಿನಿತ್ಯ ಏರಿಳಿತವಾಗುತ್ತಿದೆ. ಸೋಮವಾರ ರಾಜ್ಯದಲ್ಲಿ (ಬೆಂಗಳೂರು) ಪೆಟ್ರೋಲ್‌ ದರ ಲೀಟರ್‌ಗೆ 84.80 ರೂ. ಇದ್ದು, ಮಂಗಳವಾರ ದೇಶಾದ್ಯಂತ ಬೆಲೆ ಬದಲಾವಣೆಯಾಗದಿದ್ದಲ್ಲಿ ಈ ದರ 82.80 ರೂ. ಆಗಲಿದೆ. ಅದೇ ರೀತಿ ಸೋಮವಾರ ಲೀಟರ್‌ಗೆ 76.21 ರೂ. ಇದ್ದದ್ದು ಮಂಗಳವಾರ 74.21ರೂ.ಗೆ ಇಳಿಯಲಿದೆ.

ನೆರೆ ರಾಜ್ಯಗಳಿಗೆ ಹೋಲಿಸಿದರೆ ಈಗಾಗಲೇ ಪೆಟ್ರೋಲ್‌ ಮತ್ತು ಡೀಸೆಲ್‌ ದರ ರಾಜ್ಯದಲ್ಲಿ ಕಡಿಮೆಯಿದೆ. ಆದರೂ ರಾಜ್ಯದ ಜನರ ಹಿತದೃಷ್ಟಿಯಿಂದ ರಾಜ್ಯದ ತೆರಿಗೆ ದರ ಇಳಿಸುವ ಮೂಲಕ ಗ್ರಾಹಕರ ಮೇಲಿನ ದರ ಏರಿಕೆ ಹೊರೆಯನ್ನು ತಪ್ಪಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರುಮುಖದಲ್ಲಿ ಸಾಗುತ್ತಿದ್ದು, ಇದನ್ನು ಖಂಡಿಸಿ ಕಳೆದ ಸೋಮವಾರ ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳು ಭಾರತ್‌ ಬಂದ್‌ಗೆ ಕರೆ ನೀಡಿದ್ದವು. ಅಂದು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಸುವ ಉದ್ದೇಶದಿಂದ ಸೆಸ್‌ ಕಡಿಮೆ ಮಾಡುವ ಬಗ್ಗೆ ಪ್ರಕಟಿಸಿದ್ದರಲ್ಲದೆ, ಈ ಕುರಿತು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಈ ಮಧ್ಯೆ ಮಿತ್ರಪಕ್ಷ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರೂ ತೆರಿಗೆ ಇಳಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದರು.

ಬೆಂಗಳೂರಿಗೆ ವಾಪಸಾದ ಬಳಿಕ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಗಳು, ದರ ಇಳಿಕೆ ಕುರಿತು ಪ್ರಸ್ತಾವನೆ ಸಿದ್ಧಪಡಿಸುವಂತೆ ಸೂಚಿಸಿದ್ದರು. ಅದರಂತೆ ಅಧಿಕಾರಿಗಳು ಸಿದ್ಧಪಡಿಸಿದ ಪ್ರಸ್ತಾವನೆ ಆಧರಿಸಿ ಸೋಮವಾರ ದರ ಇಳಿಕೆ ಆದೇಶ ಹೊರಡಿಸಲಾಗಿದೆ. ಜತೆಗೆ ಮುಂದಿನ ದಿನಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿದಲ್ಲಿ ಮತ್ತೆ ತೆರಿಗೆ ದರ ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದೂ ಸರ್ಕಾರ ಹೇಳಿದೆ.

ಮಂಗಳವಾರದ ದರ (ರಾಷ್ಟ್ರ ಮಟ್ಟದಲ್ಲಿ ದರ ಬದಲಾವಣೆ ಆಗದಿದ್ದಲ್ಲಿ)
ಸ್ಥಳ    ಪೆಟ್ರೋಲ್‌    ಡೀಸೆಲ್‌

ಬೆಂಗಳೂರು (ಕರ್ನಾಟಕ)    82.80 ರೂ.    74.21 ರೂ.
ಹೊಸೂರು (ತಮಿಳುನಾಡು) 86.98 ರೂ.    79.58 ರೂ.
ಕಾಸರಗೋಡು (ಕೇರಳ)    84.93 ರೂ.    78.53 ರೂ.
ಅನಂತಪುರ (ಆಂಧ್ರಪ್ರದೇಶ)    86.47 ರೂ.    79.37 ರೂ.
ಹೈದರಾಬಾದ್‌ (ತೆಲಂಗಾಣ)    87.01 ರೂ.    80.25 ರೂ.
ಕಾಗಲ್‌ (ಮಹಾರಾಷ್ಟ್ರ)    89.71 ರೂ.    77.40 ರೂ.
ಪಣಜಿ (ಗೋವಾ)    75.60 ರೂ.    75.09 ರೂ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.