ಸುರೇಶ್‌ ಬಳಿ ಇತ್ತು ಪಿಸ್ತೂಲ್‌

Team Udayavani, Aug 1, 2018, 10:35 AM IST

lankesh.jpg

ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್‌ ಹತ್ಯೆಗೆ ಬಳಸಿದ್ದ ಪಿಸ್ತೂಲ್‌ ಇತ್ತೀಚೆಗಷ್ಟೇ ಬಂಧನಕ್ಕೊಳಗಾಗಿರುವ ಕುಣಿಗಲ್‌ ಮೂಲದ ಸುರೇಶ್‌ ಬಳಿಯೇ ಸುಮಾರು 20 ದಿನಗಳ ಕಾಲ ಇತ್ತು ಎಂಬುದು ಆರೋಪಿಯ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆಯಷ್ಟೇ ಆರೋಪಿಯನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು ಸುರೇಶ್‌ ನಿಂದ ಕೆಲವೊಂದು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

2017 ಸೆ.5 ರಂದು ಗೌರಿಲಂಕೇಶ್‌ ಮೇಲೆ ಗುಂಡು ಹಾರಿಸಿದ ಪರಶುರಾಮ್‌ ವಾಗ್ಮೊರೆ ಪಿಸ್ತೂಲ್‌ ಅನ್ನು ಗಣೇಶ್‌ ಮಸ್ಕಿಗೆ ಕೊಟ್ಟು ಮರು ದಿನ ವಿಜಯಪುರದ ಕಡೆ ಪ್ರಯಾಣ ಬೆಳೆಸಿದ್ದ. ಬಳಿಕ ಆ ಪಿಸ್ತೂಲ್‌ ಅನ್ನು ಅಮೋಲ್‌ ಕಾಳೆ ಪಡೆದುಕೊಂಡಿದ್ದ.

 ಇತ್ತ ಪ್ರಕರಣ ಕುರಿತು ವಿಶೇಷ ತಂಡ ರಚನೆಯಾಗುತ್ತಿದ್ದಂತೆ ಆತಂಕಗೊಂಡ ಅಮೋಲ್‌ ಕಾಳೆ ಪಿಸ್ತೂಲ್‌ ಅನ್ನು ಸುರೇಶ್‌ಗೆ ಕೊಟ್ಟು ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದ. ಅನಂತರ ಸುಮಾರು 20 ದಿನಗಳ ಕಾಲ ಸುರೇಶ್‌, ಮಾಗಡಿ ಮುಖ್ಯರಸ್ತೆಯಲ್ಲಿರುವ ಶ್ರೀಸಾಯಿಲಕ್ಷ್ಮೀ ಲೇಔಟ್‌ನ ವಾಣಿಜ್ಯ ಮಳಿಗೆಯಲ್ಲಿ ಇಟ್ಟಿದ್ದ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಪಿಸ್ತೂಲ್‌ ಪಡೆದ ವ್ಯಕ್ತಿ ಯಾರು?: ಗೌರಿಹತ್ಯೆ ಪ್ರಕರಣ ಕೂಡ ಕಲಬುರ್ಗಿ ಪ್ರಕರಣದಂತೆ ತಣ್ಣಗಾಗುತ್ತದೆ ಎಂದು ಭಾವಿಸಿದ್ದ ಅಮೋಲ್‌ ಕಾಳೆ ಪಿಸ್ತೂಲ್‌ ಅನ್ನು ಸುರೇಶ್‌ಗೆ ಕೊಟ್ಟು ಹೋಗಿದ್ದ. ಆದರೆ, ಎಸ್‌ಐಟಿ ತನಿಖಾ ವೇಗದಿಂದ ಗಾಬರಿಗೊಂಡ ಅಮೋಲ್‌ ಕಾಳೆ ಕೂಡಲೇ ಪಿಸ್ತೂಲ್‌ ಅನ್ನು ತಾನು ಸೂಚಿಸಿದ ವ್ಯಕ್ತಿಗೆ ಕೊಡುವಂತೆ ಸುರೇಶ್‌ಗೆ ತಿಳಿಸಿದ್ದ.
 
ಅದರಂತೆ ಆರೋಪಿ ಕೊಟ್ಟಿದ್ದಾನೆ. ಆದರೆ, ಆತ ಯಾರು ಎಂಬುದು ಇನ್ನು ನಿಗೂಢವಾಗಿದೆ. ಈ ಮಧ್ಯೆ ಆರೋಪಿ ಸುರೇಶ್‌ನನ್ನು ವಶಕ್ಕೆ ಪಡೆಯುವ ವೇಳೆಯೊಳಗೆ ಪಿಸ್ತೂಲ್‌ ಐದಾರು ಮಂದಿ ಕೈ ಬದಲಾಗಿರುವ ಸಾಧ್ಯತೆಯಿದೆ. ಇಲ್ಲವಾದಲ್ಲಿ ಈತನೇ ಇತರೆ ಸಾಕ್ಷ್ಯಗಳನ್ನು ಸುಟ್ಟುಹಾಕಿದ್ದಂತೆ ಪಿಸ್ತೂಲ್‌ ಅನ್ನು ನಾಶ ಮಾಡಿರಬಹುದು ಎಂದು ಎಸ್‌ಐಟಿ ಮೂಲಗಳು ಶಂಕೆ ವ್ಯಕ್ತಪಡಿಸಿವೆ.

ನರೇಂದ್ರ ನಾಯಕ್‌ ಹತ್ಯೆಗೂ ಸಂಚು?: ಗೌರಿ ಹಂತಕರ ಪೈಕಿ ಕೆಲವರು ಮಂಗಳೂರು ಮೂಲದ ವಿಚಾರವಾದಿ, ಮೌಡ್ಯ ವಿರೋಧಿ ಕಾರ್ಯಕರ್ತ ನರೇಂದ್ರ ನಾಯಕ್‌ ಹತ್ಯೆಗೂ ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ. ಎರಡು ಬಾರಿ ನರೇಂದ್ರ ನಾಯಕ್‌ ಮನೆ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಅನುಮಾನಸ್ಪದವಾಗಿ ಓಡಾಡುತ್ತಿರುವ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಗಳನ್ನು ಸಂಗ್ರಹಿಸಿರುವ ಎಸ್‌ಐಟಿ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ. 

8 ದಿನ ಎಸ್‌ಐಟಿ ವಶಕ್ಕೆ  ಸುರೇಶ್‌ ಪತ್ರಕರ್ತೆ ಗೌರಿಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕುಣಿಗಲ್‌ ಮೂಲದ ಸುರೇಶ್‌ನನ್ನು 8 ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಶಕ್ಕೆ ನೀಡಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಸುರೇಶ್‌ ಪ್ರಮುಖ ಪಾತ್ರವಹಿಸಿದ್ದು, ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಹೀಗಾಗಿ ಆರೋಪಿಯನ್ನು ವಶಕ್ಕೆ ಪಡೆಯುವಂತೆ ಎಸ್‌ಐಟಿ ಪರ ಸರ್ಕಾರಿ ವಿಶೇಷ ಅಭಿಯೋಜಕ ಶ್ರೀಶೈಲ ವಡವಡಗಿ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಸಂಬಂಧ ಸೋಮವಾರವೇ ಅರ್ಜಿಯ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಾಧೀಶ ವಿ.ಪ್ರಕಾಶ್‌ ಕಾಯ್ದಿರಿಸಿದ್ದ ತೀರ್ಪನ್ನು ಮಂಗಳವಾರ ಪ್ರಕಟಿಸಿದರು. ಇದಕ್ಕೆ ಆಕ್ಷೇಪಿಸಿದ ಸುರೇಶ್‌ ಪರ ವಕೀಲ ಅಮೃತೇಶ್‌, ತಮ್ಮ ಕಕ್ಷಿದಾರರಿಗೆ ತನಿಖಾಧಿಕಾರಿಗಳು ಈಗಾಗಲೇ ಬಹಳ ಹಿಂಸೆ ನೀಡಿದ್ದಾರೆ. ಹೀಗಾಗಿ 8 ದಿನಗಳ ಕಾಲ ಎಸ್‌ಐಟಿ ವಶಕ್ಕೆ ನೀಡಬಾರದು. ಮತ್ತೆ ಈತನ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ವಾದಿಸಿದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.