ಪ್ಲಾಸ್ಟಿಕ್ ಬಳಕೆ: 2.12 ಕೋಟಿ ರೂ. ದಂಡ ವಸೂಲಿ
Team Udayavani, Nov 11, 2019, 10:48 AM IST
ಬೆಂಗಳೂರು: ಕಳೆದ ಏಪ್ರಿಲ್ನಿಂದ ಅಕ್ಟೋಬರ್ ಅಂತ್ಯದವರೆಗೆ ಪರಿಸರಕ್ಕೆ ಮಾರಕವಾಗುವ 37 ಸಾವಿರ ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶ ಪಡಿಸಿಕೊಂಡಿದ್ದು, 2.12 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಅಭಿಯಾನದಲ್ಲಿ ಕಳೆದ ಎಪ್ರಿಲ್ನಿಂದ ಅಕ್ಟೋಬರ್ ಅಂತ್ಯದವರೆಗೆ ಬಿಬಿಎಂಪಿಯ ಎಂಟು ವಲಯದ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿ ಬ್ಯಾಗ್, ಸ್ಪೂನ್, ಪ್ಲೇಟ್ ಸೇರಿದಂತೆ ಇನ್ನಿತರ ಮಾರಾಟ ಮಳಿಗೆ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುವ ಹೋಟಲ್, ರೆಸ್ಟೋರೆಂಟ್, ಅಂಗಡಿ ಮುಂಗಟ್ಟುಗಳ ಮೇಲೆ ಬಿಬಿಎಂಪಿ ಸಾರ್ವಜನಿಕ ಆರೋಗ್ಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು, ಒಟ್ಟು 37,577 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆದಿದ್ದಾರೆ. ನಿಷೇಧಿತ ಪ್ಲಾಸ್ಟಿಕ್ ಮಾರಾಟಗಾರರಿಂದ 2,12,39,141 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)ಡಿ. ರಂದೀಪ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ