ಆರಕ್ಷಕರ ಅದ್ಧೂರಿ ಪರಿಸರ ದಿನ


Team Udayavani, Jun 6, 2019, 3:05 AM IST

sasi-nie

ಬೆಂಗಳೂರು: ಕೈಯಲ್ಲಿ ಲಾಠಿ ಹಿಡಿದು ಕಾನೂನು ಸುವ್ಯವಸ್ಥೆ ಕಾಪಾಡುವ, ಸಂಚಾರ ನಿರ್ವಹಣೆ ಮಾಡುವ ನಗರ ಪೊಲೀಸರು ಬುಧವಾರ ಸಸಿ ನೆಡುವ ಮೂಲಕ “ಪರಿಸರ ದಿನಾಚರಣೆ’ ಆಚರಿಸಿದರು.

ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ನಗರದ ಜಿ.ಕೆ. ಎಚ್‌.ಪಿ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಜತೆ ಗಿಡ ನೆಟ್ಟು ಪರಿಸರ ಜಾಗೃತಿ, ಪರಿಸರ ಮಹತ್ವದ ಬಗ್ಗೆ ಸಲಹೆ ನೀಡಿದರು. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ನೇತೃತ್ವದಲ್ಲಿ ಜಯನಗರ ಉಪವಿಭಾಗದ ಠಾಣೆಗಳಲ್ಲಿ ನಡೆದ ಆರಕ್ಷಕರ ಸಸಿ ನೆಡುವ ಕಾರ್ಯಕ್ಕೆ ಹಿರಿಯ ನಟ ಶ್ರೀನಾಥ್‌, ಸಾಹಿತಿ ಬರಗೂರು ರಾಮಚಂದ್ರಪ್ಪ ಸಾಥ್‌ ನೀಡಿದರು.

ಜಯನಗರ, ಬಸವನಗುಡಿ, ಜೆ.ಪಿ ನಗರ ಸೇರಿದಂತೆ ಹಲವು ಪೊಲೀಸ್‌ ಠಾಣೆಗಳ ಆವರಣಗಳಲ್ಲಿ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯ ಆಯೋಜಿಸಲಾಗಿತ್ತು. . ಠಾಣಾ ಸಿಬ್ಬಂದಿಯು ತಾವು ನೆಟ್ಟ ಸಸಿಗಳನ್ನು ಪೋಷಿಸುವ ಜವಾಬ್ದಾರಿ ಹೊತ್ತುಕೊಂಡರು. ಜತೆಗೆ, ಪ್ರತಿವರ್ಷವೂ ಸಸಿ ನೆಟ್ಟು ಪೋಷಿಸುವುದಾಗಿ ಕಂಕಣ ತೊಟ್ಟರು.

ಸಿಬ್ಬಂದಿ ಹೆಸರಲ್ಲಿ ಒಂದೊಂದು ಸಸಿ: ಪೀಣ್ಯ ಸಂಚಾರ ಪೊಲೀಸ್‌ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಎಸ್‌. ಪಾರ್ವತಮ್ಮ ಅವರ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ ವಿಶೇಷವಾಗಿತ್ತು. ಠಾಣೆಯ ಆವರಣದಲ್ಲಿ 35ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ನೀರೆರೆಯಲಾಯಿತು. ಈ ವರ್ಷ ಸೇವೆಯಿಂದ ನಿವೃತ್ತರಾಗಲಿರುವ ಸಿಬ್ಬಂದಿಯ ಹೆಸರಿನಲ್ಲಿ ಒಂದೊಂದು ಸಸಿ ನೆಟ್ಟಿದ್ದು ವಿಶೇಷವಾಗಿತ್ತು.

ಹಲವು ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಿಬ್ಬಂದಿ ನಿವೃತ್ತರಾಗುತ್ತಾರೆ. ಅವರ ನೆನಪು ಸದಾಕಾಲ ಉಳಿಯುವಂತೆ ಸ್ಮರಣೀಯವಾಗಿಸಲು ಸಸಿಗಳನ್ನು ಅವರ ಹೆಸರಿನಲ್ಲಿ ನೆಡಲಾಯಿತು. ಇದು ನಾವು ಅವರಿಗೆ ಸಲ್ಲಿಸುವ ಗೌರವವೂ ಸಹ ಆಗಿದೆ. ಠಾಣೆಯ ಎಲ್ಲ ಸಿಬ್ಬಂದಿಗಳಿಗೂ ಸಸಿಯೊಂದನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಪೋಷಿಸುವ ಬಗ್ಗೆ ಪ್ರಮಾಣ ವಚನ ಬೋಧಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ವಿವರಿಸಿದರು.

ಮಲ್ಲೇಶ್ವರಂ ಸಂಚಾರ ಠಾಣೆ ಸೇರಿದಂತೆ ಉತ್ತರ ವಿಭಾಗದ ಸಂಚಾರ ಪೊಲೀಸ್‌ ಠಾಣಾ ವಿಭಾಗ, ಬಾಣಸವಾಡಿ ಸಂಚಾರ ಠಾಣೆ ಸಿಬ್ಬಂದಿಯೂ ವೃಕ್ಷ ನೆಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಉಳಿದಂತೆ ನಗರದ ಹಲವು ಠಾಣೆಯ ಸಿಬ್ಬಂದಿಯು ಪರಿಸರ ದಿನದ ಅಂಗವಾಹಿ ನಡೆಸಿದ ಸಸಿನೆಡುವ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

4-sdsda

ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

sidda dkshi

ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

Raj THakre

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm

ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ

2death

ಬೈಕ್‌ಗೆ ಢಿಕ್ಕಿ ಹೊಡೆದ ಕಾರು: ಫ್ಲೈಓವರ್‌ನಿಂದ ಬಿದ್ದು ವ್ಯಕ್ತಿ ಸಾವು; ಬಾಲಕ ಗಂಭೀರ  

Untitled-1

5 ಸಾವಿರ ರಸ್ತೆ ಗುಂಡಿ ಮುಚ್ಚಿದ ಪಾಲಿಕೆ

Untitled-1

ಗೋಡೆ ಕೊರೆದು 5 ಕೆ.ಜಿ ಚಿನ್ನ ದೋಚಿದ 10 ಮಂದಿ ಅಂತಾರಾಜ್ಯ ಕಳ್ಳರ ಬಂಧನ

ಶಾಪಿಂಗ್‌ ಮಾಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು : ಶಾಪಿಂಗ್‌ ಮಾಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

14appeal

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

18

ಮುಂಗಾರು ಹಂಗಾಮಿಗೆ ರೈತ ಸಜ್ಜು

17

ಪ್ರವಾಹ ತಡೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

16

ಮಳೆ-ಜಲಾಶಯ ಮಾಹಿತಿ ವಿನಿಮಯಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.