ಚಿತ್ರಗಳಲ್ಲಿ ಮೂಡಿಬಂದ ರಾಜಕಾರಣ

Team Udayavani, Aug 30, 2019, 3:06 AM IST

chitragallalli

ಬೆಂಗಳೂರು: ಅಲ್ಲಿ ಚಿತ್ರಗಳು ಮಾತಾಡುತ್ತಿವೆ. ಕಲ್ಪನೆಯ ನೂರಾರು ಕಥೆ ಹೇಳುತ್ತಿವೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್‌.ಡಿ ಕುಮಾರ ಸ್ವಾಮಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸೇರಿದಂತೆ ಹಲವು ಘಟಾನುಘಟಿ ರಾಜಕೀಯ ಮುತ್ಸದ್ದಿಗಳ ಬದುಕಿನ ಅನುಪಮ ಕ್ಷಣಗಳನ್ನು ಭಿನ್ನ ನೋಟದಲ್ಲಿ ನೋಡುಗರಿಗೆ ಕಟ್ಟಿಕೊಟ್ಟಿವೆ.

ಒಂದೊಂದು ಫೋಟೋ ಒಂದೊಂದು ರೀತಿ ಕಥೆಯನ್ನು ಕಣ್ಮುಂದೆ ತೆರೆದಿಡಲಿದ್ದು ರಾಜಕೀಯ ನಾಯಕರ ಉಟೋಪಚಾರ, ಹೋರಾಟ, ಚರ್ಚೆ, ಹಾಸ್ಯ ಸೇರಿ ಹಲವು ವಿಷಯಗಳನ್ನು ಚಿತ್ರಗಳೇ ವಿವರಿಸುತ್ತಿವೆ. ಫೋಟೋ ಜರ್ನಲಿಸ್ಟ್‌ ಅಸೋಸಿಯೋಷನ್‌ ಆಫ್ ಬೆಂಗಳೂರು, ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಂಡಿದ್ದು, ಉಪಮುಖ್ಯಮಂತ್ರಿ ಡಾ.ಸಿ.ಎಸ್‌.ಅಶ್ವತ್ಥನಾರಾಯಣ ಮತ್ತು ಚಿತ್ರನಟಿ ರಾಗಿಣಿ ದ್ವಿವೇದಿ ಗುರುವಾರ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಸದನದಲ್ಲಿ ಸ್ಪೀಕರ್‌ ಆಸನದ ಮುಂದೆ ಏಕಾಂಗಿಯಾಗಿ ಧರಣಿ ಕುಳಿತಿರುವುದು, ಮಾಜಿ ಸಿಎಂ ಸಿದ್ದರಾಮಯ್ಯ ಗಾಳಿಯಲ್ಲಿ ತೇಲಿ ಹೋಗುತ್ತಿರುವ ತಮ್ಮ ಟವೆಲ್‌ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಚಿತ್ರಗಳು ಗಮನಸೆಳೆಯುತ್ತಿವೆ. ಛಾಯಾಚಿತ್ರ ವೀಕ್ಷಿಸುವ ವೇಳೆ ಸಿದ್ದರಾಮಯ್ಯ ಅವರ ಫೋಟೋ ನೋಡಿ ಚಿತ್ರನಟಿ ರಾಗಿಣಿ ದ್ವಿವೇದಿ ಬೆರಗಾದರು.

ಈ ಫೋಟೋ ಎಲ್ಲಿ ತೆಗೆದಿದ್ದು, ಯಾರು ತೆಗೆದಿದ್ದು ಎಂದು ಆ ಫೋಟೋ ನೋಡುತ್ತಲೆ ಹಿರಿಯ ಛಾಯಾಗ್ರಹಕರೊಬ್ಬರಿಂದ ಸನ್ನಿವೇಶದ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿ ಡಾ.ಸಿ.ಎಸ್‌.ಅಶ್ವತ್ಥನಾರಾಯಣ ಮಾತನಾಡಿ, ಚಿಂತನೆಗೆ ಪೂರಕವಾಗಿರುವ ಫೋಟೋಗಳು ಇಲ್ಲಿವೆ.

ಹಳೆಯ ಕಥೆಗಳನ್ನು ನಮ್ಮ ಕಣ್ಮುಂದೆ ತಂದು ನಿಲ್ಲಿಸುತ್ತವೆ. ಇದೊಂದು ಅಪರೂಪದ ಛಾಯಾಚಿತ್ರ ಪ್ರದರ್ಶನ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಕಮಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 150 ಪತ್ರಿಕಾ ಛಾಯಾಗ್ರಹಕರ ಫೋಟೋಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.