ಒಣ ತ್ಯಾಜ್ಯ ಸಂಸ್ಕರಣಾ ಘಟಕಗಳ ಅಭಿವೃದ್ಧಿಗೆ ಪಾಲಿಕೆ ಚಿಂತನೆ

Team Udayavani, Apr 2, 2019, 5:00 AM IST

ಬೆಂಗಳೂರು: ಪಾಲಿಕೆ ವ್ಯಾಪ್ತಿ ಒಣತ್ಯಾಜ್ಯ ಘಟಕಗಳ ಅಭಿವೃದ್ಧಿಪಡಿಸಲು ಮುಂದಾಗಿರುವ ಬಿಬಿಎಂಪಿಯು ಘಟಕಗಳ ಪರಿಶೀಲನೆಗೆ ಸಿದ್ಧತೆ ನಡೆಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ನಿತ್ಯ ಉತ್ಪತ್ತಿಯಾಗುವ 4 ಸಾವಿರ ಟನ್‌ ತ್ಯಾಜ್ಯದಲ್ಲಿ ಶೇ 25 ರಿಂದ 30ರಷ್ಟು ಒಣತ್ಯಾಜ್ಯವಿರುತ್ತದೆ. ಆ ಪೈಕಿ ಸ್ವಲ್ಪ ಪ್ರಮಾಣದ ತ್ಯಾಜ್ಯವನ್ನು ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಕಳುಹಿಸಿದರೆ, ಉಳಿದ ತ್ಯಾಜ್ಯವನ್ನು ಪಾಲಿಕೆಯಲ್ಲಿರುವ 164 ಒಣತ್ಯಾಜ್ಯ ಸಂಗ್ರಹ ಘಟಕಗಳಿಗೆ ಕಳುಹಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಘಟಕಗಳ ಸ್ಥಿತಿಗತಿಯ ಕುರಿತು ಪರಿಶೀಲಿಸಲು ಪಾಲಿಕೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪಾಲಿಕೆಯಲ್ಲಿರುವ ಎಲ್ಲ 164 ಒಣತ್ಯಾಜ್ಯ ಸಂಗ್ರಹ ಘಟಕಗಳನ್ನು ಸರ್ಕಾರೇತರ ಸಂಸ್ಥೆಗಳು ನಿರ್ವಹಿಸುತ್ತಿದ್ದು, ಸಂಗ್ರಹವಾಗುವ ಒಣತ್ಯಾಜ್ಯವನ್ನು ಮರುಬಳಕೆ ಮಾಡಲಾಗುತ್ತಿವೆ. ಆ ಹಿನ್ನೆಲೆಯಲ್ಲಿ ಘಟಕಗಳಿಗೆ ಅತ್ಯಾಧುನಿಕ ತಂತ್ರಜ್ಞಾನ ಒದಗಿಸುವ ಮೂಲಕ ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ.

ಅದರಂತೆ ಮೊದಲಿಗೆ ಒಣತ್ಯಾಜ್ಯ ಘಟಕಗಳಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಲ್ಲಿನ ಲೋಪಗಳು, ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವರದಿ ಸಿದ್ಧಪಡಿಸಲು ತಿರ್ಮಾನಿಸಲಾಗಿದೆ. ಆದರೆ, ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿಯನ್ನು ಲೋಕಸಭಾ ಚುನಾವಣಾ ಕಾರ್ಯಕ್ಕೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ಚುನಾವಣೆ ಮುಗಿದ ಬಳಿಕ ಪರಿಶೀಲನಾ ಕಾರ್ಯಕ್ಕೆ ಚಾಲನೆ ನೀಡಲು ಪಾಲಿಕೆ ನಿರ್ಧರಿಸಿದೆ.

ಮೊದಲ ಹಂತದಲ್ಲಿ 10 ಘಟಕಗಳು ಮೇಲ್ದರ್ಜೆಗೆ: ಮೊದಲ ಹಂತದಲ್ಲಿ 10 ಘಟಕಗಳನ್ನು ಉನ್ನತೀಕರಿಸಲು ಯೋಜನೆ ರೂಪಿಸಲಾಗಿದೆ. ಅದಕ್ಕಾಗಿ ಯುರೋಪಿಯನ್‌ ಮೂಲದ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಿದ್ದು, ಆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಅನುಮೋದನೆ ನೀಡಿದ ನಂತರ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು 10 ಘಟಕಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಅಕ್ಟೋಬರ್‌ನಲ್ಲಿ ನಡೆಯುವ ನಾಡಹಬ್ಬ ಮೈಸೂರು ದಸರಾಕ್ಕೆ ದೇಶ-ವಿದೇಶಿಗರನ್ನು ಆಕರ್ಷಿಸಲು ಏಪ್ರಿಲ್‌ ತಿಂಗಳಿನಿಂದ ಸಿದ್ಧತೆ ಆರಂಭಿಸಲಾಗುವುದು ಎಂದು...

  • ಬೆಂಗಳೂರು: ನಗರದಲ್ಲಿ ವಾಸವಿರುವ ಮಂಗಳಮುಖೀಯರ ಶ್ರೇಯೋಭಿವೃದ್ಧಿ ಹಾಗೂ ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಪಾಲಿಕೆಯ ಬಜೆಟ್‌ನಲ್ಲಿ...

  • ಬೆಂಗಳೂರು: ಒತ್ತಡ ನಿವಾರಣೆಗಾಗಿ ಈಶಾನ್ಯ ಪೊಲೀಸರಿಗೆ ಮೂರುದಿನಗಳ ಕಾಲ "ಜುಂಬಾ' ನೃತ್ಯ ತರಬೇತಿ ನೀಡಿದ್ದು ಪೊಲೀಸ್‌ ಸಿಬ್ಬಂದಿ ಕುಣಿದು ಕುಪ್ಪಳಿಸಿರುವ ವಿಡಿಯೋ...

  • ಬೆಂಗಳೂರು: ಆಸ್ಪತ್ರೆ ಪಕ್ಕದಲ್ಲಿಯೇ ನಡೆಯುವ ಸಂತೆಗೆ ನಿತ್ಯ ಸಹಸ್ರಾರು ಜನ ಬರುತ್ತಾರೆ. ಆ ಪೈಕಿ ಬಹುತೇಕರು ಆಸ್ಪತ್ರೆ ಆವರಣದಲ್ಲಿ ವಾಹನ ನಿಲ್ಲಿಸಿ ಸಂತೆಗೆ...

  • ಬೆಂಗಳೂರು: ಆಂಧ್ರಪ್ರದೇಶ ಮೂಲದ ಸಾಫ್ಟ್ವೇರ್‌ ಎಂಜಿನಿಯರ್‌ ಲಕ್ಷ್ಮಣ್‌ಕುಮಾರ್‌ (33) ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಮಹದೇವಪುರ ಠಾಣೆ ಪೊಲೀಸರು,...

ಹೊಸ ಸೇರ್ಪಡೆ