ಸಂಪುಟ ಸಭೆಯಲ್ಲಿ ಪವರ್ ಕಟ್
Team Udayavani, Oct 26, 2018, 6:30 AM IST
ಬೆಂಗಳೂರು: ಸಚಿವ ಸಂಪುಟ ಸಭೆಯ ನಂತರ ಸಚಿವ ಬಂಡೆಪ್ಪ ಕಾಂಶಪೂರ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಸಚಿವರಿಗೆ ಮುಜುಗರ ಉಂಟು ಮಾಡಿತು.
ಅದಕ್ಕೂ ಮೊದಲು ಮುಖ್ಯಮಂತ್ರಿ ಕುಮಾರಸ್ವಾಮಿ ಇಂಧನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಮಾಧ್ಯಮಗಳು ಜವಾಬ್ದಾರಿಯಿಂದ ವರದಿ ಮಾಡಬೇಕೆಂದು ಖಾರವಾಗಿಯೇ ಮಾತನಾಡಿದ್ದರು.
ಆದರೆ, ಸಚಿವರು ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿರುವಾಗಲೇ ವಿದ್ಯುತ್ ಕೈ ಕೊಟ್ಟಿದ್ದು, ಸಚಿವರಿಗೆ ಮುಜುಗರ ಉಂಟು ಮಾಡಿತು.
ಸಚಿವರು ಗೈರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವುದರಿಂದ ಸಚಿವ ಸಂಪುಟ ಸಭೆಗೆ ಅರ್ಧಕ್ಕೂ ಹೆಚ್ಚು ಸಚಿವರು ಗೈರು ಹಾಜರಾಗಿದ್ದರು. ಸರ್ಕಾರ ಬಹುತೇಕ ಸಚಿವರಿಗೆ ಐದು ಕ್ಷೇತ್ರಗಳಲ್ಲಿ ಚುನಾವಣಾ ಉಸ್ತುವಾರಿಯನ್ನಾಗಿ
ನೇಮಿಸಿರುವುದರಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಿಂದ ಬಹುತೇಕ ಸಚಿವರು ದೂರ ಉಳಿದಿದ್ದರು. ಪ್ರಮುಖ ಸಚಿವರಾದ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್,ಜಮೀರ್ ಅಹಮದ್, ಕೃಷ್ಣ ಬೈರೇಗೌಡ ಸೇರಿದಂತೆ ಅರ್ಧಕ್ಕೂ ಹೆಚ್ಚು ಸಂಪುಟದ ಸಚಿವರು ಗೈರು ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ
ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ
ಕೆಪಿಎಸ್ ಸಿ ಬಾಗಿಲು ತಟ್ಟಿ ಪ್ರತಿಭಟನೆಗೆ ಮಾಜಿ ಸಚಿವ ಸುರೇಶ್ ಕುಮಾರ್ ನಿರ್ಧಾರ
ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ
ಗುಂಡ್ಲುಪೇಟೆ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ