2018ರ ವೇಳೆಗೆ ವಿದ್ಯುತ್‌ ಸ್ವಾವಲಂಬನೆ

Team Udayavani, Oct 25, 2017, 1:01 PM IST

dk-shi-current.jpg

ಮಹದೇವಪುರ: ರಾಜ್ಯವು 2018ರ ವೇಳೆಗೆ ವಿದ್ಯುತ್‌ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಮೂಲಕ ಅಗತ್ಯವಿರುವಷ್ಟು ವಿದ್ಯುತ್‌ ಉತ್ಪಾದಿಸುವ ಸಾಮರ್ಥ್ಯ ಗಳಿಸಿಕೊಳ್ಳಲಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ವತಿಯಿಂದ ಹೂಡಿಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನೂತನ ಸಭಾಂಗಣ, ವಸತಿ ನಿಲಯ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ಮತ್ತು ಸುರಕ್ಷತಾ ಕಾರ್ಯಾಗಾರಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಪಾವಗಡದಲ್ಲಿ ಅತಿ ದೊಡ್ಡ ಸೋಲಾರ್‌ ಪಾರ್ಕ್‌ ನಿರ್ಮಾಣವಾಗುತ್ತಿದೆ.

ರೈತರ ಬರಡು ಭೂಮಿಗೂ ಬಾಡಿಗೆ ನೀಡುವ ಮೂಲಕ, ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಈ ಯೋಜನೆಯಲ್ಲಿ ಅವಕಾಶವಿದೆ. ಹಾಗಾಗಿ ಪ್ರತಿ ತಾಲೂಕಿನಲ್ಲೂ ಯೋಜನೆ ಜಾರಿಗೊಳಿಸಿ ಪ್ರತಿ ಕೇಂದ್ರದಲ್ಲಿ 20 ಮೆಗಾವ್ಯಾಟ್‌ ಉತ್ಪಾದನೆ ಸಾಮರ್ಥ್ಯದ ಸೋಲಾರ್‌ ಪಾರ್ಕ್‌ ನಿರ್ಮಿಸಲು ನಿರ್ಧರಿಸಲಾಗಿದ್ದು ಮುಂಬರುವ ವರ್ಷಗಳಲ್ಲಿ ರಾಜ್ಯಕ್ಕೆ ಅಗತ್ಯವಿರುವ ವಿದ್ಯುತ್‌ನ್ನು ಸ್ಥಳೀಯವಾಗಿ ಉತ್ಪಾದಿಸಿಕೊಳ್ಳುವ ಸಾಮರ್ಥಯ ಗಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಬ್ರಿಟೀಷರ ಕಾಲದಿಂದಲೂ ವಿದ್ಯುತ್‌ ಪ್ರಸರಣ ಇಲಾಖೆಯಲ್ಲಿ ಚಾಲ್ತಿಯಲ್ಲಿದ್ದ ಲೈನ್‌ಮನ್‌ ಹೆಸರು ಬದಲಿಸಿ ಕಾರ್ಡ್‌ಲೆಸ್‌ ಪವರ್‌ ಮ್ಯಾನ್‌ ಎಂಬುದಾಗಿ ಕರೆಯಲು ಚಿಂತಿಸಲಾಗಿದೆ ಎಂದು ಹೇಳಿದರು.

ವಿದ್ಯುತ್‌ ಪ್ರಸರಣ ನಿಗಮದಲ್ಲಿ ಪಾರದರ್ಶಕವಾಗಿ 22,000 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಯಾವುದೇ ಅಕ್ರಮಕ್ಕೂ ಅವಕಾಶವಿಲ್ಲದೇ ಪೂರ್ಣಗೊಳಿಸಲಾಗಿದೆ. ಹೊಸದಾಗಿ ನೇಮಕಗೊಂಡಿರುವ ಎಂಜಿನಿಯರ್‌ಗಳು ಕೇವಲ ಉದ್ಯೋಗ, ವೇತನಕ್ಕಷ್ಟೇ ಕಾರ್ಯ ನಿರ್ವಹಿಸದೆ ದೇಶ ಸೇವೆ ಎಂಬ ಮನೋಭಾವದಿಂದ ತಾಳ್ಮೆಯಿಂದ ದುಡಿಯಬೇಕು ಎಂದು ಸಲಹೆ ನೀಡಿದರು.

ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಮಹದೇವಪುರ ಕ್ಷೇತ್ರದ ಬಹಳಷ್ಟು ಪ್ರದೇಶಗಳಿಂದಲೇ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದೆ. ಆದರೂ ಈ ಪ್ರದೇಶಗಳಲ್ಲಿ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫ‌ಲವಾಗಿದೆ. ಸಂಚಾರ ದಟ್ಟಣೆಯೂ ತೀವ್ರವಾಗಿದೆ. ಹಾಗಾಗಿ ಎಂ.ಜಿ.ರಸ್ತೆಯ ಟ್ರಿನಿಟಿ ವೃತ್ತದಿಂದ ಐಟಿಪಿಎಲ್‌ವರೆಗೆ ಎಕ್ಸ್‌ಪ್ರೆಸ್‌ ಹೈವೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್‌ ಸದಸ್ಯ ಎಂ.ನಾರಾಣಸ್ವಾಮಿ, ಪಾಲಿಕೆ ಸದಸ್ಯ ನಿತೀಶ್‌ ಪುರುಷೋತ್ತಮ್‌, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಜಾವೇದ್‌ ಅಖ್ತರ್‌, ನಿರ್ದೇಶಕ (ತಾಂತ್ರಿಕ) ಎಚ್‌.ನಾಗೇಶ್‌, ಬೆಸ್ಕಾಂ ನಿರ್ದೇಶಕ ಜೋಪ್ರಕಾಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.