ಜ.17 ರಿಂದ ಬಜೆಟ್‌ ಪೂರ್ವಬಾವಿ ಸಭೆ


Team Udayavani, Dec 30, 2017, 6:05 AM IST

Siddaramaiah-budget.jpg

ಬೆಂಗಳೂರು:ರಾಜ್ಯ ಸರ್ಕಾರದ ಸಾಧನೆ ಜನರಿಗೆ ತಲುಪಿಸುವ “ಸಾಧನಾ ಸಂಭ್ರಮ’ ಯಾತ್ರೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ  ಜನವರಿ 17 ರಿಂದ ಫೆಬ್ರವರಿ 3 ರ ವರೆಗೂ 2018-19 ನೇ ಸಾಲಿನ ಬಜೆಟ್‌ ಪೂರ್ವಭಾವಿ ಸಭೆ ನಡೆಸಲಿದ್ದು  ಫೆಬ್ರವರಿ ಎರಡನೇ ವಾರದಲ್ಲಿ ಬಜೆಟ್‌ ಮಂಡನೆಯಾಗುವ ಸಾಧ್ಯತೆಯಿದೆ.

ಮುಖ್ಯಮಂತ್ರಿಯಾಗಿ ಐದನೇ ಹಾಗೂ ತಮ್ಮ ನೇತೃತ್ವದ ಸರ್ಕಾರದ ಕೊನೆಯ ಬಜೆಟ್‌ ಸಹ ಇದಾಗಿದೆ. ಈಗಾಗಲೇ ಬಜೆಟ್‌ ಪೂರ್ವಬಾವಿ ಚರ್ಚೆ ಸಂಬಂಧ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಲಾಗಿದೆ.

ಮೂಲಗಳ ಪ್ರಕಾರ,  ಜನವರಿ 17 ರಂದು ಸಿದ್ದರಾಮಯ್ಯ ಅವರು ಕೆಪಿಸಿ ಕಚೇರಿಯಲ್ಲಿ ವೈದ್ಯಕೀಯ ಶಿಕ್ಷಣ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಕಾರ್ಮಿಕ ಇಲಾಖೆ, ಕೌಶಾಲ್ಯಭಿವೃದ್ಧಿ, ಅರಣ್ಯ ಮತ್ತು ಜೀವ ಶಾಸ್ತ್ರ, ಇಂಧನ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಜನವರಿ 18 ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ ಸಂಘದ ಸಂಘಟನೆಗಳೊಂದಿಗೆ, ಜನವರಿ 20 ರಂದು ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಂದಾಯ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ , ಅಲ್ಪ ಸಂಖ್ಯಾತ ಮತ್ತು ವಕ್ಫ್ , ಜವಳಿ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಜನವರಿ 22 ರಂದು ಜಲ ಸಂಪನ್ಮೂಲ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ, ನಗರಾಭಿವೃದ್ದಿ, ಪೌರಾಡಳಿತ, ಸಾರ್ವಜನಿಕ ಉದ್ದಿಮೆ, ಯುವ ಸಬಲೀಕರಣ ಹಾಗೂ ಮೀನುಗಾರಿಕೆ ಇಲಾಖೆ, ಜನವರಿ 25 ರಂದು ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ, ಜನವರಿ 29 ರಂದು ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ, ವಾಣಿಜ್ಯ ಮತ್ತು ಬೃಹತ್‌ ಮತ್ತು ಸಣ್ಣ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಸಕ್ಕರೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಸಭೆ ಕರೆದಿದ್ದಾರೆ.

ಜನವರಿ 30 ರಂದು ಸಹಕಾರ, ಯೋಜನೆ ಅನುಷ್ಠಾನ, ವಿಜ್ಞಾನ ತಂತ್ರಜ್ಞಾನ, ವಸತಿ, ಬೆಂಗಳೂರು ನಗರಾಭಿವೃದ್ಧಿ, ಮಹಾನಗರ ಪಾಲಿಕೆಗಳು ಮತ್ತು ಹಜ್‌ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದು, ಜನವರಿ 31 ರಂದು ಗೃಹ, ಲೋಕೋಪಯೋಗಿ, ಸಾರಿಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಮತ್ತು ಡಿಪಿಎಆರ್‌ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ತೆರಿಗೆ ಇಲಾಖೆಗಳ ಸಭೆ
ಫೆಬ್ರವರಿ 1ರಂದು ವಾಣಿಜ್ಯ ಸಂಘ ಸಂಸ್ಥೆಗಳು, ಫೆಬ್ರವರಿ 2 ರಂದು ವಾಣಿಜ್ಯ, ಅಬಕಾರಿ, ಸಾರಿಗೆ, ಮುದ್ರಾಂಕ ನೋಂದಣಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಕೊನೆಯದಾಗಿ ರಾಜ್ಯ ಸರ್ಕಾರಿ ನೌಕರರೊಂದಿಗೂ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.