ಮೌಲ್ಯಯುತ ಆರೋಗ್ಯ ಸೇವೆಗೆ ಆದ್ಯತೆ


Team Udayavani, Sep 17, 2017, 10:46 AM IST

Ban17091713Medn.jpg

ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಸರ್ಕಾರಕ್ಕಿಂತಲೂ ಖಾಸಗಿ ಸಂಸ್ಥೆಗಳಿಗೆ ಹೆಚ್ಚು ಅವಕಾಶವಿದ್ದು, ಮಾನವೀಯತೆಯೊಂದಿಗೆ ಮೌಲ್ಯಾಧಾರಿತ ಸೇವೆ ಒದಗಿಸುವತ್ತ ಗಮನ ಹರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ನೀಡಿದರು.

ನಗರದ ಸೆಂಟ್ರಲ್‌ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶನಿವಾರ “ಫೆಡರೇಷನ್‌ ಆಫ್ ಹೆಲ್ತ್‌ಕೇರ್‌ ಅಸೋಸಿಯೇಷನ್‌- ಕರ್ನಾಟಕ’ (ಎಫ್ಎಚ್‌ಎ) ಸಂಸ್ಥೆ ಉದ್ಘಾಟಿಸುವ ಜತೆಗೆ “ಆರೋಗ್ಯ ಸೇವೆಯಲ್ಲಿ ನೈತಿಕ ಮೌಲ್ಯ ಹಾಗೂ ಆಡಳಿತ’ ಕುರಿತ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯ ಸೇವೆ ಒದಗಿಸುವಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ದೊಡ್ಡದಿದೆ.

ಸರ್ಕಾರಿ ವೈದ್ಯರಾಗಲಿ, ಖಾಸಗಿ ಸಂಸ್ಥೆ ವೈದ್ಯರಾಗಲಿ ಸಾಮಾನ್ಯ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು. ಆಗಮಾತ್ರ ಸಮಾಜಕ್ಕೆ ಒಳಿತಾಗಲಿದ ಎಂದು ಹೇಳಿದರು.

ಮಾನವ ಸಂಪನ್ಮೂಲ ಅಭಿವೃದಿಟಛಿಗೆ ಶಿಕ್ಷಣ, ಆರೋಗ್ಯ ಬಹಳ ಮುಖ್ಯ. ಎಲÒ ಕ್ಷೇತ್ರಗಳಲ್ಲಿ ಮೌಲ್ಯ ಕುಸಿಯುತ್ತಿವೆ ಎಂಬ ಮಾತು ಕೇಳಿಬರುತ್ತಿರುವ ಸಂದರ್ಭದಲ್ಲಿ ಮಾನವೀಯತೆಯೊಂದಿಗೆ ಮೌಲ್ಯಯುತ ಸೇವೆ ಒದಗಿಸಬೇಕಾದ ಅಗತ್ಯವಿದೆ ಎಂದರು.

ಸಮ್ಮೇಳನದಲ್ಲಿ ಸವಿಸ್ತಾರ ಚರ್ಚೆ ಬಳಿಕ ಉತ್ತಮ ಅಂಶಗಳನ್ನೊಳಗೊಂಡ ಬೆಂಗಳೂರು ಘೋಷಣೆ ಬಗ್ಗೆ ನಿರ್ಣಯ ಕೈಗೊಳ್ಳಲಿ. ಘೋಷಣೆಯು ಕೇವಲ ಅಲಂಕಾರಿಕ ಪದಗಳಿಂದ ಕೂಡಿರದೆ ಸಮಾಜಮುಖೀಯಾಗಿರಬೇಕು. ಸಂಸ್ಥೆ ಕೈಗೊಳ್ಳುವ ಉತ್ತಮ ಕೆಲಸಗಳಿಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ಮಾತನಾಡಿ, “ಆರೋಗ್ಯ ಸೇವೆ ಒದಗಿಸುವಲ್ಲಿ ಖಾಸಗಿ ಸಂಸ್ಥೆಗಳು ಪ್ರಮುಖ ಸ್ಥಾನ ಪಡೆದಿವೆ. ಸರ್ಕಾರಿ ಆಸ್ಪತ್ರೆಗಳಿಗಿಂತಲೂ ಖಾಸಗಿ ಸಂಸ್ಥೆಗಳು ಹೆಚ್ಚು ಜನರಿಗೆ ಆರೋಗ್ಯ ಸೇವೆ ನೀಡುತ್ತಿವೆ. ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಮೂಲ ಸೌಕರ್ಯ, ಆರೋಗ್ಯ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಆದ್ಯತೆ ನೀಡುತ್ತಿರುವುದರಿಂದ ರಾಜ್ಯದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಿರುವ ಜತೆಗೆ ಗುಣಮಟ್ಟದ ಆರೋಗ್ಯ ಸೇವೆಯೂ ಸಿಗುತ್ತಿದೆ ಎಂದು ಹೇಳಿದರು.

ಕಾರ್ಪೋರೇಟ್‌ ಆಸ್ಪತ್ರೆಗಳು ಕಡಿಮೆ ಎಂದರೆ ಸುಮಾರು ಶೇ.10ರಷ್ಟಿರಬಹುದು. ಆದರೆ ಸಣ್ಣಪುಟ್ಟ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು ತಾಲೂಕು, ಜಿಲ್ಲೆ, ನಗರ ಪ್ರದೇಶಗಳಲ್ಲಿ ಉತ್ತಮ ಸೇವೆ ನೀಡುತ್ತಿವೆ. ಎಲ್ಲ ಕ್ಷೇತ್ರಗಳಲ್ಲಿ ಮೌಲ್ಯಗಳು ಕುಸಿಯುತ್ತಿದ್ದು, ಇದಕ್ಕೆ ವೈದ್ಯಕೀಯ ಕ್ಷೇತ್ರವೂ ಹೊರತಲ್ಲ. ಹಾಗಾಗಿ ನೈತಿಕ ಮೌಲ್ಯ ಆಧರಿಸಿ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸವಲತ್ತುಗಳ ಜತೆಗೆ ತಜ್ಞ ವೈದ್ಯರೂ ಇದ್ದಾರೆ. ಆದರೆ ಆಡಳಿತ ನಿರ್ವಹಣೆಯು ನಿರೀಕ್ಷಿತ ಪ್ರಮಾಣದಲ್ಲಿಲ್ಲ. ವೃತ್ತಿಯ ಜತೆಗೆ ಆಡಳಿತ ಜವಾಬ್ದಾರಿ ನಿರ್ವಹಿಸುವುದನ್ನು ಆರಂಭದಿಂದಲೇ ರೂಢಿಸಿಕೊಳ್ಳುವುದು ಒಳಿತು. ಸರ್ಕಾರಿ ಆಸ್ಪತ್ರೆಗಳಿಗೆ ಆರ್ಥಿಕ ಮುಗ್ಗಟ್ಟಿಲ್ಲ. ಆದರೆ ಉತ್ತಮವಾಗಿ ಆಡಳಿತ ನಡೆಸುವವರ ಕೊರತೆಯಿದೆ. ಪ್ರಾಮಾಣಿಕತೆಯಿಂದ ಸಾಮಾನ್ಯ ಜನರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುವುದಕ್ಕೆ ಆದ್ಯತೆ ನೀಡಬೇಕೆಂದು ತಿಳಿಸಿದರು.

ಎಫ್ಎಚ್‌ಎ ಮುಖ್ಯ ಪ್ರಧಾನ ಸಂಚಾಲಕ ನಾಗೇಂದ್ರ ಸ್ವಾಮಿ, ಸಮಾಜ, ಸರ್ಕಾರ, ಆರೋಗ್ಯ ಸೇವಾಸಂಸ್ಥೆಗಳ ನಡುವೆ ಸಂಪರ್ಕ ಕೊಂಡಿಯಾಗಿ ಒಕ್ಕೂಟ ಕಾರ್ಯ ನಿರ್ವಹಿಸಲಿದೆ. ಪರಸ್ಪರ ಸಮನ್ವಯದಿಂದ ಸಮುದಾಯಕ್ಕೆ ಗುಣಮಟ್ಟದ ಆರೋಗ್ಯ ಸೇವೆ ತಲುಪುವಂತೆ ಮಾಡುವುದು ಒಕ್ಕೂಟದ ಆಶಯ ಎಂದು ಹೇಳಿದರು.

ಸಮ್ಮೇಳನ ಸಮಿತಿ ಸಂಚಾಲಕ ಜಯಣ್ಣ, ಭಾರತೀಯ ವೈದ್ಯ ಸಂಸ್ಥೆಯ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ರಾಜಶೇಖರ ಬಳ್ಳಾರಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.