ಪಾರದರ್ಶಕ ಚುನಾವಣೆಗೆ ಸಿದ್ಧತೆ

Team Udayavani, Mar 12, 2019, 6:36 AM IST

paradarshaka.jpg

ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 18ರಂದು ಚುನಾವಣೆ ನಡೆಯಲಿದ್ದು, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಗರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ನಗರ ಪೊಲೀಸ್‌ ಆಯುಕ್ತರೊಂದಿಗೆ ಸೋಮವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳು, ಸಿಬ್ಬಂದಿ ನಿಯೋಜನೆ ಸುರಕ್ಷತಾ ಕ್ರಮಗಳು ಹಾಗೂ ಭದ್ರತೆ ಕುರಿತು ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ಕೇಂದ್ರ, ಉತ್ತರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣೆ ವೆಚ್ಚದ ಮೇಲೆ ವಿಶೇಷ ನಿಗಾ ಇಡಲಾಗಿದ್ದು, ಪ್ರತಿ ಅಭ್ಯರ್ಥಿ 70 ಲಕ್ಷ ರೂ.ಗಳಿಂತಲೂ ಹೆಚ್ಚಿನ ಹಣವನ್ನು ಖರ್ಚು ಮಾಡುವಂತಿಲ್ಲ. ಕ್ಷೇತ್ರಗಳಲ್ಲಿ ಆಯೋಜಿಸುವ ಬಹಿರಂಗ ಸಭೆ, ಸಮಾರಂಭ, ಪ್ರಚಾರಕ್ಕಾಗಿ ಬಳಕೆ ಮಾಡುವ ಹಣದ ಸಂಪೂರ್ಣ ಮಾಹಿತಿ ಪ್ರತಿದಿನ ಪಡೆಯುವ ಮೂಲಕ ಪರಿಶೀಲಿಸಲಾಗುವುದು ಎಂದು ಹೇಳಿದರು.

ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಆಯೋಗದಿಂದ ನಿಯೋಜಿಸಿರುವ ಅಧಿಕಾರಿಗಳು ವಿಶೇಷ ನಿಗಾ ವಹಿಸಲಿದ್ದಾರೆ. ಒಂದೊಮ್ಮೆ ನಿಯಮ ಉಲ್ಲಂ ಸಿ ಅಭ್ಯರ್ಥಿಯು 70 ಲಕ್ಷಕ್ಕಿಂತಲೂ ಹೆಚ್ಚಿನ ಹಣವನ್ನು ಖರ್ಚು ಮಾಡಿರುವುದು ಸಾಬೀತಾದರೆ, ಸುಪ್ರೀಂ ಕೋರ್ಟ್‌ ಆದೇಶದನ್ವಯ ಸದಸ್ಯತ್ವ ಕಳೆದುಕೊಳ್ಳಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾಗುತ್ತಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆ ಹಿನ್ನೆಲೆಯಲ್ಲಿ ಭಾನುವಾರ ಸಂಜೆಯಿಂದಲೇ ಎರಡು ಸಾವಿರಕ್ಕೂ ಹೆಚ್ಚಿನ ಜಾಹೀರಾತು ಫ‌ಲಕಗಳ ವಿನೈಲ್‌ಗ‌ಳನ್ನು ತೆರವುಗೊಳಿಸಲಾಗಿದೆ. ಬಸ್‌ ನಿಲ್ದಾಣ, ಮೇಲ್ಸೇತುವೆ ಸೇರಿದಂತೆ ವಿವಿಧಡೆಗಳಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಶಾಸಕರು, ಸಚಿವರ ಸೇರಿ ರಾಜಕೀಯ ನಾಯಕರುಗಳು ಭಾವಚಿತ್ರವುಳ್ಳ ಬೋರ್ಡ್‌ಗಳು ಹಾಗೂ ವಿನೈಲ್‌ಗ‌ಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದರು.

ಖರ್ಚು-ವೆಚ್ಚಗಳ ಮೇಲೆ ವಿಶೇಷ ನಿಗಾ: ಚುನಾವಣೆಯಲ್ಲಿ ಪ್ರತಿ ಅಭ್ಯರ್ಥಿಯ ಖರ್ಚು ವೆಚ್ಚಗಳ ಬಗ್ಗೆ ವಿಶೇಷ ನಿಗಾ ವಹಿಸುವ ಉದ್ದೇಶದಿಂದ 3 ಲೋಕಸಭಾ ಕ್ಷೇತ್ರಗಳಲ್ಲಿ 24 ಮುಖ್ಯ ಲೆಕ್ಕ ನಿರ್ವಹಣಾಧಿಕಾರಿ, 24 ಸಹಾಯಕ ವೆಚ್ಚ ವೀಕ್ಷಕರು ಮತ್ತು 24 ಲೆಕ್ಕ ತಂಡದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರಂತೆ ಪ್ರತಿ ಅಭ್ಯರ್ಥಿಯು ಪ್ರಚಾರಕ್ಕಾಗಿ ನಡೆಸುವ ಸಮಾರಂಭಗಳು ಹಾಗೂ ಇತರ ಮಾದರಿ ಪ್ರಚಾರಗಳನ್ನು ವಿಡಿಯೋ ಮಾಡಲಾಗುವುದು ಎಂದು ತಿಳಿಸಿದರು.

42 ಸಾವಿರ ಸಿಬ್ಬಂದಿ ನೇಮಕ: ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 8514 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಚುನಾವಣಾ ಕಾರ್ಯಕ್ಕಾಗಿ 42 ಸಾವಿರ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತಿದೆ. ಈಗಾಗಲೇ ಸಿಬ್ಬಂದಿ ಪಟ್ಟಿ ಸಿದ್ಧವಾಗಿದ್ದು, ಮುಂದಿನ ವಾರದೊಳಗೆ ನೇಮಕಾತಿ ಪತ್ರವನ್ನು ಕಳುಹಿಸಲಾಗುವುದು. ನಂತರದಲ್ಲಿ ಅವರಿಗೆ ಅಗತ್ಯ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಚುನಾವಣಾ ಸಿಬ್ಬಂದಿಗಿಲ್ಲ ರಜೆ: ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವ ಸಿಬ್ಬಂದಿಯ ಎಲ್ಲ ರೀತಿಯ ರಜೆಗಳನ್ನು ರದ್ದುಪಡಿಸಲಾಗಿದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರು ರಜೆ ರಹಿತವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಜತೆಗೆ ಮತದಾನ ಎಲ್ಲ ಸಂಸ್ಥೆಗಳು ನೌಕರರಿಗೆ ಕಡ್ಡಾಯವಾಗಿ ರಜೆ ನೀಡಬೇಕಾಗುತ್ತದೆ. ರಜೆ ನೀಡದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಲ್ಲ ಕಾರುಗಳು ವಾಪಸ್‌: ಬಿಬಿಎಂಪಿಯ ಮೇಯರ್‌, ಉಪಮೇಯರ್‌, ಆಡಳಿತ ಹಾಗೂ ವಿರೋಧ ಪಕ್ಷ ನಾಯಕರು ಸೇರಿದಂತೆ ಬಿಡಿಎ, ಜಲಮಂಡಳಿ, ಬಿಎಂಆರ್‌ಸಿಎಲ್‌ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿರುವ ಚುನಾಯಿತ ಪ್ರತಿನಿಧಿಗಳಿಂದ ಸರ್ಕಾರಿ ಕಾರುಗಳನ್ನು ವಾಪಸ್‌ ಪಡೆಯಲಾಗಿದೆ.

ಹೆಸರು ಸೇರಿಸಲು 16ರವರೆಗೆ ಅವಕಾಶ: ಮತದಾರರ ಪಟ್ಟಿಗೆ ಸೇರಿಸಲು ಮಾರ್ಚ್‌ 16ರವರೆಗೆ ಅವಕಾಶವಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಕೂಡಲೇ ತಮ್ಮ ಹೆಸರುಗಳನ್ನು ಸೇರಿಸಬೇಕು ಎಂದ ಮಂಜುನಾಥ ಪ್ರಸಾದ್‌, ಮತದಾರರ ಗುರುತಿನ ಚೀಟಿಯನ್ನು ಕುಟುಂಬದ ಸದಸ್ಯರಲ್ಲದವರಿಗೆ ನೀಡುವುದು ಶಿಕ್ಷಾರ್ಹ ಅಪರಾಧ. ಬೇರೆಯವರ ಗುರುತಿನ ಚೀಟಿ ಪಡೆದರೆ ಹಾಗೂ ಬೇರೆಯವರಿಗೆ ಗುರುತಿನ ಚೀಟಿ ನೀಡಿದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಾಮಪತ್ರ ಸಲ್ಲಿಕೆ ಇಲ್ಲಿ
ಬೆಂಗಳೂರು ಉತ್ತರ: ನಗರ ಜಿಲ್ಲಾಧಿಕಾರಿಗಳ ಕಚೇರಿ
ಬೆಂಗಳೂರು ಕೇಂದ್ರ:  ಬಿಬಿಎಂಪಿ ಕೇಂದ್ರ ಕಚೇರಿ 
ಬೆಂಗಳೂರು ದಕ್ಷಿಣ: ಜಯನಗರ 2ನೇ ಹಂತದ ದಕ್ಷಿಣ ವಲಯ ಕಚೇರಿ 

ಮಾಜಿ ಯೋಧರು, ಬ್ಯಾಂಕ್‌ ಭದ್ರತಾ ಸಿಬ್ಬಂದಿ ಹೊರತುಪಡಿಸಿ ಉಳಿದವರೆಲ್ಲ ಅನುಮತಿ ಪಡೆದ ಶಸ್ತ್ರಸ್ತ್ರಗಳನ್ನು ಆಯಾ ವ್ಯಾಪ್ತಿಯ ಪೊಲೀಸ್‌ ಠಾಣೆಗಳಿಗೆ ಒಪ್ಪಿಸಬೇಕು. ಚುನಾವಣೆಗಾಗಿ ನಗರದಾದ್ಯಂತ 12-13 ಸಾವಿರ ಪೊಲೀಸರನ್ನು ನಿಯೋಜಿಸಿದ್ದು, ರೌಡಿಶೀಟರ್‌ಗಳಿಗೆ ಜಾಮೀನು ರಹಿತ ವಾರೆಂಟ್‌ ನೀಡಲಾಗಿದೆ. ಜತೆಗೆ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ, ನಿಗಾ ವಹಿಸಲಾಗಿದೆ.
-ಟಿ.ಸುನೀಲ್‌ ಕುಮಾರ್‌, ನಗರ ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.