ಬೆಂಗಳೂರು ಅಭಿವೃದ್ಧಿಗೆ ಆದ್ಯತೆ: ಪರಮೇಶ್ವರ್
Team Udayavani, Aug 30, 2018, 12:35 PM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸೌಂದರ್ಯ ಹೆಚ್ಚಿಸಲು ಅಕ್ರಮ ಕೇಬಲ್ ಅಳವಡಿಕೆಗೆ ತಡೆಯೊಡ್ಡಲಾಗಿದೆ.
ಸುಮಾರು 8 ಸಾವಿರ ಕಿಲೋ ಮೀಟರ್ನಷ್ಟು ಅಕ್ರಮ ಕೇಬಲ್ ತೆಗೆದು ಹಾಕಲಾಗಿದೆ. ಅಲ್ಲದೇ, ಅಕ್ರಮವಾಗಿ ಕೇಬಲ್ ಹಾಕಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಹೇಳಿದರು.
ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ತೆಗೆದು ಹಾಕಲಾಗಿದ್ದು, ಹೀಗಾಗಿ ನಗರದ ರಸ್ತೆಗಳು ಅಂದವಾಗಿ ಕಾಣಿಸುತ್ತಿವೆ. ನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು 13 ಸಾವಿರ ಕೋಟಿ ವೆಚ್ಚದಲ್ಲಿ ಫೆರಿಪೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ.
ಭೂ ಸ್ವಾಧೀನ ಪಡಿಸಿಕೊಳ್ಳಲು 8 ಸಾವಿರ ಕೋಟಿ ಹಾಗೂ ರಸ್ತೆ ನಿರ್ಮಾಣಕ್ಕೆ 5 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ. ನಗರದಲ್ಲಿ ಎರಡು ಎಲಿವೇಟೆಡ್ ಕಾರಿಡಾರ್ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ, ಶೀಘ್ರವೇ ಕೆಂಪೇಗೌಡ ಬಡಾವಣೆಯ ಅರ್ಜಿದಾರರಿಗೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ