ವಿವಿ ನಿರ್ಧಾರಕ್ಕೆ ಪ್ರಾಧ್ಯಾಪಕರ ಪರದಾಟ

Team Udayavani, Aug 3, 2018, 11:51 AM IST

vv-nirdhra.jpg

ಬೆಂಗಳೂರು: ಸೆಂಟ್ರಲ್‌ ಕಾಲೇಜು ಆವರಣದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೋಧನೆ, ಇಲ್ಲಿಂದ 15 ಕಿ.ಮೀ ದೂರದಲ್ಲಿರುವ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪಾಠ. ಇದರ ಓಡಾಟದಲ್ಲೇ ಬೆಂವಿವಿ ಸ್ನಾತಕೋತ್ತರ ಪ್ರಾಧ್ಯಾಪಕರು ಪರದಾಡುವ ಸ್ಥಿತಿ ಬಂದೊದಗಿದೆ.

ಇದು ಒಂದು ದಿನದ ತರಗತಿಯ ಫ‌ಜೀತಿಯಲ್ಲ, 2018-19ರ ಶೈಕ್ಷಣಿಕ ವರ್ಷ ಪೂರ್ತಿ ಹೀಗೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ ಸೆಂಟ್ರಲ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಪತ್ರಿಕೋದ್ಯಮ ಕೋರ್ಸ್‌ ನಡೆಸದಿರಲು ಬೆಂಗಳೂರು ಕೇಂದ್ರ ವಿವಿ ನಿರ್ಧರಿಸಿದೆ. 2017-18ರಲ್ಲಿ ಕೋರ್ಸ್‌ಗೆ ದಾಖಲಾಗಿ, ಈ ದ್ವಿತೀಯ ವರ್ಷದಲ್ಲಿ ಇರುವ ವಿದ್ಯಾರ್ಥಿಗಳಿಗೆ ತರಗತಿ ಎಂದಿನಂತೆ ಇರುತ್ತದೆ.

ಬೆಂಗಳೂರು ವಿವಿ ಪ್ರಸಕ್ತ ಸಾಲಿನಿಂದ ಹೊಸದಾಗಿ ಪತ್ರಿಕೋದ್ಯಮಕ್ಕೆ ಅರ್ಜಿ ಆಹ್ವಾನಿಸಿದೆ. ಪ್ರಥಮ ವರ್ಷಕ್ಕೆ 414 ಅರ್ಜಿ ಸಲ್ಲಿಕೆಯಾಗಿದೆ. 40 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಂಗಳೂರು ವಿವಿ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಬೆಂಗಳೂರು ಕೇಂದ್ರ ವಿವಿಯಿಂದ ನಿರ್ವಹಣೆ ಮಾಡಲಾಗುತ್ತದೆ.

ಎರಡು ಕಡೆ ಬೋಧನೆ: ಬೆಂಗಳೂರು ವಿವಿಯ ತ್ರಿವಿಭಜನೆಯಿಂದ ಈ ಸಮಸ್ಯೆ ಉದ್ಭವವಾಗಿದೆ. ಪ್ರಥಮ ವರ್ಷ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಪ್ರಾಧ್ಯಾಪಕರು ಮಾತ್ರ ಬದಲಾಗುವುದಿಲ್ಲ. ಬೆಂವಿವಿ ಹಾಗೂ ಬೆಂಗಳೂರು ಕೇಂದ್ರ ವಿವಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಾವಣೆ ಕಾರ್ಯ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಪತ್ರಿಕೋದ್ಯಮ ವಿಭಾಗದ ಬೋಧಕರು ಜ್ಞಾನಭಾರತಿ ಹಾಗೂ ಸೆಂಟ್ರಲ್‌ ಕಾಲೇಜು ಎರಡು ಕಡೆಯೂ ಬೋಧನೆ ಮಾಡಬೇಕಾಗುತ್ತದೆ.

ಪ್ರಥಮ, ದ್ವಿತೀಯ ಬೇರೆ,ಬೇರೆ: ಸೆಂಟ್ರಲ್‌ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ವಿದ್ಯಾರ್ಥಿಗಳೊಂದಿಗೆ ಬೆರೆಯುವ ಅವಕಾಶ ಇಲ್ಲ. ಹಾಗೆಯೇ ಜ್ಞಾನಭಾರತೀಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ನಿತ್ಯ ನೋಡುವುದಕ್ಕೆ ಆಗುವುದಿಲ್ಲ. ಅತ್ತ ಉಪನ್ಯಾಸಕ ಪ್ರಾಧ್ಯಾಪಕರ ಗೋಳು ಒಂದೆಡೆಯಾದರೆ, ವಿದ್ಯಾರ್ಥಿಗಳ ಬವಣೆ ಇನ್ನೊಂದೆಡೆ ಹೇಳ ತೀರದಾಗಿದೆ.

ಮೂಲ ಸೌಕರ್ಯ, ಸಿಬ್ಬಂದಿ ಕೊರತೆಯಿಂದ ಪತ್ರಿಕೋದ್ಯಮ ಕೋರ್ಸ್‌ 2018-19ನೇ ಸಾಲಿನಲ್ಲಿ ಆರಂಭಿಸದೇ ಇರುವುದಕ್ಕೆ ಬೆಂಗಳೂರು ಕೇಂದ್ರ ವಿವಿ ಈಗಾಗಲೇ ನಿರ್ಧರಿಸಿದೆ. ವಾಣಿಜ್ಯ ವಿಭಾಗದ ಕೋರ್ಸ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ವಿವಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಜ್ಞಾನಭಾರತಿಯಲ್ಲಿ ಮೊದಲ ವರ್ಷದ ಪತ್ರಿಕೋದ್ಯಮ ಮಾತ್ರ ಇರುತ್ತದೆ. ಎರಡನೇ ವರ್ಷ ಸೆಂಟ್ರಲ್‌ ಕಾಲೇಜಿನಲ್ಲೇ ಮುಂದುವರಿಯಲಿದೆ. 414 ಅರ್ಜಿ ಬಂದಿದ್ದು, 40 ವಿದ್ಯಾರ್ಥಿಗಳಿಗೆ ಅವಕಾಶ ಇದೆ.
-ಪ್ರೊ.ಕೆ.ಆರ್‌.ವೇಣುಗೋಪಾಲ್‌, ಕುಲಪತಿ, ಬೆಂವಿವಿ

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.