ಉದ್ಯಾನ ನಗರಿ ಕಿರೀಟಕ್ಕೆ ಮತ್ತೊಂದು ಪಾರ್ಕ್‌ ಗರಿ

Team Udayavani, Oct 2, 2021, 12:05 PM IST

Benglore new park

Representative Image used

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬೆಂಗಳೂರು, ವಿಶ್ವ ಮಟ್ಟ ದಲ್ಲಿ ಉದ್ಯಾನ ನಗರಿ ಎಂಬ ಬಿರುದು ಪಡೆದಿದ್ದು, ಆ ಬಿರುದಿಗೆ ಈಗ ಮತ್ತೂಂದು ಕಿರೀಟ ತೊಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ವಿಶ್ವ ಪ್ರಸಿದ್ಧಲಾಲ್‌ಬಾಗ್‌ ಮತ್ತು ಕಬ್ಬನ್‌ ಪಾರ್ಕ್‌ ಹೊಂದಿರುವ ಬೆಂಗಳೂರಿಗೆ ಇವೆರಡೂ ಪಾರ್ಕ್‌ಗಿಂತ ದೊಡ್ಡದಾದ ಮತ್ತೂಂದು ಪಾರ್ಕ್‌ ನಿರ್ಮಾಣಕ್ಕೆ ತೋಟಗಾರಿಕಾ ಸಚಿವ ಮುನಿರತ್ನ ಮುಂದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದು, ಅವರು ಪಾರ್ಕ್‌ ನಿರ್ಮಾಣಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:-‘ಮೋಹನದಾಸ’ ಚಿತ್ರ ವಿಮರ್ಶೆ: ಪಾಪು ಬಾಪುವಿನ ಸುತ್ತ ಒಂದು ನೋಟ… 

ನಮ್ಮದೆನ್ನಲು ಪಾರ್ಕ್‌: ಬೆಂಗಳೂರಿನ ಪ್ರತಿಯೊಂದು ಬಡಾವಣೆ  ಯಲ್ಲಿಯೂ ಉದ್ಯಾನವನಗಳಿಗೆ ಆದರೆ, ಹೈದರಾಲಿ ನಿರ್ಮಾಣ ಮಾಡಿರುವ ಕೆಂಪುತೋಟ (ಲಾಲ್‌ಬಾಗ್‌) ಹಾಗೂ ಬ್ರಿಟಿಷ್‌ ಅಧಿಕಾರಿ ಲಾರ್ಡ್‌ ಕಬ್ಬನ್‌ ನಿರ್ಮಾಣ ಮಾಡಿರುವ ಕಬ್ಬನ್‌ ಪಾರ್ಕ್‌ಗಳು ವಿಶ್ವ ಮಟ್ಟದಲ್ಲಿ ತಮ್ಮದೇ ಆದ ಮಹತ್ವ ಪಡೆದುಕೊಂಡಿವೆ.

ಹೊರ ರಾಜ್ಯ ಹಾಗೂ ಹೊರದೇಶಗಳಿಂದ ಬೆಂಗ ಳೂರಿಗೆ ಆಗಮಿಸುವ ಪ್ರವಾಸಿಗರು ಈ ಎರಡೂ ಪಾರ್ಕ್‌ಗಳಲ್ಲಿ ಒಂದು ಸುತ್ತು ಹಾಕುವುದನ್ನು ಮರೆ ದಷ್ಟು ಪ್ರಾಮುಖ್ಯತೆ ಪಡೆದುಕೊಂಡಿವೆ. ಲಾಲ್‌ಬಾಗ್‌ ಸುಮಾರು 240 ಎಕರೆ ಪ್ರದೇಶ ವಿಸ್ತಾರ ಹೊಂದಿದ್ದು, ಮೈಸೂರು ಆಳಿದ ಹೈದರಾಲಿ ನಿರ್ಮಾಣ ಮಾಡಿದ್ದಾರೆ. ಕಬ್ಬನ್‌ಪಾರ್ಕ್‌ ಸುಮಾರು 171 ಎಕರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿದ್ದು ಈ ಉದ್ಯಾನವನ್ನು ಬ್ರಿಟಿಷ್‌ ಅಧಿಕಾರಿ ಲಾರ್ಡ್‌ ಕಬ್ಬನ್‌ ನಿರ್ಮಾಣ ಮಾಡಿದ್ದಾರೆ.

ಆದರೆ, ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು, ಇಷ್ಟು ವರ್ಷ ಕಳೆದರೂ, ಸ್ವಾತಂತ್ರ್ಯ ನಂತರದ ಯಾವ ಸರ್ಕಾ ರವೂ ಈ ಎರಡೂ ಉದ್ಯಾನಗಳಿಗೆ ಪರ್ಯಾಯ ಅಥವಾ ಇವುಗಳಿ ಗಿಂತಲೂ ಹೆಚ್ಚು ಆಕರ್ಷಣಿಯ ಉದ್ಯಾ ನವನವನ್ನು ಯಾರೂ ನಿರ್ಮಾಣ ಮಾಡಿಲ್ಲ ಎಂಬ ನೋವು ಮತ್ತು ಬೇಸರ ಹಾಲಿ ತೋಟಗಾರಿಕಾ ಸಚಿವ ಮುನಿರತ್ನ ಅವರಿಗೆ ಕಾಡುತ್ತಿದೆಯಂತೆ.

ಬೆಂಗಳೂರು ಉತ್ತರ ಭಾಗದಲ್ಲಿ ಪಾರ್ಕ್: ಅದೇ ಕಾರಣಕ್ಕೆ ಎರಡೂ ಪಾರ್ಕ್‌ ಗಳಿಗಿಂತಲೂ ದೊಡ್ಡದಾದ ಕನಿಷ್ಠ ಒಂದು ಎಕರೆ ಪ್ರದೇಶವಾದರೂ ಹೆಚ್ಚಿಗೆ ವಿಸ್ತೀರ್ಣ ಹೊಂದಿರುವ ಉದ್ಯಾನವನವನ್ನು ಬೆಂಗಳೂರಿನ ಉತ್ತರ ಭಾಗದಲ್ಲಿ ನಿರ್ಮಾಣ ತೋಟಗಾರಿಕಾ ಸಚಿವ ಮುನಿರತ್ನ ಯೋಜನೆ ರೂಪಿಸಿದ್ದಾರೆ. ಅದಕ್ಕಾಗಿ ಬೆಂಗಳೂರು ಉತ್ತರ ಭಾಗದಲ್ಲಿ ಕನಿಷ್ಠ 240 ಎಕರೆ ಪ್ರದೇಶಕ್ಕಿಂತಲೂ ಹೆಚ್ಚಿರುವ ಸರ್ಕಾರಿ ಗೋಮಾಳ ಅಥವಾ ಸರ್ಕಾರದ ಇತರ ಇಲಾಖೆ ವ್ಯಾಪ್ತಿಯಲ್ಲಿರುವ ಜಮೀನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಉತ್ತರ ಭಾಗದಲ್ಲಿರುವ ಯಲಹಂಕ, ನಂದಿಬೆಟ್ಟದ ತಪ್ಪಲು ಸೇರಿದಂತೆ ನಾಲ್ಕು ಕಡೆಗಳಲ್ಲಿ ಉದ್ಯಾನವನ ನಿರ್ಮಿಸಲು ಸ್ಥಳ ಗುರುತಿಸಲಾಗಿದೆ ಎಂದು ತಿಳಿದು ಬಂದಿದ್ದು, ಒಂದೆಡೆ ಅರಣ್ಯ ಇಲಾಖೆಗೆ ಸೇರಿದ ಸುಮಾರು 600 ಎಕರೆ ಪ್ರದೇಶ ಲಭ್ಯವಿದೆ ಎಂದು ತಿಳಿದು ಬಂದಿದ್ದು, ಅದರಲ್ಲಿ ಸುಮಾರು 300 ಎಕರೆ ಪ್ರದೇಶವನ್ನು ಪಾರ್ಕ್‌ ನಿರ್ಮಾಣಕ್ಕೆ ಬಳಸಿಕೊಂಡು, ಅದಕ್ಕೆ ಪರ್ಯಾಯವಾಗಿ ಅರಣ್ಯ ಇಲಾಖೆಯಿಂದ ಪಡೆದುಕೊಂಡ ಜಮೀನಿನ ಎರಡ ರಷ್ಟು ಅಂದರೆ ಸುಮಾರು 600 ಎಕರೆ ಸರ್ಕಾರಿ ಜಮೀ ನನ್ನು ಅರಣ್ಯ

ಇಲಾಖೆಗೆ ಬಿಟ್ಟು ಕೊಡುವ ಬಗ್ಗೆಯೂ ತೋಟಗಾರಿಕೆ ಇಲಾಖೆ ಆಲೋಚನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತಂತೆ ಅರಣ್ಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಮೂಲಗಳು ತಿಳಿಸಿವೆ.

ನಾಲ್ವಡಿ ಕೃಷ್ಣರಾಜ ಒಡೆಯರ್ಹೆಸರು?

ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ಅಜರಾಮರವಾಗಿಸಲು ಹೊಸದಾಗಿ ನಿರ್ಮಾಣ ಮಾಡುವ ಪಾರ್ಕ್‌ಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪಾರ್ಕ್‌ ಎಂದು ನಾಮಕರಣ ಮಾಡಲು ಸಚಿವ ಮುನಿರತ್ನ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ವಾತಂತ್ರ್ಯ ಪೂರ್ವದಲ್ಲಿ ಎರಡು ಪಾರ್ಕ್‌ಗಳು ನಿರ್ಮಾಣವಾಗಿವೆ. ಆದರೆ, ಸ್ವಾತಂತ್ರ್ಯ ಬಂದ ನಂತರ ನಮ್ಮದು ಎಂದು ಹೇಳಿಕೊಳ್ಳಲು ಯಾವ ಸರ್ಕಾರವೂ ಪಾರ್ಕ್‌ ನಿರ್ಮಾಣ ಮಾಡಿಲ್ಲ. ಹೀಗಾಗಿ ಲಾಲ್‌ಬಾಗ್‌ ಮತ್ತು ಕಬ್ಬನ್‌ ಪಾರ್ಕ್‌ಗಿಂತ ದೊಡ್ಡದಾದ ಪಾರ್ಕ್‌ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ.

ಮುನಿರತ್ನ, ತೋಟಗಾರಿಕಾ ಸಚಿವ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.