ಭ್ರಷ್ಟರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿಗೆ ಕಾಲಮಿತಿ


Team Udayavani, Apr 4, 2017, 3:45 AM IST

High-court-Karnataka-New.jpg

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟರಿಗೆ ಶಿಕ್ಷೆ ತಪ್ಪಿಸಲು ಮತ್ತು ದಕ್ಷ ಅಧಿಕಾರಿಗಳಿಗೆ ಆಯಕಟ್ಟಿನ ಹುದ್ದೆ ದೊರಕದಂತೆ ನೋಡಿಕೊಳ್ಳುತ್ತಿರುವ ಪ್ರಯತ್ನಗಳಿಗೆ ನ್ಯಾಯಾಲಯದ ಆದೇಶ ಈಗ ಬಿಸಿ ಮುಟ್ಟಿಸಿದೆ…!

ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾದರೆ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಬಗ್ಗೆ 3  ತಿಂಗಳಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂಬ ತನ್ನ ಆದೇಶವನ್ನೇ ಸರ್ಕಾರ ಪಾಲಿಸುತ್ತಿರಲಿಲ್ಲ. ಇನ್ನೊಂದೆಡೆ, ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವಾಗ ಯಾವುದೇ ಕಾರಣಕ್ಕೂ ಹುದ್ದೆ ರಹಿತವಾಗಿ ಅವರನ್ನು ಇಡುವಂತಿಲ್ಲ ಎಂಬ ಆದೇಶವೂ ಅನೇಕ ಸಂದರ್ಭದಲ್ಲಿ ದಕ್ಷ ಅಧಿಕಾರಿಗಳ ಪಾಲಿಗೆ ಅನ್ವಯವಾಗುತ್ತಿರಲಿಲ್ಲ.

ಆದರೆ, ಇದೀಗ ಕೋರ್ಟ್‌ ಆದೇಶದ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದೆ. ಭ್ರಷ್ಟಾಚಾರದಲ್ಲಿ ಸಿಲುಕಿದ ಸರ್ಕಾರಿ ನೌಕರರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವನ್ನು ಮೂರು ತಿಂಗಳೊಳಗೆ ಇತ್ಯರ್ಥಪಡಿಸಬೇಕು. ಹಾಗೆಯೇ ವರ್ಗಾವಣೆ ಸಂದರ್ಭದಲ್ಲಿ ಹುದ್ದೆಗಳನ್ನು ಕಡ್ಡಾಯವಾಗಿ ನಿಗದಿಪಡಿಸುವ ಕುರಿತಂತೆ ಇರುವ ಸರ್ಕಾರಿ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿರುವ ಸರ್ಕಾರ, ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಪ್ರಕರಣ-1
ಸುಪ್ರೀಂ ಕೋರ್ಟ್‌ ಆದೇಶದಂತೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಪ್ರಕರಣ 19 ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973ರ ಪ್ರಕರಣ 197ರ ಅಡಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿಕೊಂಡ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಮೊಕದ್ದಮೆ ಹೂಡಲು (ಪ್ರಾಸಿಕ್ಯೂಷನ್‌) ಅನುಮತಿ ನೀಡುವ ಬಗ್ಗೆ 3 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರ 2001 ಮತ್ತು 2015ರಲ್ಲಿ 2 ಬಾರಿ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶ ಕೇವಲ ಕಡತಗಳಿಗೆ ಸೀಮಿತವಾಗಿತ್ತೇ ಹೊರತು ಬಹುತೇಕ ಪ್ರಕರಣಗಳಲ್ಲಿ ಅದರಲ್ಲೂ ಅಧಿಕಾರಿಗಳ ಮಟ್ಟದಲ್ಲಿ ಜಾರಿಯಾಗುತ್ತಲೇ ಇರಲಿಲ್ಲ.

ಈ ಮಧ್ಯೆ ಡಾ.ವಿ.ಎಲ್‌.ನಂದೀಶ್‌ ವಿರುದ್ಧ ಲೋಕಾಯುಕ್ತರು ದಾಖಲಿಸಿದ್ದ ಪ್ರಕರಣದ ವಿಚಾರಣೆ ವೇಳೆ ಈ ಅಂಶವನ್ನು ಹೈಕೋರ್ಟ್‌ ಗಮನಕ್ಕೆ ತಂದಿದ್ದ ಲೋಕಾಯುಕ್ತ ಪರ ವಕೀಲರು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಬಗ್ಗೆ ಸ್ಪಷ್ಟ ಆದೇಶವಿದ್ದರೂ ಅದನ್ನು ಸರ್ಕಾರ ಪಾಲಿಸುತ್ತಿಲ್ಲ. ಇದರಿಂದ ಲೋಕಾಯುಕ್ತದಲ್ಲಿ ನೂರಾರು ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿವೆ ಎಂದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್‌, ಕಳೆದ ಮಾ.9ರಂದು ಮಧ್ಯಂತರ ಆದೇಶ ನೀಡಿ, ಸುಪ್ರೀಂಕೋರ್ಟ್‌ನ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು. ಅದರಂತೆ ಇತ್ತೀಚೆಗೆ ಆದೇಶ ಹೊರಡಿಸಿರುವ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಅಧಿಕಾರಿಗಳು, ನೌಕರರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ವಿಧಿಸಿರುವ 3 ತಿಂಗಳ ಕಾಲಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಪ್ರಕರಣ-2
ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ 2013ರಲ್ಲಿ ಆದೇಶ ಹೊರಡಿಸಿದ್ದ ಸರ್ಕಾರ, ವರ್ಗಾವಣೆ ಅಥವಾ ನಿಯೋಜನೆ ಮೇಲೆ ಅಧಿಕಾರಿಗಳನ್ನು ಕಳುಹಿಸುವಾಗ ಯಾವುದೇ ಕಾರಣಕ್ಕೂ ಹುದ್ದೆರಹಿತವಾಗಿರಬಾರದು. ನಿಗದಿತ ಹುದ್ದೆಯೊಂದಿಗೆ ಆತನನ್ನು ನಿಯೋಜಿಸಬೇಕು ಎಂದು ಹೇಳಿತ್ತು. ಒಂದು ವೇಳೆ ಹುದ್ದೆ ತೋರಿಸದಿದ್ದಲ್ಲಿ ಅದಕ್ಕೆ ಲಿಖೀತ ಕಾರಣಗಳನ್ನು ನೀಡಬೇಕು ಎಂದೂ ಸ್ಪಷ್ಟಪಡಿಸಿತ್ತು. ಈ ಕುರಿತು ಎಚ್ಚರಿಸುವ 2017ರಲ್ಲಿ ಸುತ್ತೋಲೆ ಪ್ರಕಟಿಸಿತ್ತು.

ಹೀಗಿದ್ದರೂ ಸರ್ಕಾರದ ಆದೇಶ ಪಾಲನೆಯಾಗುತ್ತಿರಲಿಲ್ಲ. ಅದರಲ್ಲೂ ದಕ್ಷ ಅಧಿಕಾರಿಗಳನ್ನು ಹುದ್ದೆ ತೋರಿಸದೆ ವರ್ಗಾವಣೆ ಮಾಡಲಾಗುತ್ತಿತ್ತು. ಕೆಲವರಂತೂ ತಿಂಗಳುಗಟ್ಟಲೆ ಯಾವುದೇ ಹುದ್ದೆ ಅಥವಾ ಕೆಲಸ ಇಲ್ಲದೆ ಇರಬೇಕಿತ್ತು. ಇತ್ತೀಚೆಗೆ ಈ ಅಂಶ ಹೈಕೋರ್ಟ್‌ ಗಮನಕ್ಕೆ ಬಂದಾಗ, ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಮತ್ತೂಂದು ಸುತ್ತೋಲೆ ಹೊರಡಿಸಿರುವ ಸರ್ಕಾರ, ಅಧಿಕಾರಿ, ನೌಕರರ ವರ್ಗಾವಣೆ ಅಥವಾ ನಿಯೋಜನೆ ಸಂದರ್ಭದಲ್ಲಿ ಅವರಿಗೆ ಕಡ್ಡಾಯವಾಗಿ ಹುದ್ದೆಗಳನ್ನು ನಿಗದಿಪಡಿಸಬೇಕು. ಹುದ್ದೆಗಳನ್ನು ನಿಗದಿಪಡಿಸದೇ ಇದ್ದಲ್ಲಿ ಅದಕ್ಕೆ ಲಿಖೀತ ಕಾರಣ ಕೊಡಬೇಕು. ಒಂದು ವೇಳೆ ಹುದ್ದೆ ನಿಗದಿಪಡಿಸದೇ ಇದ್ದಲ್ಲಿ ಅಥವಾ ಲಿಖೀತ ಕಾರಣ ಕೊಡದೇ ಇದ್ದಲ್ಲಿ ಅಂತಹ ಅಧಿಕಾರಿ, ನೌಕರ ತನ್ನ ಇಲಾಖಾ ಮುಖ್ಯಸ್ಥರನ್ನು ಭೇಟಿಯಾಗಿ ವಿಷಯ ಗಮನಕ್ಕೆ ತರಬೇಕು. ಇಲಾಖಾ ಮುಖ್ಯಸ್ಥರು ಆ ಅಧಿಕಾರಿ, ನೌಕರನಿಗೆ ಹುದ್ದೆ ನೀಡಬೇಕು. ಇಲ್ಲದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ
ಸಾಮಾನ್ಯವಾಗಿ ಸರ್ಕಾರದ ಆದೇಶ ಜಾರಿಯಾಗದೇ ಇದ್ದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತದೆ. ಅಂತಹ ಸಂದರ್ಭದಲ್ಲಿ ನ್ಯಾಯಾಲಯ ಆದೇಶ ಪಾಲಿಸಲು ನಿರ್ದೇಶನ ನೀಡಿದಾಗ ಅದನ್ನು ಪಾಲಿಸದೇ ಇದ್ದಲ್ಲಿ ನ್ಯಾಯಾಂಗ ನಿಂದನೆ ಆರೋಪ ಎದುರಿಸಬೇಕಾಗುತ್ತದೆ. ಇದೀಗ ಕೋರ್ಟ್‌ ನಿರ್ದೇಶನದ ಹಿನ್ನೆಲೆಯಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿರುವುದು ಮತ್ತು ವರ್ಗಾವಣೆ ಸಂದರ್ಭದಲ್ಲಿ ಸರ್ಕಾರಿ ನೌಕರ, ಅಧಿಕಾರಿಗಳಿಗೆ ಹುದ್ದೆಗಳನ್ನು ಕಡ್ಡಾಯವಾಗಿ ನೀಡಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಲಾಗಿದ್ದು, ಅದರಲ್ಲಿ ಕೋರ್ಟ್‌ ಆದೇಶದ ಬಗ್ಗೆಯೂ ಉಲ್ಲೇಖೀಸಿರುವುದರಿಂದ ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಹೀಗಾಗಿ ಈ ಆದೇಶಗಳನ್ನು ಪಾಲಿಸಲೇ ಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಿರಿಯ ಅಧಿಕಾರಿ ಹೇಳುತ್ತಾರೆ.

– ಪ್ರದೀಪ್‌ ಕುಮಾರ್‌ ಎಂ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.