Prostitution:”ಸ್ಪಾ’ ಹೆಸರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ

Team Udayavani, Jan 8, 2024, 1:25 PM IST

Prostitution:”ಸ್ಪಾ’ ಹೆಸರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ

ಬೆಂಗಳೂರು: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದು, ಸ್ಪಾ ಮಾಲೀಕ ಅನಿಲ್‌ ಸೇರಿ 34 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಗೆಯೇ 44 ಮಂದಿ ಮಹಿಳೆಯರು ಹಾಗೂ ಯುವತಿಯರನ್ನು ರಕ್ಷಿಸಿದ್ದಾರೆ. ಮತ್ತೂಂದೆಡೆ ಈ ದಂಧೆಗೆ ಮಹಿಳಾ ಎಸಿಪಿಯೊಬ್ಬರ ಕುಮ್ಮಕ್ಕು ಇದೆ ಎಂದು ಹೇಳಲಾಗಿದೆ.

ಹೀಗಾಗಿ ಇದೇ ಮೊದಲ ಬಾರಿಗೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಎಆರ್‌ ಡಿಸಿಪಿ ಅವರಿಗೆ ನೀಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆ.ಆರ್‌.ಪುರದ ಟಿನ್‌ ಫ್ಯಾಕ್ಟರಿ ಬಳಿಯ ಹಳೇ ಮದ್ರಾಸ್‌ ರಸ್ತೆಯಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಿರ್ವಾನ ಇಂಟರ್‌ ನ್ಯಾಷನಲ್‌ ಸ್ಪಾ ಪ್ರೈವೇಟ್‌ ಲಿಮಿಟೆಡ್‌ನ‌ಲ್ಲಿ ಕಳೆದ ಐದು ವರ್ಷಗಳಿಂದ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ಶನಿವಾರ ದಾಳಿ ನಡೆಸಲಾಗಿದೆ. ದೆಹಲಿ, ಕೊಲ್ಕೋತ್ತಾ, ಮುಂಬೈ ಹಾಗೂ ಥೈಲ್ಯಾಂಡ್‌ನ‌ 40 ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಪಾ ಮಾಲೀಕ ಅನಿಲ್‌, ವಿದೇಶದಿಂದ ಹಾಗೂ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವುದು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ನಾಲ್ಕು ಗಂಟೆಗೂ ಹೆಚ್ಚಿನ ಸಮಯ ಪರಿಶೀಲನೆ ಮಾಡಲಾಯಿತು ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.

ಆರೋಪಿ ಅನಿಲ್‌ ಹೊರ ರಾಜ್ಯದಿಂದ ನಗರಕ್ಕೆ ಬಂದು, ಹಳೇ ಮದ್ರಾಸ್‌ ರಸ್ತೆಯ ಬಹುಮಹಡಿ ಕಟ್ಟಡದ 1 ಮತ್ತು 6ನೇ ಮಹಡಿಯಲ್ಲಿ ಸ್ಪಾ ನಡೆಸುತ್ತಿದ್ದ. ಕಟ್ಟಡದ ಹೊರಗೆ ಸ್ಪಾ ಎಂದು ಬೋರ್ಡ್‌ ಹಾಕಿ, ಒಳಗೆ ಅನೈತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ. ಒಟ್ಟು 34 ಕೊಠಡಿಗಳನ್ನು ಒಳಗೊಂಡ ಬಹುಮಹಡಿ ಕಟ್ಟಡದಲ್ಲಿ ಹಲವು ವರ್ಷಗಳಿಂದ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು.

ವಿದೇಶಿ ಮಾದರಿಯಲ್ಲಿ ಕೋಣೆಗಳನ್ನು ವಿನ್ಯಾಸಗೊಳಿಸಿ ಮಸಾಜ್‌ ಹೆಸರಿನಲ್ಲಿ ಅನಿಲ್‌ ದಂಧೆ ನಡೆಸುತ್ತಿದ್ದ ಎಂಬುದು ಗೊತ್ತಾಗಿದೆ. ಆರೋಪಿ ಅನಿಲ್‌ನಿಂದ ಐಷಾರಾಮಿ ಕಾರು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಎಆರ್‌ ಡಿಸಿಪಿ ಹೆಗಲಿಗೆ ತನಿಖೆ?: ಸ್ಪಾ ಮೇಲೆ ದಾಳಿ ನಡೆಸಿದಾಗ, ಅದರ ಮಾಲೀಕನಿಗೆ ಮಹಿಳಾ ಎಸಿಪಿಯೊಬ್ಬರ ಪತಿಯ ಕುಮ್ಮಕ್ಕು ಇರುವುದು ಗೊತ್ತಾಗಿತ್ತು. ಜತೆಗೆ ಕೆಲ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂಬ ಬಗ್ಗೆ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಕೇಂದ್ರ ವಿಭಾಗದ ಸಿಎಆರ್‌ ಡಿಸಿಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ಸದ್ಯ ಮಾರತ್ತಹಳ್ಳಿ ಎಸಿಪಿ ನೇತೃತ್ವದಲ್ಲಿ ತನಿಖೆ ಮುಂದುವರಿದೆ ಎಂದು ಮೂಲಗಳು ತಿಳಿಸಿವೆ.

ದಂಧೆಗೆ ಎಸಿಪಿ ಪತಿಯ ಕುಮ್ಮಕ್ಕು? : ನಿರ್ವಾನ ಇಂಟರ್‌ ನ್ಯಾಷನಲ್‌ ಸ್ಪಾ ವಹಿವಾಟಿಗೆ ಮಹಿಳಾ ಎಸಿಪಿಯೊಬ್ಬರ ಪತಿಯ ಕುಮ್ಮಕ್ಕು ಇದೆ ಎಂದು ಹೇಳಲಾಗಿದೆ. ಎಸಿಪಿ ಪತಿ ಸ್ಪಾ ಅವರಿಂದ ಮಾಮೂಲಿ ವಸೂಲಿ ಮಾಡುತ್ತಿದ್ದರು. ಅವರ ಕುಮ್ಮಕ್ಕಿನಿಂದಲೇ ಅನಿಲ್‌ ಅಕ್ರಮ ದಂಧೆ ನಡೆಸುತ್ತಿದ್ದ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ಗಂಭೀರವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.