ಬಿಬಿಎಂಪಿ ವಿರುದ್ಧ ಬಕೆಟ್ ಹಿಡಿದು ಪ‹ತಿಭಟನೆ
Team Udayavani, Nov 20, 2019, 10:55 AM IST
ಬೆಂಗಳೂರು: ಬಿಬಿಎಂಪಿಯ ಅಧಿಕಾರಿಗಳು ರಾಜಕಾಲುವೆ ಒತ್ತುವರಿ ತೆರವು ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆಯ ಸದಸ್ಯರು ಟೌನ್ ಹಾಲ್ ಮುಂಭಾಗದಲ್ಲಿ ಮಂಗಳವಾರ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರವೇ ರಕ್ಷಣಾ ವೇದಿಕೆ ಯುವಸೇನೆಯ ರಾಜ್ಯಧ್ಯಕ್ಷ ಹರೀಶ್, ಬಿಬಿಎಂಪಿಯ ಅಧಿಕಾರಿಗಳು ಶ್ರೀಮಂತರು ಮತ್ತು ವಿವಿಧ ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗುತ್ತಿಲ್ಲ. ಅಧಿಕಾರಿಗಳು ರಾಜಕಾಲುವೆ ಒತ್ತುವರಿ ಮಾಡಿಕೊಳ್ಳುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳದೆ ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ಮೇಲೆ ಬಿಬಿಎಂಪಿಯ ಮೇಯರ್ ಹಾಗೂ ಆಯುಕ್ತರು ಕ್ರಮ ತೆಗೆದುಕೊಳ್ಳದೆ ಇರುವುದನ್ನು ನೋಡಿದರೆ, ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆಯೇ ಎನ್ನುವ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ