ಸಿಸಿಬಿ ಕಚೇರಿ ಎದುರು ಪ್ರತಿಭಟನೆ

Team Udayavani, Jun 13, 2019, 3:00 AM IST

ಬೆಂಗಳೂರು: ಐಎಂಎ ಸಂಸ್ಥೆಯ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಎಐಎಂಎಂಎಸ್‌ ವೆಂಚರ್ಸ್‌ ಕಂಪನಿಯಿಂದ ವಂಚನೆಗೊಳಗಾಗಿರುವ ಹೂಡಿಕೆದಾರರು ಬುಧವಾರ ಸಿಸಿಬಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನೂರಕ್ಕೂ ಹೆಚ್ಚು ಮಂದಿ ಹೂಡಿಕೆದಾರರು ಸಿಸಿಬಿ ಕಚೇರಿ ಎದುರು ಜಮಾಯಿಸಿ ಪೊಲೀಸರು ಹಾಗೂ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸಿಸಿಬಿ ಪೊಲೀಸರು ಹೀಗಾಗಲೇ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಜಾಮೀನು ಪಡೆದು ಹೊರಗಡೆ ಬಂದಿದ್ದಾರೆ.

ಆದರೆ ಇದುವರೆಗೂ ಯಾರಿಗೂ ಹಣ ವಾಪಸ್‌ ಬಂದಿಲ್ಲ. ಹೀಗಾಗಿ ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಸ್ಥಳಕ್ಕೆ ಬರುವವರೆಗೂ ಹೋಗುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ನಂತರ ಸ್ಥಳಕ್ಕೆ ಬಂದ ಸಿಸಿಬಿ ಎಸಿಪಿ ಲಕ್ಷ್ಮಿನಾರಾಯಣ್‌ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ, ಮನವೊಲಿಸಿ ಸ್ಥಳದಿಂದ ಕಳುಹಿಸಿದರು.

ಆರೋಪಿತ ಸಂಸ್ಥೆ ಎಐಎಂಎಂಎಸ್‌ ವೆಂಚರ್ಸ್‌ ಲಕ್ಷಕ್ಕೆ ಶೇ.10 ರಷ್ಟು ಲಾಭಾಂಶ ಕೊಡುವುದಾಗಿ ಹಣ ಪಡೆದು ವಂಚಿಸಿದೆ. ನೂರಾರು ಜನರಿಗೆ ಸುಮಾರು 14 ಕೋಟಿಯಷ್ಟು ವಂಚನೆ ಮಾಡಿದೆ ಎಂದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ