ಹಗರಣಗಳು ಹೊರ ಬರುವ ಭಯಕ್ಕೆ ಪ್ರತಿಭಟನೆ’
Team Udayavani, Aug 19, 2017, 5:45 AM IST
ಬೆಂಗಳೂರು: “ಬಿಜೆಪಿಯವರು ತಮ್ಮ ಆಡಳಿತಾವಧಿಯಲ್ಲಿ ಮಾಡಿರುವ ಹಗರಣಗಳು ಹೊರ ಬರುವ ಆತಂಕದಿಂದ ಪಾರಾಗಲು ಪ್ರತಿಭಟನೆ ನಡೆಸಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ದೇಶದಲ್ಲಿಯೇ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದ ಬಿಜೆಪಿಯ ಪ್ರಥಮ ಮುಖ್ಯಮಂತ್ರಿ ಯಡಿಯೂರಪ್ಪ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ್ದಾರೆ.
“ಯಡಿಯೂರಪ್ಪ, ಈಶ್ವರಪ್ಪ, ಆರ್. ಅಶೋಕ್, ಶೋಭಾ ಕರಂದ್ಲಾಜೆ, ಸಿ.ಟಿ. ರವಿ ತಮ್ಮ ಆಡಳಿತಾವಧಿಯಲ್ಲಿ ಮಾಡಿರುವ ಹಗರಣಗಳು ಹೊರ ಬರುವ ಆತಂಕದಿಂದ ಅವುಗಳನ್ನು ಮರೆ ಮಾಚಲು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಯಡಿಯೂರಪ್ಪ
ವಿರುದ್ಧ ಎಸಿಬಿಯಲ್ಲಿ ಖಾಸಗಿ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಸ್ತುಸ್ಥಿತಿ ಪರಿಗಣಿಸಿ ತನಿಖೆ ನಡೆಸುತ್ತಿದೆ. ಅವರು ತಪ್ಪು ಮಾಡಿಲ್ಲ ಎಂದ ಮೇಲೆ ಭಯ ಏಕೆ’ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…